ಮಗ್ಗಿ

ಮತ್ತೊಮ್ಮೆ ಭೇಟಿ ನೀಡಲು vktworld ಎಂದು search ಮಾಡಿ ~~~ vktworld

2.7.16

PDO ನೇಮಕಾತಿ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 1ರ 1624 ಹುದ್ದೆಗಳ ನೇರ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಇದೇ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಕೆಪಿಎಸ್ಸಿ ಬದಲಾಗಿ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿದೆ. ಈಗಾಗಲೇ ಇಲಾಖೆಯಿಂದ ಪ್ರಾಧಿಕಾರಕ್ಕೆ ಸೂಚನಾ ಪತ್ರ ಹೋಗಿದ್ದು, ಸದ್ಯದಲ್ಲೇ ಪರೀಕ್ಷಾ ವೇಳಾಪಟ್ಟಿ ಹಾಗೂ ಅರ್ಜಿ ಸಲ್ಲಿಕೆಯ ವಿವರ ಪ್ರಕಟವಾಗಲಿದೆ.
ಆರ್ಥಿಕ ಇಲಾಖೆಯು 2014ರಲ್ಲಿ 952 ಹುದ್ದೆಗಳಿಗೆ ಅನುಮೋದನೆ ನೀಡಿತ್ತು. 2015ರಲ್ಲಿ 439 ಹೊಸ ಗ್ರಾಪಂ ಗಳನ್ನು ಸೃಜಿಸಿದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದಲ್ಲಿ 439, ಗ್ರಾಪಂ ಕಾರ್ಯದರ್ಶಿ ಗ್ರೇಡ್ 1 ವೃಂದದಲ್ಲಿ 75 ಹುದ್ದೆ ಸೃಜಿಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿತ್ತು. ಇದರಿಂದ ನೇಮಕಾತಿ ಕೋಟದಲ್ಲಿ ಒಟ್ಟು 638 ಪಿಡಿಒ ಹಾಗೂ 638 ಗ್ರಾಪಂ ಕಾರ್ಯದರ್ಶಿ ಗ್ರೇಡ್ 1 ಹುದ್ದೆಗಳು ಸೃಷ್ಟಿಯಾಗಿದೆ. ಹೈ.ಕ. ಪ್ರದೇಶದ ಜಿಲ್ಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಅವಶ್ಯಕತೆಯಿಲ್ಲದಿರುವುದರಿಂದ ಈ ಹುದ್ದೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ 348 ಹುದ್ದೆ ಭರ್ತಿಮಾಡ ಬಹುದಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ತಿಳಿಸಿದೆ.
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ 500 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ 300 ರೂ. ಸಂಗ್ರಹಿಸಲು ಪ್ರಾಧಿಕಾರ ತೀರ್ವನಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು 2016ರ ಸೆಪ್ಟೆಂಬರ್ನಲ್ಲಿ ನಡೆಸಿ ಅಕ್ಟೋಬರ್ ಎರಡನೇ ವಾರದೊಳಗೆ ಅಂತಿಮ ಆಯ್ಕೆ ಪಟ್ಟಿ ನೀಡುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ.
ಕೆಪಿಎಸ್ಸಿಯಿಂದ ಇನ್ನೊಂದು ಇಲಾಖೆ ದೂರ
ಈ ಹಿಂದೆ ಕೆಪಿಎಸ್ಸಿ ಮೂಲಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಯುತ್ತಿತ್ತು. ಬಿಜೆಪಿ ಅಧಿಕಾರಾವಧಿಯಲ್ಲಿ ನೇಮಕ ಪ್ರಕ್ರಿಯೆಯಲ್ಲಿ ಅಕ್ರಮಗಳು ಕಂಡು ಬಂದರೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕ ನಡೆದಿತ್ತು. ಹೀಗಾಗಿ ಈ ಬಾರಿ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಲು ನಿರ್ಧರಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಪ್ರಚಲಿತ ಪೋಸ್ಟ್‌ಗಳು