8.3.17

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

✍🏻 *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ವಿಶೇಷ*🌹🌹

_ಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ._

✍🏻 *ಪೀಠಿಕೆ*

*ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ "ಅಂತರಾಷ್ಟ್ರೀಯ ಮಹಿಳೆಯರ ದಿನ" ವನ್ನ ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ , ಅದು ರಾಷ್ತ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲು ತಮ್ಮದೆ ಆದ ಛಾಪನ್ನ ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ. ೧೯೭೫ರ "ಅಂತರಾಷ್ಟ್ರೀಯ ಮಹಿಳೆಯರ ದಿನ"ದ ಸಮಯದಲ್ಲಿ, ಮಾರ್ಚ್ ೮ ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನವನ್ನ ಆಚರಿಸಲು ಆರಂಭಿಸಿದವು.ಎರಡು ವರ್ಷದ ನಂತರ,೧೯೭೭ ರಲ್ಲಿ, "ದಿ ಜನರಲ್ ಅಸ್ಸೆಂಬ್ಲಿ" ಮಹಿಳೆಯರ ಹಕ್ಕು ಮತ್ತು ಶಾಂತಿ ಸ್ಥಾಪನೆಯನ್ನು ಆಯಾ ದೇಶದ ಸದಸ್ಯರು ಗಮನಿಸಿ ತಮ್ಮ ದೇಶದ ಐತಿಹಾಸಿಕ ಮತ್ತು ರಾಷ್ಟ್ರೀಯ ಸಂಪ್ರದಾಯಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವಂತೆ ಕರೆ ನೀಡಿತು. ಹೀಗೆ ಕರೆನೀಡುವಾಗ ಮಹಿಳೆಯ ಪಾತ್ರ ಹಾಗು ಅವರ ಮೇಲೆ ನಡೆಯುತ್ತಿರುವ ಪಕ್ಷಪಾತವನ್ನು ಗಮನಿಸಿ ಅವರಿಗೆ ಸ್ಪರ್ಧಿಸುವ ಪೂರ್ತಿ ಅವಕಾಶವನ್ನು ನೀಡುವಂತೆ ಘೋಷಿಸಿತು.*
🙏 *ಇತಿಹಾಸ*🙏

*"ಅಂತರಾಷ್ಟ್ರೀಯ ಮಹಿಳೆಯರ ದಿನ" ಮೊದಲ ಬಾರಿಗೆ ಹೊರಹೊಮ್ಮಿದ್ದು ಕೂಲಿ ಚಳುವಳಿ(ಲೇಬರ್ ಮೊವ್ಮೆಂಟ್ಸ್) ಚಟುವಟಿಕೆ ಉತ್ತರ ಅಮೆರಿಕಮತ್ತು ಯೂರೋಪ್ ಪ್ರದೇಶಗಳಲ್ಲಿ ನಡೆದಾಗ. ೧೯೦೯: ಸಂಯುಕ್ತ ಸಂಸ್ಥಾನಗಳಲ್ಲಿ ಮೊದಲ "ಅಂತ ರಾಷ್ಟ್ರೀಯ ಮಹಿಳೆಯರ ದಿನ"ಫೆಬ್ರವರಿ ೨೮ ರಂದು ಕಂಡು ಬಂತು.ಅಮೇರಿಕಾದ ಸಾಮಾಜವಾದಿ ಪಕ್ಷ ಈ ದಿನವನ್ನ ಕೆಲಸದ ಪರಿಸ್ಥಿತಿಯನ್ನ ವಿರೋಧಿಸಿ ನ್ಯುಯಾರ್ಕ್ ನಗರದಲ್ಲಿ ನಡೆದ "ಸರ್ಕಾರಿ ಕಾರ್ಮಿಕರ ಚಳುವಳಿ" ಯಲ್ಲಿ ಪ್ರತಿಭಟಿಸಿದ ಮಹಿಳೆಯರಿಗೆ ಅರ್ಪಿಸಲಾರಿತು. ೧೯೧೦: ಅಂತರಾಷ್ಟ್ರೀಯ ಸಮಾಜವಾದಿ ಕೊಪೆಂಹಗೆನ್ ನಲ್ಲಿ ನಡೆದ ಚರ್ಚೆಯಲ್ಲಿ ಅದಿಷ್ಟಿತಗೊಳಿಸಲಾಯಿತು. ಈ ಪ್ರಸ್ಥಾಪವನ್ನು ಅವಿರೋಧವಾಗಿ ೧೦೦ ಮಹಿಳೆಯರು ೧೭ ದೇಶಗಳಿಂದ ಸಹಕರಿಸಿದರು, ಇದು ಫಿನ್ನಿಷ್ ಪಾರ್ಲಿಮೆಂಟ್ ಗೆ ಆಯ್ಕೆಯಾದ ಮೊದಲ ಮೂವರು ಮಹಿಳೆಯರನ್ನೂ ಸಹ ಒಳಗೊಂಡಿತ್ತು.೧೯೧೧: ಕೊಪೆಂಹಗೆನ್ ನ ಮೊದಲ ಹೆಜ್ಜೆಯ ಫಲಿತಾಂಶವಾಗಿ, ಅಂತರಾಷ್ಟ್ರೀಯ ಮಹಿಳೆಯರ ದಿನವನ್ನ ಮೊದಲ ಬಾರಿಗೆ ಮಾರ್ಚ್ ೧೯ ರಂದು ಆಸ್ಟ್ರೇಲಿಯ,ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಡ್ಜರ್ಲ್ಯಾಂಡ್ ದೇಶಗಳು ಗುರುತಿಸಿದವು. ಅಂದು ಒಂದು ಮಿಲಿಯನ್ ಗಿಂತಲು ಹೆಚ್ಹು ಮಹಿಳೆಯರು ಹಾಗು ಪುರುಷರು ಈ ಚಳುವಳಿಯಲ್ಲಿ ಭಾಗವಹಿಸಿದರು.*

*ಇದಲ್ಲದೇ ಮತಚಲಾಯಿಸುವ ಹಕ್ಕು, ಸಾರ್ವಜನಿಕ ಕಛೇರಿ, ಮಹಿಳೆಯರಿಗೆ ಕೆಲಸ ಮಾಡುವ ಹಕ್ಕು ಹಾಗು ಉದ್ಯೋಗ ತರಬೇತಿಯನ್ನ ಜಾರಿಗೆ ತರಲು ಬೇಡಿಕೆಯಿಟ್ಟಿದ್ದಲ್ಲದೇ ಕೆಲಸದಲ್ಲಿನ ತಾರತಮ್ಯವನ್ನ ವಿರೋಧಿಸಿ ಪ್ರತಿಭಟಿಸಿದರು. ೧೯೧೩-೧೯೧೪ : ಅಂತರಾಷ್ಟ್ರೀಯ ಮಹಿಳೆಯರ ದಿನದ ಆಚರಣೆ "೧ನೇ ವಿಶ್ವ ಯುದ್ಧ"ವನ್ನ ತಡೆಗಟ್ಟುವ ಯಾಂತ್ರಿಕ ಕೌಶಲ್ಯವಾಗಿ ಮಾರ್ಪಟ್ಟಿತು.ಇದೇ ವೇಳೆಯಲ್ಲಿ ಶಾಂತಿ ಚಳುವಳಿಯ ಅಂಗವಾಗಿ ರಷ್ಯಾದ ಮಹಿಳೆಯರು ಫೆಬ್ರವರಿಯ ಕೊನೆಯವಾರದಲ್ಲಿ ವಿಶ್ವ ಮಹಿಳಾ ದಿನವನ್ನ ಆಚರಿಸಿ ಗಮನಸೆಳೆದರು. ಅತ್ತ ಯುರೋಪಿನಲ್ಲಿ ಅದೇ ಸಾಲಿನ ಮಾರ್ಚಿ ೮ ರಂದು ಮಹಿಳೆಯರು ಯುದ್ಧನೀತಿಯನ್ನ ವಿರೋಧಿಸಿ, ಐಕ್ಯಮತ ವನ್ನ ಸಹಕರಿಸಿ ಬ್ರುಹತ್ ಚಳುವಳಿ ನಡೆಸಿದರು.೧೯೧೭: ಮತ್ತೆ ಯುದ್ಧ ನೀತಿಯನ್ನ ವಿರೋಧಿಸಿ ರಷ್ಯಾದ ಮಹಿಳೆಯರು ಊಟ ಮತ್ತು ಶಾಂತಿ ಚಳುವಳಿಯನ್ನ ನಡೆಸಿದರು.*

*ನಾಲ್ಕು ವಾರಗಳ ನಂತರ ರಾಜ ಮನೆತನದ ಆಳ್ವಿಕೆಯನ್ನು ನಿಲ್ಲಿಸಿ ಮತಚಲಾಯಿಸುವ ಅಧಿಕಾರವನ್ನ ಸರ್ಕಾರ ನೀಡಿತು. ಅಂದಿನ ದಿನಗಳಲ್ಲಿ ಮಹಿಳಾ ದಿನಾಚರಣೆ ಮುಂದುವರೆದ ಮತ್ತು ಮುಂದುವರೆಯುತ್ತಿರುವ ದೇಶಗಳಲ್ಲಿ ಹೊಸ ಆಯಮವನ್ನ ಪಡೆಯಿತು.*

*ಬೆಳೆಯುತ್ತಿದ್ದ ಅಂತರಾಷ್ಟ್ರೀಯ ಮಹಿಳಾ ಚಳುವಳಿ, ಅವುಗಳ ಸಾಮರ್ಥ್ಯವನ್ನ ಹೆಚ್ಹಿಸಿದ ನಾಲ್ಕು "ಜಾಗತಿಕ ಸಂಯುಕ್ತ ರಾಷ್ಟ್ರೀಯ ಮಹಿಳಾ ಸಮಾಲೋಚನೆ", ಮಹಿಳಾ ಹಕ್ಕು, ರಾಜಕೀಯ ಹಾಗು ಆರ್ಥಿಕ ಕ್ಷೆತ್ರಗಳಲ್ಲಿ ಭಾಗವಹಿಸುವ ಹಕ್ಕನ್ನ ಪಡೆಯಲು ಪೋಷಿಸಿದವು. ದಿನಕಳೆದಂತೆ ಅಂತರಾಷ್ಟ್ರೀಯ ಮಹಿಳೆಯರ ದಿನ ಬೆಳವಣಿಗೆಯ ಪ್ರತಿಬಿಂಬದ ಜೊತೆಗೆ ಸಾಧರಣ ಮಹಿಳೆಯ ಧೀರತನ ಮತ್ತು ಧೃಡತೆ ದೇಶ ಹಾಗು ಸಮುದಾಯದ ಇತಿಹಾಸದಲ್ಲಿ ವಹಿಸಿದ ಅಸಾಧಾರಣ ಪಾತ್ರವನ್ನ ಬಿಂಬಿಸುತ್ತಾ ಬದಲಾವಣೆಯ ಕರೆಯನ್ನ ನೀಡುತ್ತದೆ.*

*ಸಂಯುಕ್ತ ರಾಷ್ರಗಳು ಮತ್ತು ಲಿಂಗ ಸಮಾನತೆ*

*೧೯೪೫ ರಲ್ಲಿ ಸಹಿ ಮಾಡಿದ ಸಂಯುಕ್ತ ರಾಷ್ಟ್ರಗಳ ಅಂತರಾಷ್ಟ್ರೀಯ "ಲಿಂಗ ಸಮಾನತಾ ತತ್ವ" ಅಂಗೀಕಾರಕ್ಕೆ ಬಂತು.ಅಲ್ಲಿಯ ನಂತರ ವಿಶ್ವವ್ಯಾಪ್ಯ ಒಪ್ಪಂದ ನೀತಿ, ನಿರ್ದಿಷ್ಟಮಾನ, ಮಹಿಳಾಭಿವ್ರುದ್ದಿ ಕಾರ್ಯಕ್ರಮ ಹಾಗು ಯೋಜನೆಗಳು ಕಾರ್ಯರೂಪಕ್ಕೆ ಬಂದವು. ಕೆಲವರ್ಷಗಳ ನಂತರ ಸಂಯುಕ್ತ ರಾಷ್ರಗಳು ಮತ್ತು ಅದರ ತಾಂತ್ರಿಕ ಏಜೆನ್ಸ್ಸಿಗಳು ಮಾನವ ಹಕ್ಕುಗಳನ್ನ ಅಬಿನಂಧಿಸಿ ಮಹಿಳೆಯರು ಭಾಗವಹಿಸುವುದನ್ನ ಪ್ರೋತ್ಸಾಹಿಸಿದವು. ಮಹಿಳೆಯರನ್ನ ಪ್ರಭಲಗೊಳಿಸುವ ಸಂಯುಕ್ತ ರಾಷ್ರಗಳ ಕಾರ್ಯ ವಿಶ್ವದಾದ್ಯಂತ ಮುಂದುವರೆಯಿತು.*

ಕಾಮೆಂಟ್‌ಗಳಿಲ್ಲ:

ಶಾಲಾ ಉಪಯುಕ್ತ

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

Gjhn



MDM - ಮದ್ಯಾಹ್ನ ಬಿಸಿಯೂಟ ಯೋಜನೆ