29.11.17

english - 1 - write any 2 words for the following

A =--------,-------

B=--------,-------

C=--------,-------

D=--------,-------

E=--------,-------

F=--------,-------

G=--------,-------

H=--------,-------

I=--------,-------

J=--------,-------

K=--------,-------

L=--------,-------

M=--------,-------

N=--------,-------

O=--------,-------

P=--------,-------

Q=--------,-------

R=--------,-------

S=--------,-------

T=--------,-------

U=--------,-------

V=--------,-------

W=--------,-------

X=--------,-------

Y=--------,-------

Z=--------,-------

13.11.17

ಮಕ್ಕಳ ದಿನಾಚರಣೆ

💐 *ಮಕ್ಕಳ ದಿನಾಚರಣೆ* *ಹಾಗೂ ಚಾಚಾ ನೆಹರುರವರ  ಜನ್ಮದಿನದ ಕುರಿತು ಮಾಹಿತಿ*💐



👉 *ವ್ಯಕ್ತಿ ಪರಿಚಯ* :-

*ಜವಾಹರ್ ಲಾಲ್ ನೆಹರು*

*ಜವಾಹರರಿಗೆ ಮೊದಲಿನಿಂದಲೂ ಮಕ್ಕಳೆಂದರೆ ಬಹಳ ಪ್ರೀತಿ.ಮಕ್ಕಳೊಡನೆ ಆಟವಾಡುವುದೆಂದರೆ ಆನಂದ. ಸ್ವತಂತ್ರ ಭಾರತದ ಪ್ರಧಾನಮಂತ್ರಿಯಾಗಿ ದಿನವಿಡೀ ದುಡಿತ ವಿದ್ದಾಗಲೂ ಅವರು ಮಕ್ಕಳೊಡನೆ ಆಡುವ ಪ್ರಸಂಗ ತಪ್ಪಿಸುತ್ತಿರಲಿಲ್ಲ. ಯಾವುದೇ ಸಭೆಗೆ ಹೋಗಿರಲಿ, ಎಷ್ಟೇ ಅವಸರದ ಕಾರ್ಯಕ್ರಮವಿರಲಿ ಅವರು ಮಕ್ಕಳನ್ನು ನೋಡಿದ ಕೂಡಲೆ ಎತ್ತಿ ಮುದ್ದಾಡುತ್ತಿದ್ದರು. ‘‘ನಿಜವಾದ ಜವಾಹರರನ್ನು ನೋಡಬೇಕಾದರೆ ಅವರು ಮಕ್ಕಳೊಂದಿಗೆ ಇರುವಾಗ ನೋಡಬೇಕು. ಮಕ್ಕಳಂತೆಯೇ ಮಾತನಾಡಿ, ಅವರ ಹಾಗೆಯೇ ಆಟವಾಡಿ ನಲಿದು ಆನಂದಪಡುತ್ತಾರೆ’’ ಎಂದು ಅವರ ತಂಗಿ ಶ್ರೀಮತಿ ವಿಜಯಲಕ್ಷ್ಮಿ ಪಂಡಿತರು ಹೇಳಿದ್ದಾರೆ. ನವೆಂಬರ್ 14 ನಮ್ಮ ದೇಶದ ಒಬ್ಬ ಮಹಾಪುರುಷರಾದ ಪಂಡಿತ ಜವಾಹರ್‌ಲಾಲ್ ನೆಹರು ಅವರ ಜನ್ಮದಿನ. ಅಂದು ಭಾರತದಲ್ಲೆಲ್ಲ ‘ಮಕ್ಕಳ ದಿನ’ ಎಂದು ಸಂಭ್ರಮದಿಂದ ಪ್ರತಿವರುಷ ಆಚರಿಸುತ್ತೇವೆ. ಜವಾಹರರನ್ನು ಮಕ್ಕಳು ‘ಚಾಚಾ ನೆಹರೂ’ ಎಂದು ಪ್ರೀತಿ-ಗೌರವಗಳಿಂದ ಕರೆಯುತ್ತಾರೆ. ಚಾಚಾ ಎಂದರೆ ಚಿಕ್ಕಪ್ಪ.*

*ನೆಹರು ಅವರ ಪೂರ್ವಜರ ಹೆಸರು ‘ನೆಹರು’ ಆಗಿದ್ದಿರಲಿಲ್ಲ. ಅವರ ಪೂರ್ವಜರು ಕಾಶ್ಮೀರದಲ್ಲಿದ್ದರು. ಅವರಿಗೆ ‘ರಾಜಕೌಲ’  ಎಂಬ ಹೆಸರಿತ್ತು. ಪಂಡಿತ ರಾಜಕೌಲರು ಸಂಸ್ಕೃತ-ಫಾರಸೀ ಭಾಷೆಗಳಲ್ಲಿ ವಿದ್ವಾಂಸರಾಗಿದ್ದರು. ಕ್ರಿ.ಶ. 1716ರಲ್ಲಿ ದಿಲ್ಲಿಯ ಮೊಗಲದೊರೆ ಫರುಕ್ಸಿಯರನು ಕಾಶ್ಮೀರಕ್ಕೆ ಭೆಟ್ಟಿ ಕೊಟ್ಟಾಗ ಪಂಡಿತ ರಾಜಕೌಲರನ್ನು ದಿಲ್ಲಿಗೆ ಕರೆತಂದು ನಗರದ ನಡುವೆ ಹರಿಯುತ್ತಿದ್ದ ಕಾಲುವೆಯ ಪಕ್ಕದಲ್ಲಿ ಮನೆ ಕಟ್ಟಿಸಿಕೊಟ್ಟನು. ಕಾಲುವೆಗೆ ಹಿಂದಿ ಭಾಷೆಯಲ್ಲಿ ‘ನಹರ್’ ಎನ್ನುತ್ತಾರೆ. ಹೀಗಾಗಿ ‘ನಹರ್’ ಪಕ್ಕದ ಮನೆಯವರು ‘ನೆಹರೂ’ ಆದರು.*



👉 *ಬಾಲ್ಯ–ವಿದ್ಯಾಭ್ಯಾಸ*

*ಮೋತೀಲಾಲರು ಕಲಿತು ದೊಡ್ಡವರಾಗಿ ಅಲಹಾಬಾದಿನಲ್ಲಿ ವಕೀಲಿ ವೃತ್ತಿ ಪ್ರಾರಂಭಿಸಿ ಅಪಾರ ಕೀರ್ತಿ ಮತ್ತು ಹಣ ಗಳಿಸಿದರು. ಜವಾಹರರು ಹುಟ್ಟಿದ್ದು 1889ನೇ ನವಂಬರ 14 ರಂದು. ತಾಯಿ ಸ್ವರೂಪರಾಣಿ. ವೈಭವದ ಜೀವನ ಶ್ರೀಮಂತ ತಂದೆಯ ಒಬ್ಬನೇ ಮಗನಾದ ಜವಾಹರರು ರಾಜಕುಮಾರನಂತೆ ಅತ್ಯಂತ ಸುಖದಿಂದ ಬೆಳೆದರು. ಮೋತೀಲಾಲರು ಹೊಸದಾಗಿ ಕಟ್ಟಿಸಿದ ‘ಆನಂದಭವನ’ ವೆಂಬ ಹೆಸರಿನ ಮನೆಯು ಅರಮನೆಯಂತೆಯೇ ಇತ್ತು.*

*ಮೋತೀಲಾಲರು ಸಿಟ್ಟಿನ ಸ್ವಭಾವದವರು. ಜವಾಹರರಿಗೆ ಅವರ ಬಗ್ಗೆ ಹೆದರಿಕೆಯಿತ್ತು. ಒಮ್ಮೆ ಜವಾಹರರು ಚೆನ್ನಾಗಿ ಪೆಟ್ಟು ತಿಂದರು. ಆದದ್ದು ಇಷ್ಟೇ. ಮೋತೀಲಾಲರ ಕೋಣೆಯಲ್ಲಿ ಮೇಜಿನ ಮೇಲೆ ಎರಡು ಪೆನ್ನುಗಳಿದ್ದವು. ಅವನ್ನು ನೋಡಿದಾಗ ಬಾಲಕ ಜವಾಹರರು ‘‘ಎರಡು ಪೆನ್ನುಗಳಿಂದ ಯಾರಾದರೂ ಬರೆಯುತ್ತಾರೆಯೇ, ಒಂದನ್ನು ನಾನು ಇಟ್ಟುಕೊಂಡರೆ ತಪ್ಪೇನು?’’ ಎಂದು ಆಲೋಚಿಸಿ ಒಂದನ್ನು ತೆಗೆದುಕೊಂಡರು. ಆ ಬಳಿಕ ತಂದೆ ಪೆನ್ನು ಕಾಣದೆ ಎಲ್ಲರನ್ನು ಕೇಳಿದರು. ಮಗನನ್ನು ಕೇಳಿದಾಗ ತಾನು ತೆಗೆದುಕೊಂಡಿಲ್ಲವೆಂದ. ಆದರೆ ಹುಡುಕಿದಾಗ ಮಗನ ಬಳಿ ಸಿಕ್ಕಿಬಿಟ್ಟಿತು. ಮಗನಿಗೆ ಚೆನ್ನಾಗಿ ಏಟುಬಿದ್ದವು!*

*ಹೀಗೆ ಸಿಟ್ಟಿನ ಸ್ವಭಾವವಿದ್ದರೂ ತಂದೆಗೆ ಮಗನ ಮೇಲೆ ಬಹಳ ಪ್ರೇಮವಿತ್ತು. ಮಗನಿಗೆ ಒಳ್ಳೆ ಶಿಕ್ಷಣ ಕೊಡಿಸಬೇಕೆಂದು ಮನೆಯಲ್ಲಿಯೇ ಉತ್ತಮ ಶಿಕ್ಷಕರನ್ನಿಟ್ಟರು. ಆಗಿನ ಕಾಲದ ವಿದ್ಯಾವಂತರಂತೆ ಮೋತೀಲಾಲರಿಗೂ ಇಂಗ್ಲಿಷ್ ಭಾಷೆಯ ಬಗ್ಗೆ ಬಹಳ ಮೋಹವಿತ್ತು. ಅದಕ್ಕಾಗಿ ಮಗನಿಗೆ ಇಂಗ್ಲಿಷ್ ಶಿಕ್ಷಣ ಕೊಡಿಸಲು ಫರ್ಡಿನೆಂಡ್ ಬ್ರುಕ್ಸ್ ಎಂಬುವನನ್ನು ನೇಮಿಸಿದ್ದರು. ಆತನು ಜವಾಹರರಲ್ಲಿ ಒಳ್ಳೊಳ್ಳೆಯ ಪುಸ್ತಕ ಓದುವ ರುಚಿ ಹುಟ್ಟಿಸಿದ. ಈ ರುಚಿಯು ಜವಾಹರರಿಗೆ ವಿದ್ಯಾರ್ಥಿಯಾಗಿದ್ದಾಗ ಮತ್ತು ಮುಂದೆಯೂ ಬಹಳ ಸಹಾಯಕವಾಯಿತು. ಚಿಕ್ಕಂದಿನಲ್ಲಿ ಜವಾಹರರೊಡನೆ ಆಟವಾಡಲು ‘ಆನಂದಭವನ’ ದಲ್ಲಿ ಸಣ್ಣ ಹುಡುಗರು ಇರಲಿಲ್ಲ. ಅವರ ತಂಗಿ ಸ್ವರೂಪಕುಮಾರಿ-ಮುಂದೆ ಶ್ರೀಮತಿ ವಿಜಯಲಕ್ಷಿ  ಪಂಡಿತ್ ಎಂದು ಹೆಸರಾದರು – ಹುಟ್ಟದ್ದು 1900ರ ಆಗಸ್ಟ್ 18 ರಂದು. ಕಿರಿಯ ತಂಗಿ ಕೃಷ್ಣಾ-ಮುಂದೆ ಶ್ರೀಮತಿ ಕಷ್ಣಾ ಹಥೀಸಿಂಗ-ಹುಟ್ಟಿದ್ದು ೧೯೦೭ ರ ನವಂಬರ್ 2ರಂದು. ಆದರೆ ಜವಾಹರರಿಗೆ ಅವರ ಕಕ್ಕಿ ರಾಮಾಯಣ-ಮಹಾಭಾರತಗಳ ಕಥೆಗಳನ್ನೂ, 1857ರ ಸ್ವಾತಂತ್ರ  ಸಮರದಲ್ಲಿ ಹೋರಾಡಿದ ದೇಶಭಕ್ತ ವೀರರ ಕಥೆಗಳನ್ನೂ   ಹೇಳುತ್ತಿದ್ದರು. ಇದರಿಂದ ಜವಾಹರರಿಗೆ ನಮ್ಮ ದೇಶದ ಹಿರಿಮೆ ತಿಳಿಯುತ್ತಿತ್ತು. ನಮ್ಮ ದೇಶವನ್ನು ಆಳುತ್ತಿದ್ದ ಬ್ರಿಟಿಷರು ನಡೆಸುವ ಅತ್ಯಾಚಾರಗಳ ಬಗ್ಗೆ ಹಿರಿಯರು ಮಾತನಾಡುವುದನ್ನು ಜವಾಹರರು ಬಹಳ ಕುತೂಹಲದಿಂದ ಕೇಳುತ್ತಿದ್ದರು. ಭಾರತೀಯರಿಗೆ ಎಲ್ಲಿಯೂ ಗೌರವದ ಸ್ಥಾನ-ಮಾನವಿರಲಿಲ್ಲ. ಉಪಾಹಾರ ಗೃಹಗಳಲ್ಲಿ, ರೈಲುಡಬ್ಬಿಗಳಲ್ಲಿ, ಸಾರ್ವಜನಿಕ ಉದ್ಯಾನಗಳಲ್ಲಿ- ಹೀಗೆ ಎಲ್ಲ ಕಡೆ ಬ್ರಿಟಿಷರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯಿರುತ್ತಿತ್ತು. ಬ್ರಿಟಿಷರು ಭಾರತೀಯರನ್ನು ಬಹಳ ಕೀಳುಭಾವನೆಯಿಂದ ಕಾಣುತ್ತಿದ್ದರು. ಇದೆಲ್ಲ ಕೇಳಿದಾಗ ಬಾಲಕ ಜವಾಹರರಿಗೆ ಬ್ರಿಟಿಷರ ಮೇಲೆ ಸಿಟ್ಟು ಬರುತ್ತಿತ್ತು.*

 👉 *ಇಂಗ್ಲೆಂಡಿನಲ್ಲಿ*

*ಜವಾಹರರಿಗೆ 15 ವರುಷ ದಾಟಿದಾಗ ಮೋತಿಲಾಲರು ಅವರನ್ನು ಇಂಗ್ಲೆಂಡಿನಲ್ಲಿ ‘ಹ್ಯಾರೋ’ ಎಂಬ ಸಾರ್ವಜನಿಕ ಶಾಲೆಗೆ ಸೇರಿಸಿದರು. ಅಲ್ಲಿ ಜವಾಹರರು ಬೀಜಗಣಿತ, ರೇಖಾಗಣಿತ, ಇತಿಹಾಸ, ಸಾಹಿತ್ಯ ಮುಂತಾದ ಎಲ್ಲ ವಿಷಯಗಳಲ್ಲಿ ಉತ್ತಮ ವಿದ್ಯಾರ್ಥಿಯೆಂದು ಹೆಸರು ಪಡೆದು ಬಹುಮಾನ ಗಳಿಸಿದರು. ಜವಾಹರರು ಇಂಗ್ಲೆಂಡಿಗೆ ಹೋದರೂ ಭಾರತದಲ್ಲಿ ನಡೆಯುತ್ತಿದ್ದ ಸಂಗತಿಗಳನ್ನು ತಿಳಿಯಲು ಉತ್ಸುಕರಾಗಿದ್ದರು ಮತ್ತು ಒಳ್ಳೊಳ್ಳೆಯ ಭಾರತೀಯ ಪತ್ರಿಕೆಗಳನ್ನು ತರಿಸಿಕೊಂಡು ಓದುತ್ತಿದ್ದರು.*

*1912 ರ ಆಗಸ್ಟ್ ತಿಂಗಳಲ್ಲಿ ಭಾರತಕ್ಕೆ ಮರಳಿದ ಬಳಿಕ ಜವಾಹರರು ತಂದೆಯವರೊಡನೆ ವಕೀಲಿವೃತ್ತಿ ಪ್ರಾರಂಭಿಸಿದರು. ಅವರು ತೆಗೆದುಕೊಂಡ ಮೊದಲನೆಯ ಪ್ರಕರಣದಿಂದ ಅವರಿಗೆ ೫೦೦ ರೂಪಾಯಿ ಶುಲ್ಕ ಬಂದಿತು. 1916 ರ ಫೆಬ್ರವರಿ 8 ರ ವಸಂತಪಂಚಮಿಯ ದಿನ ದಿಲ್ಲಿಯಲ್ಲಿ ಜವಾಹರರ ಮದುವೆ ಬಹಳ ವೈಭವದಿಂದ ನೆರವೇರಿತು. ಅವರ ಪತ್ನಿ ಕಮಲಾ. ಆಕೆಯೂ ಸಹ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಕೀರ್ತಿ ಗಳಿಸಿದರು. ಜವಾಹರರಿಗೆ ಒಬ್ಬಳೇ ಮಗಳು, ಇಂದಿರಾ ಪ್ರಿಯದರ್ಶಿನಿ.*

*ಜವಾಹರರ ಜೀವನ ನಾಡಿನ ಸ್ವಾತಂತ್ರ ದ ಹೋರಾಟದ ಒಂದು ಭಾಗವಾಗಿ ಹೋಯಿತು. ದೇಶದ ಸ್ವಾತಂತ್ರ ಕ್ಕಾಗಿ ಹೋರಾಟ ನಡೆದಾಗ ಅವರು ನಾಲ್ಕು ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಅವರ ಇಡೀ ಜೀವನ ದೇಶಕ್ಕಾಗಿ ಸಮರ್ಪಿತವಾಗಿತ್ತು. ಅವರು ಸರ್ವಶಕ್ತಿಯಿಂದ ಸದಾಕಾಲವೂ ದೇಶಕ್ಕಾಗಿ ದುಡಿಯುತ್ತ ಮುಂದೆ ಮುಂದೆ ಸಾಗಿದರು. ಸೆರೆಮನೆಯಲ್ಲೇ ಇರಲಿ, ಹೊರಗೇ ಇರಲಿ, ಜವಾಹರರು ಯಾವಾಗಲೂ ದೇಶದ ಸ್ವಾತಂತ್ರ , ದೇಶದ ಉನ್ನತಿ, ದೇಶದ ಪ್ರಗತಿ ಇವುಗಳ ಚಿಂತೆಯನ್ನೇ ಮಾಡುತ್ತಿದ್ದರು.*

👉 *ಭಾರತದ ಪ್ರಧಾನಿ*

*ಸ್ವತಂತ್ರ ಭಾರತಕ್ಕೆ  ಜವಾಹರಲಾಲ್ ನೆಹರೂ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.*

*ಸ್ವತಂತ್ರಭಾರತದ ಮೊದಲನೆಯ ಪ್ರಧಾನಮಂತ್ರಿಯಾಗಿ ದೇಶದ ಪ್ರಗತಿ ಸಾಧಿಸುವ ಪೂರ್ಣ ಹೊಣೆ ಹೊರಬೇಕಾಯಿತು. ಹದಿನೇಳು ವರ್ಷಕಾಲ ಅವರು ಸ್ವತಂತ್ರ ಭಾರತದ ಪ್ರಧಾನಿಯಾಗಿದ್ದರು. ಈ ಕಾಲದಲ್ಲಿ ಅವರು ನಮ್ಮ ದೇಶದ ಉನ್ನತಿಗಾಗಿಯಷ್ಟೇ ಅಲ್ಲ, ಇಡೀ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಹೆಣಗಾಡಿದರು.*

👉 *‘ಭಾರತ ರತ್ನ’*

*1955ರಲ್ಲಿ ದೇಶದ ಜನತೆಯ ಪರವಾಗಿ ರಾಷ್ಟ್ರಪತಿಯವರು ಜವಾಹರರಿಗೆ ‘ಭಾರತರತ್ನ’ ಪದವಿ ನೀಡಿ ಗೌರವಿಸಿದರು.*

*ನಮ್ಮ ದೇಶದ ಉನ್ನತಿಗಾಗಿ ಚಾಚಾ ನೆಹರೂ ಕೊಟ್ಟ ಮಂತ್ರವೆಂದರೆ ‘‘ಆರಾಮ್ ಹರಾಮ್ ಹೈ.’’ ನಾವು ಎಂದಿಗೂ ಸೋಮಾರಿಗಳಾಗಬಾರದೆಂಬುದೇ ಆ ಮಂತ್ರದ ಅರ್ಥ.*

👉 *ಸಾಹಿತಿ ನೆಹರು*

*ಜವಾಹರರು ಸಾಹಿತಿಗಳೂ ಆಗಿದ್ದರು. ಚಿಕ್ಕಂದಿನಿಂದಲೂ ಅವರಿಗೆ ಪುಸ್ತಕಗಳನ್ನು ಓದುವುದೆಂದರೆ ಬಹು ಆಸಕ್ತಿ. ದಿನವಿಡೀ ಬೇರೆ ಬೇರೆ ಕೆಲಸಗಳಿಂದ ದಣಿವಾದರೂ ಅವರು ರಾತ್ರಿ ಮಲಗುವ ಮುಂಚೆ ಸ್ವಲ್ಪ ಸಮಯ ಉತ್ತಮ ಪುಸ್ತಕ ಓದುತ್ತಿದ್ದರು. ಅವರಿಂದ ಇಂಗ್ಲಿಷ್ ಭಾಷೆಯಲ್ಲಿ ರಚಿತವಾದ ಮೂರು ಪುಸ್ತಕಗಳು ಜಗತ್ಪ್ರಸಿದ್ಧವಾಗಿವೆ. ಸಹಜವಾಗಿ ಅನುಕಂಪ ತೋರುವ ಹೃದಯ, ಯಾವ ಸಮಸ್ಯೆಯನ್ನೂ ವಿಶಾಲವಾದ ದೃಷ್ಟಿಯಿಂದ ಕಾಣುವ ವಿವೇಕ ಅವರ ಎಲ್ಲ ಪುಸ್ತಕಗಳಲ್ಲಿ ಕಾಣುತ್ತವೆ.*

 👉 *ದೀಪ ಆರಿತು*

*1964ರ ಮೇ 27*
*ರಂದು ನೆಹರು ನಿಧನರಾದರು.* *ಎಲ್ಲ ದೇಶಗಳ ಪ್ರಮುಖರು ಅಂತಿಮಯಾತ್ರೆಯಲ್ಲಿ ಭಾಗವಹಿಸಿ ತಮ್ಮ ಗೌರವ ಸಲ್ಲಿಸಿದರು*

 👉 *ಅಪೂರ್ವ ದೇಶಭಕ್ತರು ಅಪೂರ್ವ ವ್ಯಕ್ತಿ*

*ಭಾರತ ಯುಗಧರ್ಮಕ್ಕೆ ಅನುಗುಣವಾಗಿ ಬದಲಾಗಬೇಕು, ತನ್ನ ಚಿಂತನೆ-ಸಂಸ್ಕೃತಿಗಳಲ್ಲಿ ಸತ್ವವಿರುವುದನ್ನು ಉಳಿಸಿಕೊಳ್ಳಬೇಕು, ಆದರೆ ಹೊಸ ಜ್ಞಾನ ಹೊಸ ಚಿಂತನೆಗಳಿಗೆ ಮನಸ್ಸನ್ನು ತೆರೆದಿರಬೇಕು ಎಂದು ನೆಹರೂ ಅವರು ಸಾರಿದರು. ಒಟ್ಟಿನಲ್ಲಿ ಅವರು ಅಪೂರ್ವ ದೇಶಭಕ್ತರು. ಅಪೂರ್ವ ಸ್ನೇಹಪರರಾದ, ಹೃದಯವಂತಿಕೆಯ ವ್ಯಕ್ತಿ.*


11.11.17

ಮೌಲಾನಾ ಅಬ್ದುಲ್ ಕಲಾಂ ಅಜಾದ್

*🙏💐💐ಮೌಲಾನಾ ಅಬ್ದುಲ್ ಕಲಾಂ ಅಜಾದ್ ರವರ ಜನ್ಮ ದಿನಾಚರಣೆಯ ಮಾಹಿತಿ*💐


*ಭಾರತದ ಸ್ವಾತಂತ್ರ್ಯ ಹೋರಾಟಗಾರ*

*ಮೌಲಾನಾ ಅಬ್ದುಲ್ ಕಲಾಂ ಅಜಾದ್(ನವೆಂಬರ್ ೧೧, ೧೮೮೮ - ಫೆಬ್ರುವರಿ ೨೨, ೧೯೫೮) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ಅವರ ಜನ್ಮದಿನವಾದ ನವೆಂಬರ್ ೧೧ ದಿನಾಂಕವನ್ನು ಭಾರತದ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ.*

*ಮೌಲಾನಾ ಅಬುಲ್ ಕಲಾಂ ಆಜಾದ್‌ ಜನನ ನವೆಂಬರ್ ೧೧, ೧೮೮೮*
*ಮೆಕ್ಕಾ, ಸೌದಿ ಅರೇಬಿಯಾನಿಧನಫೆಬ್ರುವರಿ ೨೨, ೧೯೫೮* *ದೆಹಲಿಹೆಸರುವಾಸಿಭಾರತ ಸ್ವಾತಂತ್ರ್ಯ ಹೋರಾಟಗಾರರು,* *ಕೇಂದ್ರ ಶಿಕ್ಷಣ ಮಂತ್ರಿಗಳು*

*👉 ಜೀವನ*

*ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮಗಾಂಧಿಯವರ ಜೊತೆಗಾರರಾಗಿದ್ದ ಪ್ರಮುಖರಲ್ಲಿ ಮೌಲಾನಾ ಅಬ್ಬುಲ್ ಕಲಾಂ ಒಬ್ಬರು. ಅವರು ಜನಿಸಿದ್ದು ನವೆಂಬರ್ ೧೧, ೧೮೮೮ರಲ್ಲಿ.*

*👉 ಉರ್ದು ವಿದ್ವಾಂಸರು*

*ಉರ್ದು ವಿದ್ವಾಂಸರಾಗಿದ್ದ ಅವರು ತಮ್ಮ ಬರವಣಿಗೆಗಾಗಿ ‘ಆಜಾದ್’ ಎಂಬ ನಾಮಾಂಕಿತವನ್ನು ಬಳಸುತ್ತಿದ್ದರು. ಹೀಗಾಗಿ ಅವರು ಮೌಲಾನಾ ಆಜಾದ್ ಎಂದೇ ಪ್ರಸಿದ್ದರು.*

*👉 ಸ್ವಾತಂತ್ರ್ಯ ಚಳುವಳಿಯಲ್ಲಿ*

*ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು. ಗಾಂಧೀಜಿಯವರ ‘ಸ್ವದೇಶಿ’, ‘ಸ್ವರಾಜ್’ ಚಿಂತನೆಗಳಿಗೆ ಮಾರು ಹೋಗಿ ಅವರ ಜೊತೆ ನಿರಂತರವಾಗಿದ್ದ ಅಬ್ದುಲ್ ಕಲಾಂ ೧೯೨೩ರ ವರ್ಷದಲ್ಲಿ ತಮ್ಮ ೩೫ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರು ವಯಸ್ಸಿನವರಾಗಿದ್ದರು.*

*೧೯೩೧ರ ವರ್ಷದಲ್ಲಿ ‘ದರ್ಶನ ಸತ್ಯಾಗ್ರಹ’ದ ಪ್ರಮುಖ ಆಯೋಜಕರಾಗಿದ್ದ ಮೌಲಾನ ಹಲವಾರು ಕಠಿಣ ಸೆರೆವಾಸಗಳನ್ನು ಕಂಡರು. ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ಸತತವಾಗಿ ಸೆರೆಯಲ್ಲಿಯೇ ಇದ್ದರು. ಸ್ವಾತಂತ್ರ್ಯದ ಸಮಯದಲ್ಲಿ ದೇಶದ ವಿಭಜನೆಯ ಕೂಗನ್ನು ಬೆಂಬಲಿಸದಿದ್ದ ಅವರು ಭಾರತದ ಪರವಾಗಿಯೇ ಇದ್ದರು. ಸ್ವಾತಂತ್ರ್ಯಕ್ಕೆ ಮುಂಚೆಯೇ, ಪಾಕಿಸ್ತಾನ ರಾಷ್ಟ್ರವಾದರೆ ಅಲ್ಲಿ ಪ್ರಜಾಪ್ರಭುತ್ವ ನಿರ್ಮಾಣವಾಗದೆ ಮಿಲಿಟರಿ ಆಡಳಿತವೇ ಗತಿಯಾಗುತ್ತದೆ ಎಂಬ ಎಚ್ಚರಿಕೆ ಸಹಾ ನೀಡಿದ್ದರು.*

*👉 ರಾಷ್ಟ್ರೀಯ ಶಿಕ್ಷಣ ದಿನ*

*ಸ್ವತಂತ್ರ ಭಾರತದಲ್ಲಿ ಶಿಕ್ಷಣ ಸಚಿವರಾಗಿದ್ದ ಅಬ್ದುಲ್ ಕಲಾಂ ಅವರು ಹುಟ್ಟಿದ ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಣೆಗೆ ತರಲಾಗಿದೆ.*

*👉 ವಿದಾಯ*

*ಮೌಲಾನಾ ಅಬ್ದುಲ್ ಕಲಾಂ ಅವರು ಫೆಬ್ರವರಿ ೨೨, ೧೯೫೮ರ ವರ್ಷದಲ್ಲಿ ನಿಧನರಾದರು.*


7.11.17

ಶಿಕ್ಷಕರ ಸೇವಾ ಮಾಹಿತಿ ತಂತ್ರಾಂಶ

ಶಿಕ್ಷಕರ ಸೇವಾ ಮಾಹಿತಿ ತಂತ್ರಾಂಶದ ಪ್ರವೇಶಕ್ಕೆ ಇಲ್ಲಿ ಕ್ಲಿಕ್ಕಿಸಿ

ಆದೇಶಗಳು :-
         **** ಶಿಕ್ಷಕರ ಮಾಹಿತಿಯನ್ನು TDS ನಲ್ಲಿ ಅಳವಡಿಸುವ ಕುರಿತು👈

           ***  *ಶಿಕ್ಷಕರ ಮಾಹಿತಿ ಸಂಗ್ರಹಣಾ ತಂತ್ರಾಂಶದಲ್ಲಿ ಅಳವಡಿಸಲಾದ ಶಿಕ್ಷಕರ ಮಾಹಿತಿಗಳನ್ನು ಅಪ್ರೊವ್ ಮಾಡಲು ಪರಿಶೀಲಿಸಬೇಕಾದ ಅಂಶಗಳ ಕುರಿತ ಸುತ್ತೊಲೆ ದಿನಾಂಕ:28-09-2017*



        *** *"ಶಿಕ್ಷಕರ ಸೇವಾ ಮಾಹಿತಿ ತಂತ್ರಾಂಶ "*

*# ಈ ಕೆಳಗಿನ ಸೂಚನೆಯನ್ನು ಪಾಲಿಸುತ್ತಾ ಮುಂದುವರೆಯಿರಿ"*


(೧) ಕೆಜಿಐಡಿ ಕಾಲಮ್ ನಲ್ಲಿ, ಪ್ರಥಮ ಕೆಜಿಐಡಿ ನಂ. ಎಂಟ್ರಿ ಮಾಡಿ


(೨) ನಂತರ, Get OTP ಬಟನ್ ಪ್ರೆಸ್ ಮಾಡಿ
(೩) ನಿಮ್ಮ ಮೊಬೈಲ್ ನಂ.ಗೆ OTP ನಂ. ಬರುತ್ತದೆ

(೪) ಆ OTP ನಂ.ಅನ್ನು OTP ಕಾಲಮ್ ನಲ್ಲಿ ಹಾಕಿ -
(೫) *Security Code* ಕಾಲಂ ನಲ್ಲಿ, OTP ಕಾಲಮ್ ಕೆಳಗೆ ಇದ್ದಿರುವ ನಂ.ಅನ್ನು (ಇಟಾಲಿಕ್ ಸೈಲ್'ನಲ್ಲಿ ಇರುವ ನಾಲ್ಕು ಅಂಕಿಯ ಸಂಖ್ಯೆ) ಎಂಟ್ರಿ ಮಾಡಿ

(೬) ನಂತರ, *Log In* ಬಟನ್ ಪ್ರೆಸ್ ಮಾಡಿ



(೭) *View Details* ಪ್ರೆಸ್ ಮಾಡಿ
(೮) *'ಶಿಕ್ಷಕರ ಮಾಹಿತಿ ನಮೂನೆ-೨೦೧೭'* ಇರುತ್ತದೆ, ಇದರಲ್ಲಿರುವ ನಿಮ್ಮ ಎಲ್ಲಾ ಸೇವಾ ಮಾಹಿತಿಗಳು ಸರಿಯಾಗಿದೆಯೇ ನೋಡಿಕೊಳ್ಳಿ
(೯) ನಂತರ, ಎಲ್ಲಾ ಮಾಹಿತಿ 'ಸರಿ' ಇದ್ದಲ್ಲಿ,

(೧೦) *'ಡಿ.ಡಿ.ಓ ನೀಡಿರುವ ಮಹಿತಿಗೆ ನಿಮ್ಮ ಸಹಮತವಿದೆಯೆ?'*
*_ಈ ಮಾಹಿತಿಯು ಸರಿ ಇದ್ದಲ್ಲಿ,_* ಕೆಳಗೆ *'ಹೌದು'* ಎಂದು ಕ್ಲಿಕ್ ಮಾಡಿ
ಅಥವಾ
*_ಈ ಮಾಹಿತಿಯು ಸರಿ ಇರದಿದ್ದಲ್ಲಿ, 'ಇಲ್ಲ'* ಎಂದು ಕ್ಲಿಕ್ ಮಾಡಿ._*

ನಂತರ, ಕೆಳಗೆ ಕಂಡುಬರುವ ಕಾಲಮ್ ನಲ್ಲಿ *_'ತಪ್ಪು ಮಾಹಿತಿ' ಯಾವುದಾಗಿತ್ತು, 'ಸರಿ ಯಾದ ಮಾಹಿತಿ' ಯಾವುದು ಎಂದು ಬರೆಯಿರಿ._*
(೧೧) 'ನಲಿ ಕಲಿ ಯೋಜನೆಯಡಿಯಲ್ಲಿ ನೀವು ತರಬೇತಿ ಪಡೆದಿದ್ದೀರ ?'
ಹೌದು/ ಇಲ್ಲ --> ಆಯ್ಕೆ ಮಾಡಿ
* ತರಬೇತಿಯ ಅವಧಿ: 5/ 8/ 10/‌ 12
--> ಆಯ್ಕೆ ಮಾಡಿ


(೧೨) ಕೊನೆಯಲ್ಲಿ SUBMIT ಬಟನ್ ಪ್ರೆಸ್ ಮಾಡಿ

5.11.17

ಕನಕದಾಸರು

ಕನಕದಾಸರು


(ಕೃಪೆ : ಇಂಟರ್ನೆಟ್)

( 👉👉 ಕನಕದಾಸರ ಕೀರ್ತನೆಗಳು 👈👈 )
ಶ್ರೀ ಕನಕದಾಸರು [ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
ಕನಕದಾಸರು
ಶ್ರೀ ಕನಕ ದಾಸರು
ಜನನ
ತಿಮ್ಮಪ್ಪ ನಾಯಕ
1509
ಮರಣ
1609
ಬಾಡ
ವೃತ್ತಿಹರಿದಾಸರು, ಕೀರ್ತನಕಾರರು, ಕವಿ
ಪ್ರಕಾರ/ಶೈಲಿಕೀರ್ತನೆಉಗಾಭೋಗ, ಮುಂಡಿಗೆ, ಕಾವ್ಯ


ಜೀವನಸಂಪಾದಿಸಿ

ಜನನಸಂಪಾದಿಸಿ

ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ ಜಾತಿಗೆ ಸಿಮಿತವಾತ ಭಕ್ತವಲ್ಲ, ಎಲ್ಲಾ ಜಾತಿಗಳಿಗೆ ಬೇಕಾದವರು. 15-16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾರು ಎಂದರೆ ತಪ್ಪಾಗಲಾರದು.

ಸಾಧನೆಸಂಪಾದಿಸಿ

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ.

ಕನಕ ಕಿಂಡಿಸಂಪಾದಿಸಿ

ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು. ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).
  • ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ ಪ್ರಸ್ತಾಪವಾಗಿಲ್ಲ.
  • ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ.
  • ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ ೧೧೬೦ ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ ತೀರ್ಥರ ಹೇಳಿಕೆ.
  • ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ ಸ್ಥಾಪಿಸಬೇಕೆಂಬ ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.
  • ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ ಒಂದೇ ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. ೧೨೦ ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ.
  • ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ ಕನಕದಾಸರು.

ಸಾಹಿತ್ಯ ರಚನೆಸಂಪಾದಿಸಿ

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:
  1. ಮೋಹನತರಂಗಿಣಿ
  2. ನಳಚರಿತ್ರೆ
  3. ರಾಮಧಾನ್ಯ ಚರಿತೆ
  4. ಹರಿಭಕ್ತಿಸಾರ
  5. ನೃಸಿಂಹಸ್ತವ (ಉಪಲಬ್ದವಿಲ್ಲ)

ಮೋಹನತರಂಗಿಣಿಸಂಪಾದಿಸಿ

ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2700 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.
ಸೋಮಸೂರಿಯ ವೀಥಿಯ ಇಕ್ಕೆಗಳಲಿ
ಹೇಮ ನಿರ್ಮಿತ ಸೌಧದೋಳಿ
ರಮಣೀಯತೆವೆತ್ತ ಕಳಸದಂಗಡಿಯಿರ್ದುಂ
ವಾ ಮಹಾ ದ್ವಾರಕಾಪುರದೇ


ಓರಂತೆ ಮರಕಾಲರು ಹಡಗಿನ ವ್ಯವ
ಹಾರದಿ ಗಳಿಸಿದ ಹಣವ
ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು
ಬೇರಂಗೆ ಕಡವ ಕೊಡುವರು

ನಳಚರಿತ್ರೆಸಂಪಾದಿಸಿ

ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ: ಲಲಿತ ಹೇಮದ ತೂಗಮಂಚದ ಹೊಳೆವ ಮೇಲ್ವಾಸಿನಲಿ ಮಲಗು ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨) ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ.

ರಾಮಧಾನ್ಯಚರಿತೆಸಂಪಾದಿಸಿ

ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ. ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ? ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು.. ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು.

ಹರಿಭಕ್ತಿಸಾರಸಂಪಾದಿಸಿ

ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.

ಕೀರ್ತನೆಗಳುಸಂಪಾದಿಸಿ

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.
ಜೈನವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.
'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.
ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ. ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ . ತೀರ್ಥವನು ಪಿಡಿದವರು ತಿರುನಾಮಧಾರಿಗಳೇ ಜನ್ಮ ಸಾರ್ಥಕವಿರದವರು ಭಾಗವತರಹುದೇ ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ . ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋಸಂಪಾದಿಸಿ

ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೂ
ಬಯಲು ಆಲಯದೊಳಗೊ, ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ

ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳಸಂಪಾದಿಸಿ

ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು
ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/


ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು
ದಾಯಾದಿ ಬಂಧುಗಳ ಬಿಡಲೂ ಬಹುದು
ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು
ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/



ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಬಹುದು
ಜಾಣ ನಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩/

ಶಾಲಾ ಉಪಯುಕ್ತ

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

Gjhn



MDM - ಮದ್ಯಾಹ್ನ ಬಿಸಿಯೂಟ ಯೋಜನೆ