ಮಗ್ಗಿ

ಮತ್ತೊಮ್ಮೆ ಭೇಟಿ ನೀಡಲು vktworld ಎಂದು search ಮಾಡಿ ~~~ vktworld

1.4.17

ಸಿದ್ದಗಂಗಾ ಶ್ರೀ ಗಳು

ಶ್ರೀಗಳ ಪೂರ್ವಾಶ್ರಮ


🙏🏻ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ ೧, ೧೯೦೮ರಲ್ಲಿ ೧೩ನೇ ಮಗು ಶಿವಣ್ಣನವರಾಗಿ ಜನಿಸಿದರು.

 🙏🏻ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ.

🙏🏻 ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು.

🙏🏻ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು.

🙏🏻ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ.

🙏🏻ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ ೧೯೨೨ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು ೧೯೨೬ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು.

🙏🏻೧೯೨೭ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು.

🙏🏻 ಬೆಂಗಳೂರಿನಲ್ಲಿ 'ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ' ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.


🙏🏻ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು.


🙏🏻ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.

ಮಠಾಧಿಪತಿಯಾಗಿ

🙏🏻ಶ್ರೀ ರಕ್ಷೆಯಿಂದ ಉತ್ತಮವಾಗಿ ನಡೆಯುತ್ತಿದ್ದ ಸಿದ್ದಗಂಗಾ ಮಠಕ್ಕೆ ೧೯೩೦ರಲ್ಲಿ ಬರ ಸಿಡಿಲು ಬಡಿದಂತಹ ಒಂದು ಘಟನೆ ನಡೆಯುತ್ತದೆ.


🙏🏻ಅದೇನೆಂದರೆ ಉದ್ದಾನ ಶಿವಯೋಗಿಗಳ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರು ಆಕಸ್ಮಿಕವಾಗಿ ಶಿವೈಕ್ಯರಾಗುತ್ತಾರೆ. ಆಗ ಅವರ ಕ್ರಿಯಾ ಸಮಾಧಿ ಕಾರ್ಯಕ್ಕೆ ಆಗಮಿಸಿದ್ದ ಶಿವಣ್ಣನವರ ಕಡೆ ಉದ್ಧಾನ ಸ್ವಾಮಿಜಿಗಳ ದೃಷ್ಟಿ ಹರಿಯುತ್ತದೆ.


🙏🏻 ಅಷ್ಟರಲ್ಲಾಗಲೇ ಶಿವಣ್ಣನವರ ಹಿನ್ನೆಲೆಯ ಅರಿವಿದ್ದ ಉದ್ಧಾನ ಶ್ರೀಗಳು ಯಾರ ಹೇಳಿಕೆಗೂ ಕಾಯದೆ ಎಲ್ಲರ ಸಮ್ಮುಖದಲ್ಲಿ ಶಿವಣ್ಣನೇ ಈ ಮಠದ ಉತ್ತರಾಧಿಕಾರಿ ಎಂದು ಘೋಷಿಸಿ ಬಿಡುತ್ತಾರೆ.


🙏🏻ಎಲ್ಲರಂತೆ ಸಾಮಾನ್ಯರಾಗಿ ಕ್ರಿಯಾ ಸಮಾಧಿ ಕಾರ್ಯಕ್ಕೆ ಬಂದಿದ್ದ ಶಿವಣ್ಣನವರು ಹೋಗುವಾಗ ಕಾವಿ, ರುದ್ರಾಕ್ಷಿಗಳನ್ನು ಧರಿಸಿದ ಸನ್ಯಾಸಿಯಾಗಿ 'ಶ್ರೀ ಶಿವಕುಮಾರ ಸ್ವಾಮಿಜಿ'ಗಳಾಗಿ ಹಿಂದಿರುಗುತ್ತಾರೆ.


🙏🏻ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗುತ್ತಾರೆ. ಸನ್ಯಾಸತ್ವ ಸ್ವೀಕಾರದ ನಂತರವೂ ವಿದ್ಯಾಭ್ಯಾಸ ಮುಂದುವರಿಸಿದ ಶಿವಣ್ಣನವರು ಮತ್ತೆ ಬೆಂಗಳೂರಿಗೆ ಬಂದು ಸನ್ಯಾಸತ್ವದ ರೀತಿ ರಿವಾಜುಗಳನ್ನು ಸಂಪ್ರದಾಯಬದ್ಧವಾಗಿ ಪಾಲಿಸುತ್ತಲೂ ಹಾಗು ಶಿಸ್ತುಬದ್ಧ ವಿದ್ಯಾರ್ಥಿಯಾಗಿಯೂ ತಮ್ಮ ಒಡನಾಡಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾರೆ.


ವಿದ್ಯಾಭ್ಯಾಸ ಮುಗಿದು ಸ್ವಾಮಿಜಿಯವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸಿದ್ದಗಂಗಾ ಮಠಕ್ಕೆ ಹಿಂದಿರುಗಿ, ಅಂದಿನಿಂದ ತಮ್ಮ ಪೂರ್ಣ ಸಮಯವನ್ನು ಮಠದ ಏಳಿಗೆಗಾಗಿ ಮೀಸಲಿಡುತ್ತಾರೆ.


🙏🏻ಇದಾಗಿ ಮುಂದೆ ಶ್ರೀ ಉದ್ಧಾನ ಶಿವಯೋಗಿಗಳು ಶಿವೈಕ್ಯರಾದಾಗ ಮಠದ ಸಕಲ ಆಡಳಿತವೂ, ಮಠದ ವಿದ್ಯಾರ್ಥಿಗಳ, ಶಿಕ್ಷಣ ಸಂಸ್ಥೆಗಳ ಯೋಗ ಕ್ಷೇಮದ ಜವಾಬ್ದಾರಿಯೂ ಶ್ರೀಗಳವರಿಗೆ ಹಸ್ತಾಂತರವಾಗುತ್ತದೆ.


 ಶ್ರೀಗಳ ದಿನಚರಿ

🙏🏻ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಾರೆ.

🙏🏻 ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಾರೆ.

🙏🏻ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, 'ಸಿಹಿ' ಹಾಗೂ 'ಖಾರ ಚಟ್ನಿ' ಸೇವನೆ. ಎರಡು ತುಂಡು ಸೇಬು.

🙏🏻ಇದರ ಬಳಿಕ, 'ಬೇವಿನ-ಚಕ್ಕೆ ಕಷಾಯ' ಸೇವನೆಯಾಗುತ್ತದೆ.


ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ. ಸ್ನಾನ, ಪೂಜೆ, ಮತ್ತು, ಪ್ರಸಾದ.

🙏🏻ಒಂದು ಚಪಾತಿ ಇಲ್ಲವೇ ಒಂದು ದೋಸೆ. ಅದರ ಜೊತೆಗೆ ಚಟ್ಣಿ ಅಥವಾ ಪಲ್ಯ. ಇದಿಲ್ಲದೇ ಹೋದರೆ, ಉಪ್ಪಿಟ್ಟು, ನಂತರ ಹಣ್ಣಿನ ಸೇವನೆ.

🙏🏻ಹತ್ತು ಗಂಟೆಗೆ ಸ್ವಾಮಿಗಳು ಸಭಾಂಗಣದಲ್ಲಿ ಹಾಜರಾಗುತ್ತಾರೆ. 'ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕ' ದ ಒಂದು ದೃಶ್ಯವನ್ನು ನೋಡಿದ ಬಳಿಕ ಅಂದಿನ ದಿನದ ಕಾಯಕಕ್ಕೆ ವಿರಾಮ.


ಮಠಾಧಿಕಾರದ ಆರಂಭದ ದಿನಗಳು

🙏🏻ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು.

🙏🏻 ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು.

🙏🏻ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು.

🙏🏻ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು.

🙏🏻ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು.

🙏🏻 ಆರಂಭದ ದಿನಗಳಲ್ಲಿ 'ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ' ಎಂಬ ಆಡು ನುಡಿಗಳೂ ಕೇಳಿಬಂದಿದ್ದವು.

🙏🏻 ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗು ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ.

🙏🏻 ಅಷ್ಟರಲ್ಲಾಗಲೇ ಸ್ವಾತಂತ್ರ್ಯ ಕಂಡು ಸ್ವಾಯತ್ತತೆಯೆಡೆಗೆ ಅಡಿಯಿಡುತ್ತಿದ್ದ ಭಾರತ ಶಿಕ್ಷಣದ ಮಹತ್ವವನ್ನು ದೇಶದೆಲ್ಲೆಡೆ ಪಸರಿಸಲು ಹಾಗು ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸಲು ಸರ್ಕಾರವೂ ಸೇರಿದಂತೆ ಅನೇಕ ಮಹನೀಯರು ಮೊದಲಾದರು.

🙏🏻 ಆದರೆ ಸಿದ್ದಗಂಗೆಯಲ್ಲಿ ಅದಾಗಲೇ ಅವೆಲ್ಲವೂ ಕಾರ್ಯರೂಪಕ್ಕೆ ಬಂದಾಗಿತ್ತು. ಸಾಲದ್ದಕ್ಕೆ ಅಲ್ಲಿ ಕಲಿಯುತ್ತಿದ್ದ ಬಹುಪಾಲು ಎಲ್ಲರೂ ಗ್ರಾಮೀಣ ಮಕ್ಕಳೇ. ಈ ಕಾರ್ಯ ರಾಷ್ಟ್ರ ಮಟ್ಟದಲ್ಲೂ ಬಹಳ ಶ್ಲಾಘನೆಗೆ ಒಳಗಾಗಿ, ಸಿದ್ದಗಂಗೆಯ ಕೀರ್ತಿ ಎಲ್ಲೆಡೆ ಹರಡಲು ಪ್ರಾರಂಭವಾಯಿತು.

🙏🏻ಸಿದ್ದಗಂಗೆಯ ಕೀರ್ತಿ ಪಸರಿಸಿದಂತೆ ಅಲ್ಲಿನ ಭಕ್ತ ವರ್ಗವೂ, ವಿಧ್ಯಾರ್ಥಿ ಸಂಕುಲವೂ ಕಾಲಕ್ರಮೇಣ ಹೆಚ್ಚುತ್ತಾ ಹೋಯ್ತು.


ದಿನಚರಿಯಲ್ಲಿ ಭಕ್ತರ ಭೇಟಿಗೆ ಆದ್ಯತೆ


🙏🏻 ಭಕ್ತರ ಕಷ್ಟ-ಸುಖಕ್ಕೆ ಸ್ಪಂದನ, ಮಧ್ಯಾನ್ಹ ಮೂರು ಗಂಟೆಯ ವರೆವಿಗೆ ನಿರಂತರವಾಗಿ ಸಾಗುತ್ತದೆ.

🙏🏻ಮಠಕ್ಕೆ ಭೇಟಿ ಕೊಡುವ ಬಹುತೇಕ ಭಕ್ತರು ರೈತಾಪಿ ವರ್ಗದವರಾದ್ದರಿಂದ ಶ್ರೀಗಳು ಬೇರೆ ಬೇರೆ ಪ್ರದೇಶದಿಂದ ಬಂದ ರೈತರಲ್ಲಿ ಮಳೆ ಬೆಳೆಗಳ ಬಗ್ಗೆ ಪ್ರಶ್ನಿಸುತ್ತಾರೆ.

🙏🏻ಇದರ ಬಳಿಕ ಶ್ರೀಗಳು,ನೇರವಾಗಿ ಮಠಕ್ಕೆ ಸಾಗಿ, ಸ್ನಾನ ಪೂಜೆಗಳಲ್ಲಿ ಮಗ್ನರಾಗುತ್ತಾರೆ. ಇದರ ಬಳಿಕ, ಒಂದು ಎಳ್ಳಿಕಾಯಿ ಗಾತ್ರದಮುದ್ದೆ, ಸ್ವಲ್ಪವೇ ಅನ್ನ, ಮತ್ತು ತೊಗರಿಬೇಳೆ ಸಾಂಬಾರ್ ಊಟಮಾಡುತ್ತಾರೆ.

🙏🏻 ಸಂಜೆ ೪ ಗಂಟೆಯ ನಂತರ ಪುನಃ ಭಕ್ತಗಣದ ಬೇಟಿ. ಮಠದಲ್ಲಿ ಉಳಿದುಕೊಂಡು ವಿದ್ಯಾರ್ಜನೆ ಮಾಡುವ ಮಕ್ಕಳ ಕುಶಲೋಪರಿ, ದಾಸೋಹದ ಮಾಹಿತಿ ಸುಮಾರು ರಾತ್ರಿ ೯ ಗಂಟೆಯವರೆವಿಗೂ ನಡೆಯುತ್ತದೆ.


ವಿಶ್ರಾಂತಿ

🙏🏻ರಾತ್ರಿ ಹತ್ತೂವರೆಗೆ ಸ್ವಾಮೀಜಿ ಮಲಗುವ ವೇಳೆ ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದಾರೆ. ಇದು ಕನಿಷ್ಠ ಅರ್ಧತಾಸಾದರೂ ನಡೆಯುತ್ತದೆ.

🙏🏻ಹನ್ನೊಂದು ಗಂಟೆಗೆ ಮಲಗುತ್ತಾರೆ.

🙏🏻ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತ್ತದೆ.

🙏🏻ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಾರೆ. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿನೀಡುತ್ತಾರೆ.

🙏🏻ದೂರದ ಊರುಗಳಿಗೂ ಓಡಾಡುತ್ತಾರೆ. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಾರೆ. ಬಾಕಿ ಸಂದರ್ಭದಲ್ಲಿ ಏನನ್ನೂ ಸೇವಿಸುವುದಿಲ್ಲ.

🙏🏻ಕಳೆದ  ದಶಕಗಳ ಜೀವನ ಇದೇರೀತಿ ಸಾಗಿದೆ. ಶ್ರೀಗಳ ಆರೋಗ್ಯವೂ ಚೆನ್ನಾಗಿಯೇ ಇದೆ.

 ಪ್ರಶಸ್ತಿಗಳು ಮತ್ತು ಸನ್ಮಾನಗಳು

🙏🏻ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


🙏🏻ಪೂಜ್ಯ ಸ್ವಾಮೀಜಿಯವರ ೧೦೦ ನೆ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.


🙏🏻2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ತತ್ವಗಳು

🙏🏻ಧರ್ಮ ಅಧರ್ಮಗಳಲ್ಲಿನ ನಂಬುಗೆಗಿಂತ, ಅವರವರ ಭಕುತಿಗೆ ತಕ್ಕಂತೆ ಅವರವರ ಭಾವಕ್ಕೆ ತಕ್ಕಂತೆ ನಡೆದುಕೊಳ್ಳುವುದನ್ನೇ ಧರ್ಮವಾಗಿಸಿಕೊಂಡಿದ್ದೇವೆ.


🙏🏻ಸಾಲಕ್ಕೆ ಬಡ್ಡಿ ಎನ್ನುವುದು ಕೃತಜ್ಞತೆಗಾಗಿ ಕೊಡುವ ಧನವಾಗಿರಬೇಕೆ ಹೊರತು, ಬಡವರ ರಕ್ತ ಹೀರುವ ಜಿಗಣೆಯಾಗಬಾರದು.


🙏🏻ಒಂದು ಅಗುಳು ಅನ್ನದ ಹಿಂದೆ ಸಾವಿರಾರು ಜನರ ಪರಿಶ್ರಮವಿದೆ, ಆದರಿಂದ ಪ್ರಸಾದ ಸೇವಿಸುವಾಗ ವ್ಯರ್ಥ ಮಾಡುವುದು ಶ್ರೇಯಸ್ಕರವಲ್ಲ.


🙏🏻ದೇಹಕ್ಕೆ ಹಸಿವಾದರೆ ಪ್ರಸಾದದ ಅಗತ್ಯವುಂಟು, ಹಾಗೆಯೇ ಮನಸ್ಸಿನ ಹಸಿವಿಗೆ ಪ್ರಾರ್ಥನೆಯ ಅಗತ್ಯವುಂಟು.


🙏🏻ಪ್ರಸಾದ ಸೇವನೆಯಲ್ಲೂ, ಪ್ರಾರ್ಥನೆಯಲ್ಲೂ ಏಕಾಗ್ರತೆ ಅತ್ಯವಶ್ಯಕ.


🙏🏻ನಾವು ಒಮ್ಮೊಮ್ಮೆ ಯೋಚಿಸುತ್ತೇವೆ ಶ್ರೀ ಮಠ ಹೇಗೆ ಇಷ್ಟು ದೊಡ್ಡದಾಗಿ ಬೆಳೆಯಿತು ಎಂದು, ಆಗ ಇದು ಗುರುಗಳ ಶ್ರೀ ರಕ್ಷೆ ಹಾಗು 'ಶಿವಯೋಗಿಯ ದೇಹ' ವೃಥಾ ಸವೆಯದಂತೆ ಭಕ್ತರು ನಡೆಸಿಕೊಂಡಿದ್ದರ ಪರಿ ಎನಿಸುತ್ತಿರುತ್ತದೆ.


🙏🏻ಪ್ರಪಂಚದಲ್ಲಿ ಧರ್ಮ ಯಾವುದು ಎಂದರೆ ಒಂದೇ ಧರ್ಮ, ಅದು ಮನುಷ್ಯ ಧರ್ಮ. ಕತ್ತಲಲ್ಲಿ ಇರುವವನನ್ನು ಬೆಳಕಿಗೆ ಕರೆಯುವುದು ಧರ್ಮ,


🙏🏻ಅನ್ನವಿಲ್ಲದವನಿಗೆ ಅನ್ನವಿಕ್ಕುವುದು ಧರ್ಮ, ಬಾಯಾರಿದವನಿಗೆ ನೀರುಣಿಸುವುದು ಧರ್ಮ, ಮತ್ತೊಬ್ಬರ ಕಷ್ಟಕ್ಕೆ ನೆರಾವಾಗುವುದು ಧರ್ಮವೇ ಪರಂತು ಧರ್ಮ ಗುಡಿ ಗುಂಡಾರಗಳಲ್ಲಿ ನೆಲೆಸಿಲ್ಲ.


🙏🏻ಸಾಧಕನೊಬ್ಬನಿಗೆ ಸನ್ಮಾನವೆಂದರೆ ಅವನನ್ನು ಸಭೆಗೆ ಕರೆದು ಶಾಲು,ಪೇಟ ತೊಡಿಸಿ ಫಲ ಪುಷ್ಪಗಳನ್ನಿತ್ತರೆ ಅದು ಸನ್ಮಾನವಲ್ಲ.ಬದಲಾಗಿ ಆ ವ್ಯಕ್ತಿಯಲ್ಲಿ ಇರಬಹುದಾದ ಒಳ್ಳೆಯ ಗುಣವೊಂದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಾವು ಆ ವ್ಯಕ್ತಿಗೆ ಮಾಡಬಹುದಾದ ನಿಜವಾದ ಸನ್ಮಾನ.


🙏🏻ಸ್ವಾಮಿತ್ವದ ಸೂಕ್ಷ್ಮತೆ, ಹಣಕಾಸಿನ ನಿರ್ವಹಣೆ, ಭಕ್ತರ ಒಡನಾಟ, ಆಂತರಿಕ ಮತ್ತು ಬಾಹ್ಯ ಆಡಳಿತ, ಆಧ್ಯಾತ್ಮಿಕ ಮನೋಭಾವ ಇವುಗಳನ್ನೆಲ್ಲ ನಮ್ಮ ಪೂಜ್ಯ ಗುರುಗಳು ಹೇಳಿ ಕಲಿಸಿದವಲ್ಲ. ಬದಲಾಗಿ ಇದ್ದು ಆಚರಿಸಿ ಕಲಿಸಿದವರು.


🙏🏻ಜೀವನದಲ್ಲಿ ಒಳ್ಳೆಯ ಭವಿಷ್ಯ ಉಂಟಾಗಬೇಕಾದರೆ, ಗೌರವವಾದ ಬಾಳ್ವಿಕೆ ಉಂಟಾಗಬೇಕಾದರೆ ಕಾಲವನ್ನು ವ್ಯರ್ಥ ಮಾಡದೆ ಜ್ಞಾನ ಸಂಪಾದನೆ ಮಾಡಬೇಕು.

(ಸಂಗ್ರಹ)

ಪ್ರಚಲಿತ ಪೋಸ್ಟ್‌ಗಳು