ವಿದ್ಯಾಸಿರಿ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಲಾಗಿರುವ ವಿದ್ಯಾಸಿರಿ ಸೇರಿದಂತೆ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅ. 16 ರವರೆಗೆ ವಿಸ್ತರಿಸಲಾಗಿದೆ.
ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಸೆ. 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ಕಾಲೇಜುಗಳಲ್ಲಿ ಇನ್ನೂ ವಿವಿಧ ಕೋರ್ಸ್ಗಳಲ್ಲಿ ಪ್ರವೇಶ ಪ್ರಕ್ರಿಯೆ ನಡೆಯುತ್ತಿರುವುದರಿಂದ, ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಮನವಿ ಬಂದ ಹಿನ್ನೆಲೆಯಲ್ಲಿ, ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಅ. 16 ರವರೆಗೆ ವಿಸ್ತರಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು karepass.cgg.gov.in ಹಾಗೂ www.backwardclasses.kar.nic.in ವೆಬ್ಸೈಟ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್- 9480818016 ಅಥವಾ ಸಹಾಯವಾಣಿ- 080-44554444 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ