ಪುಟಗಳು

ಪುಟಗಳು

a-z

a-z

31.1.18

ಮಡಿವಾಳ ಮಾಚಿದೇವ

ಮಡಿವಾಳ ಮಾಚಿದೇವ

೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ' ಮಡಿವಾಳ ಮಾಚಿದೇವ' ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು...

ಅವತಾರಿ ಪುರುಷ

ದಕ್ಷನನ್ನು ಸಂಹಾರ ಮಾಡಿ ಅತಿ ಉತ್ಸಾಹದಿಂದ ಶಿವನನ್ನು ಕಾಣಲು ವೀರಭದ್ರ ಶಿವನ ಸಭೆಯೊಳಗೆ ನಡೆದು ಬರುತ್ತಾನೆ. ಸಭೆಯಲ್ಲಿರುವ ಶಿವ ಭಕ್ತನಿಗೆ ಈತನ ಉತ್ತರೀಯ ಸೆರಗು ತಾಕುತ್ತದೆ. ವಿಜಯದ ಉದ್ವೇಗದಲ್ಲಿ ಆದ ಆ ತಪ್ಪಿಗೆ, ಭೂಲೋಕದಲ್ಲಿ ಮಡಿವಾಳನಾಗಿ ಜನಿಸಿ ಶರಣರ ವಸ್ತ್ರಗಳನ್ನು ಮಡಿ ಮಾಡುವ ಕಾಯಕ ಪೂರೈಸಿ ದೋಷ ಮುಕ್ತನಾಗಿ ಬರುವಂತೆ ಶಿವನ ಆದೇಶವಾಗುತ್ತದೆ. ಮಾಚಿದೇವರನ್ನು ವೀರ ಭದ್ರನ 'ದೇವಾಂಶ ಸಂಭೂತ ಅವತಾರ ಪುರುಷನೆಂದು' ನಿರೂಪಿಸುವುದು ಸಾಮಾನ್ಯ ರೂಢಿಯಾಗಿದೆ..

ಉದಯಿಸಿದ ಶರಣ ಕಿರಣ

ಬಿಜಾಪುರ ಜಿಲೆಯ ಸಿಂಧಗಿ ತಾಲೂಕಿನ 'ದೇವರ ಹಿಪ್ಪರಗಿಯಲ್ಲಿ' ಪರುವತಯ್ಯ -ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೆವರು ಜನಿಸಿದ್ದು ಕ್ರಿ .ಶ ೧೧೨೦-೧೧೩೦ ರ ನಡುವೆ.

ಕ್ರಾಂತಿಕಾರಿ ಗುರುವಿನ ಬೋಧನೆ

ಮಾಚಿದೇವರ ವ್ಯಾಸಂಗ- ಅಪಾರ ಜ್ಞಾನವನ್ನು ಅವಲೋಕಿಸಿದಾಗ ಉತ್ತಮ ಗುರುಗಳ ಬೋಧನೆ ಸಿಕ್ಕಿದ್ದು ಮನವರಿಕೆಯಾಗುತ್ತದೆ. ಶೂದ್ರರಿಗೆ ಶಿಕ್ಷಣ ನಿಷೇಧಿಸಲ್ಪಟ್ಟ ಕಾಲದಲ್ಲಿ ಅಕ್ಷರ ಜ್ಞಾನ -ಸಕಲ ಶಾಸ್ತ್ರಗಳನ್ನು ಹೇಳಿಕೊಟ್ಟ ಗುರು ' ಮಲ್ಲಿಕಾರ್ಜುನಯ್ಯ ಸ್ವಾಮಿಗಳು' ನಿಜಕ್ಕೂ ಒಬ್ಬ ಕ್ರಾಂತಿಕಾರಿ ಗುರುಗಳೆಂಬುದು ಸ್ಪುಷ್ಟವಾಗುತ್ತದೆ..

ಕಾಯಕ ಹಿಮಾಚಲ -ಮಾಚಯ್ಯ

ಮಾಚಯ್ಯ ಹುಟ್ಟಿನಿಂದಲೂ ಮಡಿವಾಳನಾಗಿದ್ದು, ಅಚಲ ಕಾಯಕ ನಿಷ್ಟನಾಗಿದ್ದ , ಹಿಮಾಲಯದಷ್ಟು ಧೃಢನಾಗಿದ್ದ , ತನ್ ಕಾಯಕವೇ ಭಕ್ತಿ, ಜೀವನದುಸಿರು ಎಂದು ನಂಬಿದ್ದ. ಜಂಗಮ ವೇಷದಲ್ಲಿ ಬಂದ ಶಿವನ ಬಟ್ಟೆಗಳನ್ನು ಆತನ ಷರತ್ತಿನ ಮೇರೆಗೆ ತನ್ನ ಹೆಂಡತಿ 'ಮಲ್ಲಿಗೆಮ್ಮಳ' ಎದೆ ಬಗೆದ ರಕ್ತದಲ್ಲಿ ಒಗೆದು ಒಣಗಿಸಿಕೊಂಡು ಬಂದ ಸಂದರ್ಭದ ದಂತ ಕಥೆ ಹಿಮಾಚಲಕ್ಕಿಂತಲೂ ಗಟ್ಟಿ ಕಾಯಕದ ಹಿರಿಯಾಳು ಮಾಚಿದೇವನಾಗಿದ್ದ ಎಂಬುದನ್ನು ತಿಳಿಸುತ್ತದೆ.

ಶಿವಶರಣರ ಹಾಗೂ ಕಾಯಕದಲ್ಲಿ ನಿಷ್ಠೆಯುಳ್ಳ ಮೈಲಿಗೆಯ ಬಟ್ಟೆಗಳನ್ನು 'ಮಡಿ' ಮಾಡಿ ಮುಟ್ಟಿಸುವ ಕಾಯಕ ಇವರಾದಗಿತ್ತು . ಮಡಿ ಬಟ್ಟೆ ಹೊತ್ತುಕೊಂಡು 'ವೀರ ಘಂಟೆ' ಬಾರಿಸುತ್ತ , ಭಕ್ತರಲ್ಲದವರು ತಮ್ಮನ್ನು ಮುಟ್ಟಬಾರದೆಂದು ನಿಯಮವನ್ನು ವಿಧಿಸಿಕೊಂಡಿದ್ದರು .

ಕುಚೇದ್ಯಕ್ಕೆ ಬಂದು ಮುಟ್ಟುವ ಭವಿಗಳನ್ನು ತುಂಡರಿಸಿ ಚೆಲ್ಲುತ್ತ ಮುನ್ನಡೆಯುವುದು ಮಾಚಿದೇವರ ನಡತೆಯಾಗಿತ್ತು. ಭವಿಯೋರ್ವ ಮಡಿ ಗಂಟು ಮುಟ್ಟಿ ಮೈಲಿಗೆಗೊಳಿಸಿದ್ದಕ್ಕೆ ಆತನ ಶಿರವನ್ನು ಆಕಾಶಕ್ಕೆ ತೂರಿದ ಘಟನೆಯಿಂದಾಗಿ, ಭಕ್ತಿ ಭಾವದಿಂದ ಮಡಿವಾಳಯ್ಯನನ್ನು ಜನರು ಗೌರವಿಸುತ್ತಿದ್ದರು. ಕಾಯಕ ಮಾಡದ -ಸೋಮಾರಿಗಳ-ಬಡವರನ್ನು ಶೋಷಿಸುವ -ಸೋಮಾರಿಗಳ- ದುರ್ಗುಣವುಳ್ಳವರ ಬಟ್ಟೆಗಳನ್ನೆಂದು ಆತ ಮುಟ್ಟುತ್ತಿರಲಿಲ್ಲ. 'ಅರಸುತನ ಮೇಲಲ್ಲ-ಅಗಸತನ ಕೀಳಲ್ಲ ' ಎಂಬುದನ್ನು ಜನಕ್ಕೆ ಸಾರಿದರು.

ಉನ್ನತ ವ್ಯಕ್ತಿತ್ವ

ಮಡಿವಾಳ ಮಾಚಿದೇವರ ಬಗ್ಗೆ ಹಲವು ಐತಿಹ್ಯಗಳು ಪ್ರಚಾರದಲಿ ಇವೆ. ಅವುಗಳಲ್ಲಿ ಕೆಲವು-

ಮೊದಲನೆಯ ಪ್ರಸಂಗ

ನುಲಿಯ ಚಂದಯ್ಯ ತನ್ನ ಕಾಯಕಕ್ಕೆ ಬೇಕಾದ ಹುಲ್ಲನ್ನು ಕೆರೆಯಲ್ಲಿ ಕುಯ್ಯುತ್ತಿದ್ದಾಗ ಧರಿಸಿದ 'ಇಷ್ಟ ಲಿಂಗ ' ಜಾರಿ ಕೆರೆಯೊಳಗೆ ಬೀಳುತ್ತದೆ. ಜಾರಿ ಬಿದ್ದ ಲಿಂಗ ಮತ್ತೇಕೆ? ಭಾವ ಲಿಂಗವೊಂದನ್ನೇ ಪೂಜಿಸಿದರೆ ಸಾಕೆಂದು ಹುಲ್ಲಿನ ಹೊರೆ ಹೊತ್ತು ಮನೆಗೆ ಮರಳುವನು. ಆಗ ಲಿಂಗದೇವ, ಮಾಚಿದೇವರ ಮೊರೆ ಹೋಗುತ್ತಾನೆ. ಮಾಚಿ ತಂದೆಗಳು 'ಸವಿ ಬೇಕು- ಹಣ್ಣು ಬೇಡವೆಂದರೆ' ಹೇಗೆ? ಗುರು ಪೂಜೆ ಅರಿದೊಡೆ ಲಿಂಗ ಪೂಜೆ ಬಿಡಲಾಗದೆಂದು ಚಂದ್ರಯ್ಯನವರ ತಪ್ಪನ್ನು ಅರಿವನ್ನುಂಟುಮಾಡುವರು - ಅದೊಂದು ದಿವ್ಯ ಪ್ರಸಂಗ.

ಎರಡನೆಯ ಪ್ರಸಂಗ

'ಬೇಡುವ ಭಕ್ತರಿಲ್ಲದೆ ಬಡವನಾದೆನೆಂಬ' ಬಸವಣ್ಣನವರು 'ಅಹಂ' ಭಾವನೆಯಿಂದ ಮಾತನಾಡಿರುತ್ತಾರೆ, ಆಗ ಮಾಚಿದೆವರು ಬಸವಣ್ಣನವರಿಗೆ ' ನೀವೊಬ್ಬರೇ ದಾನ ಮಾಡಲು ಹುಟ್ಟಿದ ದಾನಿಗಳು , ಉಳಿದೆಲ್ಲ ಭಕ್ತರು ಭಿಕಾರಿಗಳು, ದರಿದ್ರರೆ' ? ಎಂದು ಪ್ರಶ್ನಿಸುತ್ತಾರೆ. ಮುಂದೆ ಎನ್ನ ಮಹಾನುಭಾವರ ಬಡತನದಿರವ ನಿನಗೆ ತೋರುವೆನೆಂದು ಪಾದದಿಂದ ನೀರನ್ನು ಚಿಮ್ಮಲು ಆ ನೀರು ಹನಿಗಳೆಲ್ಲ ಮುತ್ತು ರತ್ನಗಳಾದವು. ಹೀಗೆ ವಿನಯ, ಇಂದ್ರಿಯ ನಿಗ್ರಹ, ನಿರಹಂಕಾರಗಳು ಭಕ್ತಿಯ ಕುರುಹು ಎಂದು ತಿಳಿಸುತ್ತ ಅಹಂಕಾರ ನಿರ್ಮೂಲನೆಗೊಳಿಸಿದ.

ಮೂರನೆಯ ಪ್ರಸಂಗ

ಮತ್ತೊಂದು ಸಂದರ್ಭದಲ್ಲಿ ಮೇದರ ಕೇತಯ್ಯ ಬಿದಿರು ಕಡಿಯುವಾಗ ಕೆಳಗೆ ಬೀಳುತ್ತಾನೆ. ಎದೆಗೆ ಬಿದಿರು ಮೊಳೆ ಚುಚ್ಚಿ ಕೇತಯ್ಯ ಶಿವ ಸನ್ನಿಧಿ ಸೇರುತ್ತಾನೆ. ಆಗ ಬಸವಣ್ಣ ಮಾಚಯ್ಯನನ್ನು ಕರೆಸುವನು, ಮಾಚಯ್ಯ ಬಂದು ಶಿವಶರಣರ ಪ್ರಾಣವೇ ತನ್ನ ಪ್ರಾಣವೆಂದು ನಂಬಿದ ಬಸವಣ್ಣ ಇನ್ನೂ ಜೀವಂತವಾಗಿದ್ದು ತನ್ನ ವಚನ ಪಾಲಿಸಿಲ್ಲವೆಂದ. ಇದನ್ನರಿತ ಬಸವಣ್ಣ ಪ್ರಾಣ ಬಿಡುವನು. ಆ ಪ್ರಾಣ ಕೇತಯ್ಯನನ್ನು ಹಿಂಬಾಲಿಸುತ್ತದೆ. ಬಸವಣ್ಣನ ನಿಷ್ಠೆ ಮೆಚ್ಚಿದ ಮಾಚಯ್ಯ, ಶಿವನನ್ನು ಕುರಿತು ಕೆರಳಿ ನುಡಿದು 'ಇಬ್ಬರ ' ಪ್ರಾಣಗಳನ್ನು ಶಿವನನ್ನು ಮರಳಿ ಪಡೆದನೆಂದು ತಿಳಿದು ಬರುತ್ತದೆ.

ನಡೆ-ನುಡಿಯಲ್ಲಿ ತಪ್ಪಿದ ವ್ಯಕ್ತಿ ಇಂಥವರೇ ಆಗಿರಲಿ ಆಚರಣೆ ಪ್ರಸಂಗ ಬಂದಾಗ 'ದೇವರನ್ನೂ' ಕೂಡಾ ಪ್ರಶ್ನಿಸುವ ಪ್ರವೃತ್ತಿ ಮಾಚಯ್ಯನದಾಗಿತ್ತು.

ಕಲ್ಯಾಣದ ಅನುಭವ ಮಂಟಪಿ

ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ , 'ಮಡಿ' ಹಾಸಿ ಸ್ವಾಗತಿಸುವ ಕೆಲಸ ಅವರದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲವೆಂಬುದು ಮಾಚಯ್ಯನ ಮಹಾ ಘನತೆಗೆ ಸಾಕ್ಷಿಯಾಗಿದೆ...

ಗಣಾಚಾರ ಸಂಪನ್ನ ವೀರ ಶರಣ - ಮಡಿವಾಳ ಮಾಚಿದೇವ

ಹಿಪ್ಪರಿಗೆಯಿಂದ ಕಲ್ಯಾಣಕ್ಕೆ ನಡೆದು ಬರುವಾಗ ಭೀಮರತಿ ಹೊಳೆ ಪ್ರವಾಹದಿಂದ ಕಟ್ಟಿರಲು, ಹರಿಗೋಲ ಹಂಗಿಲ್ಲದೆ ಶಿವನನ್ನು ನೆನೆಯಲು ನದಿ ಇಬ್ಬಾಗವಾಯ್ತು. ಆ ಮಾರ್ಗ ಮಧ್ಯದಿಂದ ಮಾಚಿ ತಂದೆ ನಡ ೆದು ಬರುತ್ತಾನೆ...

ಬಿಜ್ಜಳ ತನ್ನ ಬಟ್ಟೆಯನ್ನು ಮಡಿ ಮಾಡಿಸಿಕೊಡಲು ಬಸವಣ್ಣನಿಗೆ ದುಂಬಾಲು ಬಿದ್ದ. ಮಡಿವಾಳಯ್ಯ ಪರಮ ಭಕ್ತ , ಅವನನ್ನು ಅಗಸನೆಂದು ಭಾವಿಸದಿರಲು ಬಸವಣ್ಣ ತಿಳಿ ಹೇಳಿದ , ಅದನ್ನು ಲೆಕ್ಕಿಸದೆ ಮಾಸಿದ ಬಟ್ಟೆಗಳ ಗಂಟನ್ನು ಮಡಿ ಮಾಡಲು ಕಳಿಸಿದ. ಭವಿ ಬಿಜ್ಜಳನ ಮೈಲಿಗೆ ಬಟ್ಟೆಯ ಗಂಟನ್ನು ಕಂಡ ಮಡಿವಾಳಯ್ಯ ಕೋಪಗೊಂಡು ಸಿಟ್ಟಿನಿಂದ ನೋಡಲು ಆ ಕ್ಷಣದಲ್ಲಿ ಗಂಟು ಉರಿದು ಹೋಯ್ತು.

ಇದು ಮಡಿವಾಳಯ್ಯನ 'ಅಹಂಕಾರವೆಂದು' ಭಾವಿಸಿದ ಬಿಜ್ಜಳ ಅವರನ್ನು ಸೆರೆ ಹಿಡಿದು ತರಲು ಕುಂಟ -ಕುರುಡರ ಪಡೆಯೊಂದನ್ನು ಕಳುಹಿಸಿದ. ಮಡಿವಾಳಯ್ಯ ತನ್ನ ಶಕ್ತಿಯಿಂದ ಕುರುಡರಿಗೆ ಕಣ್ಣು ಕಾಣುವಂತೆ ಮತ್ತು ಕುಂಟರಿಗೆ ಕಾಲು ಬರುವಂತೆ ಮಾಡಿ ಅಂಗ ಸೌಷ್ಟ ವರನ್ನಾಗಿ ಮಾಡಿ ಕಳುಹಿಸಿದ. ಇದರಿಂದ ಉರಿದೆದ್ದು ಬಿಜ್ಜಳ 'ಮದೋನ್ಮತ್ತ' ಆನೆಯನ್ನ ಮಾಚಯ್ಯನ ಮೇಲೆ ಹರಿ ಹಾಯಲು ಬಿಟ್ಟ. ಸೈನಿಕರ ತುಕಡಿಯೊಂದನ್ನೂ ಕಳುಹಿಸಿದ. ಆನೆ ಹಾಗೂ ಅವರನ್ನೆಲ್ಲ ಸದೆ ಬಡಿದು ಜಯ ಶಾಲಿಯಾದ. (ಬಹುತೇಕ ಮಡಿವಾಳ ಬಂಧುಗಳ ಮನೆಯಲ್ಲಿ ಈ ಸನ್ನಿವೇಶದ ಫೋಟೋ ಇರುವುದು - ಆದ್ರೆ ಬಹು ಜನರಿಗೆ ಅದರ ಹಿನ್ನೆಲೆ ಗೊತ್ತಿಲ್ಲ..)ಕಾಲಾಂತರದಲ್ಲಿ ಬಿಜ್ಜಳನಿಗೆ ಮಾಚಿದೇವರ ಉನ್ನತ ಮಹಿಮೆ ತಿಳಿದು ತನ್ನ ತಪ್ಪಿನ ಅರಿವಾಗಿ ಬಿಜ್ಜಳ ಶರಣಾಗತನಾಗುವನು...

ಮುಂದೆ 'ಕಲ್ಯಾಣ ಕ್ರಾಂತಿ'ಯ ಸಂದರ್ಭದಲ್ಲಿ ಮಾಚಿದೆವರು ಹೊತ್ತ 'ಜವಾಬ್ಧಾರಿ' ಗುರುತರವಾದುದು. ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ದಂಡ ನಾಯಕತ್ವ ಜವಾಬ್ಧಾರಿ ಹೊತ್ತು , ಚನ್ನ ಬಸವಣ್ಣ , ಅಕ್ಕ ನಾಗಮ್ಮ, ಕಿನ್ನರಿ ಬೊಮ್ಮಣ್ಣ ಮೊದಲಾದವರೊಂದಿಗೆ ಮಾಚಿದೇವ ಶರಣ ಸಮೂಹದ 'ಭೀಮ ರಕ್ಷೆಯಾಗಿ' ನಿಂತರು. ಕಲಚೂರ್ಯ ರಾಯ ಮುರಾರಿಯನ್ನು ಎದುರಿಸಿ ಭೀಮ ನದಿಯನ್ನು ದಾಟಿ ತಲ್ಲೂರು, ಮುರಗೋಡ, ಕಡಕೋಳ,ತಡ ಕೋಡ, ಮೂಗ ಬಸವ, ಕಾದರವಳ್ಳಿಯಲ್ಲಿ ಅಲ್ಲಲ್ಲಿ ಕಾಳಗ ನಡೆಸಿದರು. ತಮ್ಮ ಧೈರ್ಯ, ಅನುಪಮ ಬಲದಿಂದ ಶರಣರನ್ನು, ವಚನ ಸಾಹಿತ್ಯವನ್ನು ರಕ್ಷಿಸಿ ಉಳಿವಿಗೆ ತಲುಪಿಸಿದ ಸಾಹಸಿ ಮಾಚಯ್ಯ.

ಸಮಸ್ತ ಶರಣರು ಉಳಿವೆಯಲ್ಲಿ ಲಿಂಗೈಕ್ಯರಾಗಲು ತಮ್ಮ ಮಹಾನ್ ಕರ್ತವ್ಯ ಪೂರೈಸಿ ಸಿಂದಗಿ ತಾಲೂಕಿನ ಕಲಿಪುರ (ಇಗಿನ ಕಲಕೇರಿ)ತನ್ನ ಗುರುವಾದ ವೀರಘಂಟೈರ ಜೊತೆಗೆ ಜೀವಂತ ಸಮಾದಿಯಾಗಿ ಗುರು ಶಿಷ್ಯರು ಐಕ್ಯರಾದರು....ಇಂದಿಗೂ ಪ್ರತಿ ವರ್ಷ ಹೊಸ್ತಿಲ ಹುಣ್ಣಿಮೆಯ ದಿನ ಮೂಲಾ ನಕ್ಷತ್ರದ ಸಮಯದಲ್ಲಿ ರಥೋತ್ಸವ ನಡೆಯುತ್ತದೆ. ಸುಮಾರು ಒಂದು ತಿಂಗಳ ಕಾಲ ಜಾತ್ರೆ ನಡೆಯುತ್ತದೆ. ವರ್ಷದಲ್ಲಿ ಎರಡು ಸಲ ಅಗ್ನಿ ಉತ್ಸವ ನಡೆಯತ್ತದೆ.ಕಲಕೇರಿಯಲ್ಲಿ ಮಡಿವಾಳ ಮಾಚಿ ದೇವರ ಕೊಂಡಾಡಲು ಅಕ್ಷರಗಳೇ ಸಾಲದು....

ಆಧಾರ

ಚಿತ್ರದುರ್ಗದ ಶ್ರೀ ಮಾಚಿದೇವ ಮಹಾ ಸಂಸ್ಥಾನ ಮಠದ ವತಿಯಿಂದ ಪ್ರಕಟಣೆಗೊಂಡ (ವರ್ಷ :೨೦೦೯)ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳು ಮತ್ತು ಡಾ: ಸಂಗಮೇಶ ಮ. ಕಲಹಾಳ ಅವರ ಸಂಪಾದನೆಯ "ಶ್ರೀ ಮಾಚಿದೇವ ಪ್ರಕಾಶ" (ಮಾಚಿದೇವರ ಜೀವನ ಸಂಕ್ಚಿಪ್ತ ಚರಿತ್ರೆ-ಚಿತ್ರ ಸಹಿತ ಹಾಗೂ ವಚನಗಳು ) ಎಂಬ ಪುಟ್ಟ ಪುಸ್ತಕದಲ್ಲಿನ ಪೂರ್ಣ ಅಂಶಗಳನ್ನು ನಮ್ಮ ಸರ್ವ ಸಹ ಮಡಿವಾಳ ಬಂಧುಗಳ ಜ್ಞಾನಾರ್ಜನೆಗಾಗಿ ಇಲ್ಲಿ ನೀಡಲಾಗಿದೆ..

ದ.ರಾ.ಬೇಂದ್ರೆ

ಧಾರವಾಡದ ರತ್ನ ದ.ರಾ.ಬೇಂದ್ರೆ

(ಕೃಪೆ: ಅಂತರ್ಜಾಲ)

 ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು [೧] ಸಾಕ್ಷ್ಯಚಿತ್ರ ತಯಾರಾಗಿತ್ತು.

ಜನನ ೧೮೯೬ ಜನವರಿ ೩೧
ಧಾರವಾಡ
ಮರಣ ೧೯೮೧ ಅಕ್ಟೋಬರ ೨೬
ಮುಂಬಯಿ
ಕಾವ್ಯನಾಮ ಅಂಬಿಕಾತನಯದತ್ತ
ವೃತ್ತಿ ವರಕವಿ, ಶಿಕ್ಷಕರು
ರಾಷ್ಟ್ರೀಯತೆ ಭಾರತೀಯ
ಕಾಲ (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ)
ಪ್ರಕಾರ/ಶೈಲಿ ಕಥೆ, ಕವನ, ವಿಮರ್ಷೆ, ಅನುವಾದ
ವಿಷಯ ಕರ್ನಾಟಕ, ಜನಪದ, ಶ್ರಾವಣ, ಜೀವನ, ಧಾರವಾಡ
ಸಾಹಿತ್ಯ ಚಳುವಳಿ ನವೋದಯ
ಪ್ರಭಾವಗಳು
ಖಲೀಲ್ ಗಿಬ್ರಾನ್, ಶ್ರೀ ಅರವಿಂದರು, ರವಿಂದ್ರನಾಥ ಟಾಗೂರ್
ಜೀವನ

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.[೨]

ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಇಡೀ ಜೀವನದ ತುಂಬಾ ನಿಸ್ವಾರ್ಥ ಸೇವೆಯನ್ನು ಗೈದ "ಧಾರವಾಡ ದ ಅಜ್ಜ" ಅವರ ಕೆಲವೊಂದು ಮಕ್ಕಳ ಕವಿತೆ, ಕತೆಗಳು ಮಕ್ಕಳ ಮನಸ್ಸನ್ನು ಪರಿವರ್ತಿಸುತ್ತವೆ.

ಸಾಹಿತ್ಯ


ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. "ಗರಿ", "ಕಾಮಕಸ್ತೂರಿ ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.

ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ಅವರು 1954ನೇ ಇಸವಿಯಲ್ಲಿ ತಯಾರಾದ ವಿಚಿತ್ರ ಪ್ರಪಂಚ ಎಂಬ ಚಿತ್ರಕ್ಕೆ ಸಾಹಿತ್ಯ ಹಾಗೂ ಗೀತೆಗಳನ್ನು ರಚಿಸಿದ್ದರೆಂದು ಆ ವರ್ಷದ ನವೆಂಬರ್ ತಿಂಗಳ ಚಂದಮಾಮ ಪತ್ರಿಕೆಯ ಜಾಹೀರಾತೊಂದು ತಿಳಿಸುತ್ತದೆ.
ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.
ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ.
ಗಣಿತದ ಲೆಕ್ಕಾಚಾರ ಮಾಡುತ್ತ ಬಾಳೆಹಣ್ಣಿನ ಗೊನೆಯಲ್ಲಿ, ಹಲಸಿನ ಹಣ್ಣಿನ ಮುಳ್ಳುಗಳಲ್ಲಿ, ಜೇನುಗೂಡಿನಲ್ಲಿ, ನಿಮ್ಮ ಕಿರುಬೆರಳಿನ ಅಂಚಿಗಿಂತ ಚಿಕ್ಕದಾಗಿರುವ ಹೂವುಗಳಲ್ಲಿ, ಎಲ್ಲೆಲ್ಲೂ ಲೆಕ್ಕಾಚಾರವಿದೆ ಅನ್ನುತ್ತಾ ಕೊನೆ ಕೊನೆಗೆ ದ.ರಾ.ಬೇಂದ್ರೆಯವರು ಗಣಿತದ ಲೆಕ್ಕಾಚಾರದಲ್ಲೇ ಮುಳುಗಿದ್ದರು. ಇವರನ್ನು ಕನ್ನಡದ "ಕನ್ನಡದ ಠಾಗೋರ್" ಎಂದು ಕರೆಯಲಾಗುತ್ತದೆ. "ನಮನ" ಬೇಂದ್ರೆಯವರಿಗೆ ಸಂಖ್ಯೆಗಳು ಹೊಸ ಲೋಕವೊಂದನ್ನು ತೆರೆದಿದದ್ವವು. ಬೇಂದ್ರೆ ಮನಸಿಗೆ 441 ಹಾಗೂ ಹೃದಯಕ್ಕೆ 881 ಎಂದು ಸಂಖ್ಯೆ ನೀಡಿದ್ದರು.
ಬೇಂದ್ರೆಯವರ ಸಾಹಿತ್ಯ

ಕವನ ಸಂಕಲನ

(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು

೧೯೨೨: ಕೃಷ್ಣಾಕುಮಾರಿ;
೧೯೩೨: ಗರಿ;
೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
೧೯೩೭: ಸಖೀಗೀತ;
೧೯೩೮: ಉಯ್ಯಾಲೆ;
೧೯೩೮: ನಾದಲೀಲೆ;
೧೯೪೩: ಮೇಘದೂತ (ಕಾಳಿದಾಸನ ಸಂಸ್ಕೃತ ಮೇಘದೂತದ ಕನ್ನಡ ಅವತರಣಿಕೆ)
೧೯೪೬: ಹಾಡುಪಾಡು;
೧೯೫೧: ಗಂಗಾವತರಣ;
೧೯೫೬: ಸೂರ್ಯಪಾನ;
೧೯೫೬: ಹೃದಯಸಮುದ್ರ;
೧೯೫೬: ಮುಕ್ತಕಂಠ;
೧೯೫೭: ಚೈತ್ಯಾಲಯ;
೧೯೫೭: ಜೀವಲಹರಿ;
೧೯೫೭: ಅರಳು ಮರಳು;
೧೯೫೮: ನಮನ;
೧೯೫೯: ಸಂಚಯ;
೧೯೬೦: ಉತ್ತರಾಯಣ;
೧೯೬೧: ಮುಗಿಲಮಲ್ಲಿಗೆ;
೧೯೬೨: ಯಕ್ಷ ಯಕ್ಷಿ;
೧೯೬೪: ನಾಕುತಂತಿ;
೧೯೬೬: ಮರ್ಯಾದೆ;
೧೯೬೮: ಶ್ರೀಮಾತಾ;
೧೯೬೯: ಬಾ ಹತ್ತರ;
೧೯೭೦: ಇದು ನಭೋವಾಣಿ;
೧೯೭೨: ವಿನಯ;
೧೯೭೩: ಮತ್ತೆ ಶ್ರಾವಣಾ ಬಂತು;
೧೯೭೭: ಒಲವೇ ನಮ್ಮ ಬದುಕು;
೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
೧೯೮೨: ಪರಾಕಿ;
೧೯೮೨: ಕಾವ್ಯವೈಖರಿ;
೧೯೮೩: ತಾ ಲೆಕ್ಕಣಕಿ ತಾ ದೌತಿ;
೧೯೮೩: ಬಾಲಬೋಧೆ;
೧೯೮೬: ಚೈತನ್ಯದ ಪೂಜೆ;
೧೯೮೭: ಪ್ರತಿಬಿಂಬಗಳು;
ವಿಮರ್ಶೆ
೧೯೪೦: ಸಾಹಿತ್ಯಸಂಶೋಧನೆ;
೧೯೪೫: ವಿಚಾರ ಮಂಜರಿ;
೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;
೧೯೫೯: ಮಹಾರಾಷ್ಟ್ರ ಸಾಹಿತ್ಯ;
ಸಾಯೋ ಆಟ (ನಾಟಕ)
೧೯೬೨: ಕಾವ್ಯೋದ್ಯೋಗ;
೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;
೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;
೧೯೭೬: ಕುಮಾರವ್ಯಾಸ ಪುಸ್ತಿಕೆ;
ಪ್ರಶಸ್ತಿ, ಪುರಸ್ಕಾರ, ಬಿರುದು

೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ.[೩]
೧೯೫೮ರಲ್ಲಿ ‘ಅರಳು ಮರಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
೧೯೬೪ರ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರಿಗೆ ಸನ್ಮಾನ
೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ “ಸಂವಾದ” ಎಂಬ ಕೃತಿಗೆ ಕೇಳ್ಕರ್ ಬಹುಮಾನ
೧೯೬೮ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಲಭಿಸಿತು
೧೯೭೩ರಲ್ಲಿ ‘ನಾಕುತಂತಿ’ ಕೃತಿಗೆ ಜ್ಞಾನಪೀಠಪ್ರಶಸ್ತಿ
ಕಾಶಿ ವಿದ್ಯಾಪೀಠ, ವಾರಣಾಸಿ, ಮೈಸೂರು ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯಗಳ ಗೌರವ ಡಾಕ್ಟರೇಟ್
ಕೇಂದ್ರ ಸಾಹಿತ್ಯ ಅಕಾಡೆಮಿಯ ಫೆಲೋಷಿಪ್ ಪಡೆದರು.

28.1.18

ಲಾಲಾಲಜಪತರಾಯ್ ರವರ ಜನ್ಮದಿನ

ಇಂದು ದೇಶಭಕ್ತ ಸ್ವಾತಂತ್ರ್ಯಕಿಡಿಗಳ(ಭಗತ ರಾಜಗುರು ಸುಖದೇವ)etc..ಗುರುಗಳಾದ
#ಲಾಲಾಲಜಪತರಾಯ್ ರವರ ಜನ್ಮದಿನವಿಂದು

HAPPY BRITHDAY LALAJI

ಲಾಲಾ ಲಜಪತ ರಾಯ್ (ಜನವರಿ ೨೮, ೧೮೬೫ -ನವೆಂಬರ್ ೧೭, ೧೯೨೮) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.

ಲಾಲಾ ಲಜಪತ ರಾಯ್ಜನನಜನವರಿ ೨೮, ೧೮೬೫
ಪಂಜಾಬಿನ ಮೋಗಾ ಜಿಲ್ಲೆಗೆ ಸೇರಿದ ಧುಡಿಕೆನಿಧನನವೆಂಬರ್ ೧೭, ೧೯೨೮
ಲಾಹೋರಿನಲ್ಲಿOrganizationಭಾರತೀಯ ನ್ಯಾಷನಲ್ ಕಾಂಗ್ರೆಸ್, ಆರ್ಯ ಸಮಾಜMovementಭಾರತ ಸ್ವಾತಂತ್ಯ ಹೋರಾಟ

ಜೀವನಸಂಪಾದಿಸಿ

ಲಾಲಾ ಲಜಪತ ರಾಯ್ ಅವರು ಪಂಜಾಬಿನ ಮೋಗಾ ಜಿಲ್ಲೆಗೆ ಸೇರಿದ ಧುಡಿಕೆ ಎಂಬ ಗ್ರಾಮದಲ್ಲಿ ಜನವರಿ 28, 1865ರ ವರ್ಷದಲ್ಲಿ ಜನಿಸಿದರು. ‘ಲಾಲಾ’ ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಹಿರಿಯ ಮನೆತನದಿಂದ ಬಂದವರಿಗೆ ಸಲ್ಲುತ್ತಿದ್ದ ಗೌರವಯುತ ಸಂಬೋಧನೆ. ರಾಯ್ ಅವರ ಪ್ರಾರಂಭಿಕ ಶಿಕ್ಷಣ ಪ್ರಸಕ್ತದಲ್ಲಿ ಹರ್ಯಾಣದಲ್ಲಿರುವ ರೆವಾರಿ ಎಂಬ ಊರಿನಲ್ಲಾಯಿತು. ಲಜಪತ ರಾಯ್ ಅವರ ತಂದೆ ರಾಧಾ ಕೃಷ್ಣನ್ ಅವರು ಅಂದಿನ ದಿನಗಳಲ್ಲಿ ಉರ್ದು ಶಿಕ್ಷಕರಾಗಿದ್ದರು

ರಾಜಕೀಯ ಹೋರಾಟ ಮತ್ತು ಬರವಣಿಗೆಯಲ್ಲಿ ಒಲವುಸಂಪಾದಿಸಿ

ಹಿಂದೂ ಧರ್ಮ ಮತ್ತು ಮನುಸ್ಮೃತಿಗಳಿಂದ ತೀವ್ರ ಪ್ರಭಾವಿತರಾದ ಲಾಲಾ ಲಜಪತ ರಾಯ್ ಅವರು ರಾಜಕೀಯ ಹೋರಾಟ ಮತ್ತು ಬರವಣಿಗೆಗಳ ಕಡೆಗೆ ಅಪಾರ ಒಲವು ಬೆಳೆಸಿಕೊಂಡರು. ಹಿಂದೂ ಮಹಾಸಭಾದ ಕಾರ್ಯಕರ್ತರಾಗಿದ್ದ ಅವರು, ಹಿಂದೂ ಧರ್ಮದಲ್ಲಿ ಶಾಂತಿಯುತ ಹೋರಾಟಕ್ಕೆ ಮಹತ್ವವಿದೆ ಎಂದು ನಂಬಿದ್ದರು. ಇದೇ ಆಧಾರದ ಮೇಲೆ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಶಾಂತಿಯುತ ಚಳುವಳಿಗಳನ್ನು ಆಯೋಜಿಸತೊಡಗಿದರು.

ಸ್ವಾತಂತ್ರ್ಯ ಹೋರಾಟದಲ್ಲಿಸಂಪಾದಿಸಿ

ಆರ್ಯ ಸಮಾಜದಲ್ಲಿ ನಿಷ್ಠೆ ಹೊಂದಿದ್ದ ಅವರು ತಾವು ವಿದ್ಯಾರ್ಥಿಯಾಗಿದ್ದ ‘ಆರ್ಯ ಗೆಜೆಟ್’ನ ಸಂಪಾದಕರಾಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದ ಮೇಲೆ ಅವರು ಪಂಜಾಬಿನಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಪ್ರಾರಂಭಿಸಿದರು. ಇದರಿಂದಾಗಿ ಬ್ರಿಟಿಷ್ ಆಡಳಿತ ಅವರನ್ನು ಬರ್ಮಾದ ಮಂಡಾಲೈ ಎಂಬಲ್ಲಿಗೆ ಗಡೀಪಾರು ಮಾಡಿತ್ತು. ಕೆಲವು ತಿಂಗಳ ನಂತರದಲ್ಲಿ ಲಾರ್ಡ್ ಮಿಂಟೋ ಅವರಿಗೆ ಲಾಲಾ ಲಜಪತ ರಾಯ್ ಅವರು ವಿರುದ್ಧ ಇರುವ ಆರೋಪಗಳಿಗೆ ಸರಿಯಾದ ಸಾಕ್ಷಾಧಾರಗಳಿಲ್ಲ ಎನಿಸಿ ಭಾರತಕ್ಕೆ ಹಿಂದಿರುಗಲು ಪರವಾನಗಿ ನೀಡಿದರು.

೧೯೦೭ರಲ್ಲಿ ಅಮೆರಿಕಕ್ಕೆ ತೆರಳಿದ್ದ ಲಾಲಾ ಲಜಪತ್ ರಾಯ್ ಅವರು ೧೯೧೯ರಲ್ಲಿ ಭಾರತಕ್ಕೆ ಹಿಂದಿರುಗಿದರು. ಅವರು ರಚಿಸಿರುವ ಪ್ರವಾಸಿ ಕಥನದಲ್ಲಿ ಪ್ರಸಿದ್ಧ ಬರಹಗಾರರಾದ ಡಬ್ಲ್ಯೂ. ಇ. ಬಿ. ಡುಬೋಯಿಸ್ ಮತ್ತು ಫ್ರೆಡ್ರಿಕ್ ಡೌಗ್ಲಾಸ್ ಮುಂತಾದವರ ಅನೇಕ ಉಕ್ತಿಗಳನ್ನು ಯಥೇಚ್ಛವಾಗಿ ಉಲ್ಲೇಖಿಸಿದ್ದಾರೆ. ಲಜಪತ ರಾಯ್ ಅವರು ಲಾಹೋರಿನಲ್ಲಿ ಬ್ರಿಟಿಷ್ ವಿದ್ಯಾಸಂಸ್ಥೆಗಳಿಗೆ ಪರ್ಯಾಯವಾಗಿ ನ್ಯಾಷನಲ್ ಕಾಲೇಜು ಪ್ರಾರಂಭಿಸಿದಾಗ ಅದರಲ್ಲಿ ಭಗತ್ ಸಿಂಗ್ ಅವರೂ ವಿದಾರ್ಥಿಯಾಗಿದ್ದರು. ೧೯೨೦ರ ವರ್ಷದಲ್ಲಿ ಕಲ್ಕತ್ತಾದಲ್ಲಿ ನಡೆದ ವಿಶೇಷ ಕಾಂಗ್ರೆಸ್ ಅಧಿವೇಶನದಲ್ಲಿ ಲಾಲಾ ಲಜಪತ ರಾಯ್ ಆ ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಅಧಿವೇಶನದಲ್ಲಿ ಕೈಗೊಂಡ ನಿರ್ಣಯದ ಅನುಸಾರವಾಗಿ ಅಸಹಕಾರ ಚಳುವಳಿಯನ್ನು ಕೈಗೊಂಡಾಗ ೧೯೨೧ರಿಂದ ೧೯೨೩ರ ಅವಧಿಯವರೆಗೆ ಅವರು ಕಾರಾಗೃಹ ವಾಸವನ್ನು ಅನುಭವಿಸಿದರು. ಬಿಡುಗಡೆಯಾದ ಸಂದರ್ಭದಲ್ಲಿ ಅವರು ಲೆಜಿಸ್ಲೇಟಿವ್ ಅಸೆಂಬ್ಲಿಗೆ ಚುನಾಯಿತರಾದರು. ಪಂಜಾಬಿನ ವಿಭಜನೆಗೆ ಅವರು ಮಾತುಕತೆಗಳನ್ನು ಆಯೋಜಿಸಿದರು. ಈ ಕುರಿತು ಅವರು ೧೯೨೪ರ ವರ್ಷದಲ್ಲಿ ‘ದಿ ಟ್ರಿಬ್ಯೂನ್ ಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಸಿಖ್ ಮತ್ತು ಮುಸ್ಲಿಂ ಜನಸಂಖ್ಯೆಯನ್ನು ಆಧರಿಸಿ ಪಂಜಾಬನ್ನು ಪೂರ್ವ ಮತ್ತು ಪಶ್ಚಿಮ ಪಂಜಾಬುಗಳಾಗಿ ವಿಂಗಡಿಸಬೇಕೆಂಬ ವಾದವನ್ನು ಮಂಡಿಸಿದರು. ಅದೇ ರೀತಿಯಲ್ಲಿ ಅವರು ವಾಯವ್ಯ ಸೀಮಾ ಪ್ರದೇಶ, ಸಿಂದ್ ಮತ್ತು ಪೂರ್ವ ಬಂಗಾಳಗಳಲ್ಲಿ ಮುಸ್ಲಿಂ ರಾಜ್ಯಗಳನ್ನು ಪ್ರತ್ಯೇಕಿಸಬೇಕೆಂದು ಪ್ರತಿಪಾದಿಸಿದ್ದರು.

ಸಮಾಜ ಸೇವೆಸಂಪಾದಿಸಿ

ಲಾಲಾ ಲಜಪತ ರಾಯ್ ಅವರು ತಮ್ಮ ತಾಯಿ ಅವರು ೧೯೨೭ರ ವರ್ಷದಲ್ಲಿ ನಿಧನರಾದಾಗ ಅವರ ಹೆಸರಿನಲ್ಲಿ ಗುಲಾಬಿ ದೇವಿ ಟ್ರಸ್ಟ್ ಸ್ಥಾಪಿಸಿ ಅನೇಕ ಸೇವಾ ಕಾರ್ಯಗಳಿಗೆ ಪ್ರಾರಂಭ ನೀಡಿದ್ದರು.

ಮಾರಣಾಂತಿಕ ಲಾಠಿ ಪೆಟ್ಟುಸಂಪಾದಿಸಿ

೧೯೨೮ರ ವರ್ಷದಲ್ಲಿ ಭಾರತದಲ್ಲಿನ ಪರಿಸ್ಥಿತಿಯನ್ನು ವರದಿ ಮಾಡಲು ನಿಯಮಿತಗೊಂಡಿದ್ದ ಸರ್ ಜಾನ್ ಸೈಮನ್ ನೇತೃತ್ವದ ಆಯೋಗದಲ್ಲಿ ಒಬ್ಬರೇ ಒಬ್ಬರೂ ಭಾರತೀಯ ಪ್ರತಿನಿಧಿಗಳು ಇರಲಿಲ್ಲ ಎಂಬ ನಿಟ್ಟಿನಲ್ಲಿ ಭಾರತೀಯ ಸಂಘಟನೆಗಳು ಅದನ್ನು ಬಹಿಷ್ಕರಿಸಲು ತೀರ್ಮಾನ ಕೈಗೊಂಡು ದೇಶದಾದ್ಯಂತ ಚಳುವಳಿಯನ್ನು ನಡೆಸಿದವು. ಅಕ್ಟೋಬರ್ 30, 1928ರಂದು ಸೈಮನ್ ಆಯೋಗವು ಲಾಹೋರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಲಾಲಾ ಲಜಪತರಾಯ್ ಅವರು ಶಾಂತಿಯುತ ಮೆರವಣಿಗೆಯ ನೇತೃತ್ವ ವಹಿಸಿದರು. ಆ ಸಂದರ್ಭದಲ್ಲಿ ಪೋಲಿಸ್ ಸೂಪರಿಂಟೆಂಡೆಂಟ್ ಜೇಮ್ಸ್ ಎ. ಸ್ಕಾಟ್ ಎಂಬ ದುರಹಂಕಾರಿಯು ಮೆರವಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡುವ ಆದೇಶವಿತ್ತದ್ದೇ ಅಲ್ಲದೆ ಲಾಲಾ ಲಜಪತ ರಾಯ್ ಅವರ ಮೇಲೆ ಸ್ವಯಂ ಆಕ್ರಮಣ ನಡೆಸಿ ಅವರು ತೀವ್ರವಾಗಿ ಗಾಯಗೊಳ್ಳುವುದಕ್ಕೆ ಕಾರಣನಾದನು. ಈ ತೀವ್ರ ಪೆಟ್ಟುಗಳಿಂದ ಹೊರಬರಲಾಗದ ಲಾಲಾ ಲಜಪತ ರಾಯ್ ಅವರು ನವೆಂಬರ್ ೧೭, ೧೯೨೮ರಂದು ಹೃದಯಾಘಾತದಿಂದ ನಿಧನರಾದರು. ಸ್ಕಾಟನ ಈ ದುಷ್ಕೃತ್ಯ ಮಹಾನ್ ದೇಶಭಕ್ತ, ವಿದ್ವಾಂಸ, ಅಹಿಂಸಾ ಪ್ರವೃತ್ತಿಯ ಶಾಂತಿದೂತರೆನಿಸಿದ್ದ ಲಾಲಾ ಲಜಪತ ರಾಯ್ ಅವರ ಮರಣಕ್ಕೆ ಕಾರಣವಾಯಿತು. ಇದರಿಂದ ತೀವ್ರವಾಗಿ ನೊಂದ ಭಗತ್ ಸಿಂಗ್, ರಾಜ ಗುರು, ಸುಖದೇವ್ ಥಾಪರ್, ಚಂದ್ರಶೇಖರ್ ಆಜಾದ್ ಅಂತಹ ವೀರರು ತೀವ್ರ ಹೋರಾಟಕ್ಕಿಳಿದು ದೇಶಕ್ಕೆ ಪ್ರಾಣಾರ್ಪಣೆ ಮಾಡಿದರು.

ಲಾಲಾ ಲಜಪತರಾಯರ ಹೆಸರಿನಲ್ಲಿಸಂಪಾದಿಸಿ

೧೯೫೯ರ ವರ್ಷದಲ್ಲಿ ಲಾಲಾ ಲಜಪತ ರಾಯ್ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಲಾಲಾ ಲಜಪತ ರಾಯ್ ಟ್ರಸ್ಟ್ ಆರಂಭಿಸಿ ಶಿಕ್ಷಣಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಇದನ್ನು ಪಂಜಾಬಿನ ಹಲವಾರು ಗಣ್ಯರಾದ ಆರ್. ಪಿ. ಗುಪ್ತಾ, ಬಿ. ಎಂ. ಗ್ರೋವರ್ ಮುಂತಾದವರು ಸಂಘಟಿಸಿದರು. ಇದರಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಲಾಲಾ ಲಜಪತ ರಾಯ್ ಅವರ ಹೆಸರಿನಲ್ಲಿ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳು ಮೂಡಿಬಂದವು.
ಜೈ ಹಿಂದ್
ವಂದೇಮಾತರಮ್

26.1.18

ಗಣರಾಜ್ಯೋತ್ಸವ ಸಂಭ್ರಮದ ಕ್ಷಣಗಳು

ನೀವು ನಿಮ್ಮ ಶಾಲೆಯಲ್ಲಿ ಜರುಗಿದ ಗಣರಾಜ್ಯೋತ್ಸವ ದ ಸುಂದರ ಕ್ಷಣಗಳ ಫೋಟೋಗಳನ್ನು ಪ್ರಕಟಿಸಲು 9611311195 ವಾಟ್ಸ್ಯಾಪ್ ಗೆ ಕಳುಹಿಸಿ. 

**********************"**"******
JSS high school konanakunte Bangalore

****************************
Ghps pudakalakatti tq ಗೋಕಾಕ ©©=>

****************************










25.1.18

ಗಣರಾಜ್ಯೋತ್ಸವ

ಗಣರಾಜ್ಯೋತ್ಸವ

(ಕೃಪೆ : ಅಂತರ್ಜಾಲ)



ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ ೨೬ ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸ೦ವಿಧಾನ ಜಾರಿಗೆ ಬ೦ದು ಭಾರತವು ಗಣರಾಜ್ಯವಾದದ್ದು ಜನವರಿ ೨೬, ೧೯೫೦ ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯಂತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದುಂಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಭೇರಿ ನಡೆಯುತ್ತದೆ.

ಇತಿಹಾಸ

ಆಗಸ್ಟ್ ೧೫ ೧೯೪೭ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ ೨೯ರಂದು ಡಾ. ಅಂಬೇಡ್ಕರ್ ರವರ ನೇತೃತ್ವದಲ್ಲಿ ಎರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ ೪ ೧೯೪೭ರಂದು ಶಾಸನಸಭೆಯಲ್ಲಿ ಮಂಡಿಸಿತು.ನವೆಂಬರ್೨೬,೧೯೪೯ ರಂದು ಅಂಗೀಕರಿಸಲ್ಪಟ್ಟು ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ ೨೬ ೧೯೫೦ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತದ ಸ್ವಾತ೦ತ್ರ್ಯ ಚಳುವಳಿಯಲ್ಲಿ ಜನವರಿ ೨೬, ೧೯೨೯ ರಂದು ಭಾರತ ರಾಷ್ಟ್ರೀಯ ಕಾ೦ಗ್ರೆಸ್ ಪೂರ್ಣ ಸ್ವರಾಜ್ಯದ ಧ್ಯೇಯವನ್ನು ಹಾಕಿಕೊ೦ಡಿತ್ತು. ಲಾಹೋರ್ನಲ್ಲಿ ನಡೆದ ಕಾ೦ಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊ೦ಡು ಈ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎಂದು ಘೋಷಿಸಲಾಗಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತ೦ತ್ರ್ಯಾನ೦ತರ ಭಾರತದ ಸ೦ವಿಧಾನವನ್ನು ಈ ದಿನದ೦ದೇ ಜಾರಿಗೆ ತರಲಾಯಿತು.


20.1.18

ಅಂಬಿಗರ ಚೌಡಯ್ಯ

ಅಂಬಿಗರ ಚೌಡಯ್ಯ


12ನೆಯ ಶತಮಾನದ ಬಸವಣ್ಣನವರ ಕಾಲದ ಒಬ್ಬ ವಚನಕಾರ. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ. ಬಸವಣ್ಣನವರ ಅನುಭವಮಂಟಪದಲ್ಲಿ ಸಮಾನಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವ. ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳ ಅಂಕಿತವಾಗಿದೆ. ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳವ ಎಂದು ಹೇಳಿಕೊಳ್ಳುವುದರಲ್ಲಿ ತನ್ನ ಅನುಭಾವದೃಷ್ಟಿಯನ್ನು ಪ್ರಕಟಿಸಿದ್ದಾನೆ.[೧]

ಅಂಬಿಗರ ಚೌಡಯ್ಯಜನನ೧೧೬೦
ಚೌಡದಾನಪುರ,ರಾಣಿಬೆನ್ನೂರು ತಾಲೂಕು.ಅಂಕಿತನಾಮಅಂಬಿಗರ ಚೌಡಯ್ಯ


ಉಳಿದ ವಚನಕಾರರ ವಚನಗಳಲ್ಲಿರುವಂತೆ ಇವನಲ್ಲಿಯೂ ಶಿವಾನುಭವಪರವಾದ ವಚನಗಳಿದ್ದರೂ ಅವುಗಳಲ್ಲಿ ಕಂಡುಬರುವ ಸಮಕಾಲೀನ ಸಮಾಜ ವಿಡಂಬನೆಯ ವ್ಯಗ್ರದೃಷ್ಟಿ ಬೇರೆಯವರಲ್ಲಿ ವಿರಳವೆಂದೇ ಹೇಳಬೇಕು. ಅವನ ವಚನಗಳ ವಸ್ತು, ಭಾಷೆ, ಶೈಲಿ ಗಮನಿಸಿದರೆ ಅವನೊಬ್ಬ ಕೆಚ್ಚೆದೆಯ, ನಿಷ್ಠುರಪ್ರಕೃತಿಯ, ಗ್ರಾಮ್ಯಮನೋಧರ್ಮದ ಒರಟು ವಚನಕಾರ ಎಂಬುದು ಸ್ಪಷ್ಟವಾಗುತ್ತದೆ. ಅವನು ನ್ಯಾಯನಿಷ್ಠುರ, ದಯಾದಾಕ್ಷಿಣ್ಯಪರನಲ್ಲ. ಯಾರನ್ನೇ ಆಗಲಿ ಯಾವುದನ್ನೇ ಆಗಲಿ ಅವನು ಟೀಕಿಸದೆ ಬಿಡುವುದಿಲ್ಲ. ಅವನು ಮೃದುವಾಗಿ ಮಾತನಾಡುವುದು ಅಪುರ್ವ; ಮಾತಿನ ಬಹುಭಾಗ ಹರಿತವಾದದ್ದು, ಸಂಸ್ಕಾರದೂರವಾದದ್ದು. ‘ಕೇಳಿರಯ್ಯ ಮಾನವರೇ’, ‘ಶೀಲದಲ್ಲಿ ಸಂಪನ್ನರಾದವರು ನೀವು ಕೇಳಿರೋ’, ‘ನನಗೊಬ್ಬರೆಂಜಲು ಸೇರದೆಂದು ಶುಚಿತನದಲ್ಲಿ ಬದುಕುವ ಬರಿಯ ಮಾತಿನ ಭುಂಜಕರು ನೀವು ಕೇಳಿರೋ’, ‘ಪರಪುರುಷಾರ್ಥವನರಿಯದೆ ಕೆಟ್ಟನರ ಕುರಿಗಳು ನೀವು ಕೇಳಿರೋ’ ಎಂದು ಆರಂಭವಾಗಿ ‘ಮೆಟ್ಟಿದ್ದ ದೊಡ್ಡ ಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆಯೆಂದ’, ‘ಪಡಿಹಾರ ಉತ್ತಣ್ಣನ ಎಡಪಾದರಕ್ಷೆಯಿಂದ ಪಟಪಟನೆ ಹೊಡೆಯೆಂದ’, ‘ಮೂಗ ಕೊಯ್ದು ಇಟ್ಟಂಗಿಯ ಕಲ್ಲಿಲೆ ಸಾಸಿವೆಯ ತಿಕ್ಕಿ ಹಿಟ್ಟಿನ ತಳಿದು ಮೇಲೆ ನಿಂಬೆಯ ಹುಳಿಯನೆ ಹಿಂಡಿ ಪಡುವಲ ಗಾಳಿಗೆ ಹಿಡಿ’-ಹೀಗೆ ಮುಕ್ತಾಯವಾಗುತ್ತದೆ, ಇವನ ವಚನಗಳ ಶೈಲಿ. ಹಳೆಯ ಮತ್ತು ಹೊಸ ನಂಬಿಕೆಗಳ ಅವಸ್ಥಾಂತರದ ಅವ್ಯವಸ್ಥೆಯಲ್ಲಿದ್ದ ಅಂದಿನ ವೀರಶೈವ ಸಮಾಜದ ಲೋಪದೋಷಗಳನ್ನು ನಿರ್ದಾಕ್ಷಿಣ್ಯವಾಗಿ ಎತ್ತಿ ತೋರಿಸುವ ಅಂಬಿಗರ ಚೌಡಯ್ಯನ ಈ ವಚನಗಳು ಬಹುಶಃ ಅಂದಿನ ಸಾಮಾಜಿಕ ಆವಶ್ಯಕತೆಯ ಪರಿಣಾಮಗಳೆಂದು ನಾವು ಭಾವಿಸಬಹುದು. ಅಂಬಿಗರ ಚೌಡಯ್ಯನ ವಚನಗಳಿಂದ ನಮಗೆ ಕಂಡುಬರುವ ಸಮಾಜದ ಅವ್ಯವಸ್ಥೆಯ ಚಿತ್ರ, ಬೇರೆಯವರಲ್ಲಿ ನಮಗೆ ಇಷ್ಟರಮಟ್ಟಿಗೆ ಕಾಣದು. ಅವನ ವಚನಗಳಲ್ಲಿ ನಿಜಶರಣನ ಮೊರೆತದ ಜೊತೆಗೆ ಸುಧಾರಕನ ಕಟುಟೀಕೆಯೂ ಕೇಳಿಬರುತ್ತದೆ. ಅವನ ವಚನಗಳು ಅನರ್ಥ ಸಾಧಕವಾದ ಕೋಪದಿಂದ ಹೊಮ್ಮಿದುವಲ್ಲ; ಸದರ್ಥಸಾಧಕವಾದ ಸತ್ಕೋಪದಿಂದ ಹೊಮ್ಮಿರುವುವು. ಕನ್ನಡ ಸಾಹಿತ್ಯದಲ್ಲಿ ಈ ಬಗೆಯ ದಿಟ್ಟತನ, ವ್ಯಗ್ರತೆ ಕಂಡುಬರುವುದು ಬಹುಶಃ ಇಬ್ಬರಲ್ಲೇ ಎಂದು ತೋರುತ್ತದೆ. ಒಬ್ಬ ಸಿಡಿಲು ನುಡಿಯ ಸರ್ವಜ್ಞ; ಇನ್ನೊಬ್ಬ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ.

ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಇವರ ವಚನಗಳ ಅಂಕಿತ "ಅಂಬಿಗರ ಚೌಡಯ್ಯ".

ನೇರ ನಡೆ ನೇರ ನುಡಿಯ ಅಂಬಿಗರ ಚೌಡಯ್ಯನವರ ವಚನಗಳು ಈ ರೀತಿಯಾಗಿವೆ.

ಕಟ್ಟಿದ ಲಿಂಗವ ಬಿಟ್ಟು
ಬೆಟ್ಟದ ಲಿಂಗಕೆ ಹೋಗಿ
ಅಡಿ ಮೇಲಾಗಿ ಬೀಳುವ
ಲೊಟ್ಟೆ ಮೂಳರ ಕಂಡರೆ
ಗಟ್ಟಿ ಪಾದರಕ್ಷೆಯ ತೆಗೆದುಕೊಂಡು
ಟೊಕ ಟೊಕನೆ ಹೊಡೆಯೆಂದ ನಮ್ಮ ಅಂಬಿಗರ ಚೌಡಯ್ಯ ||

ಅಂಬಿಗರ ಚೌಡಯ್ಯನವರ ವಚನಗಳುಸಂಪಾದಿಸಿ

ಬಡತನಕ್ಕೆ ಉಂಬುವ ಚಿಂತೆ, ಉಣಲಾರದೆ ಉಡುವ ಚಿಂತೆ (ಲಾದರೆ)?
ಉಡಲಾರದೆ ಇಡುವ ಚಿಂತೆ, ಇಡಲಾದರೆ ಹೆಂಡಿರ ಚಿಂತೆ (ಲಾದರೆ)?
ಹೆಂಡಿರಾದರೆ ಮಕ್ಕಳ ಚಿಂತೆ, ಮಕ್ಕಳಾದರೆ ಬದುಕಿನ ಚಿಂತೆ
ಬದುಕಾದರೆ ಕೇಡಿನ ಚಿಂತೆ, ಕೇಡಾದರೆ ಮರಣದ ಚಿಂತೆ
ಇಂತೀ ಹಲವು ಚಿಂತೆಯಲ್ಲಿ ಇಪ್ಪವರನ್ನು ಕಂಡೆನು
ಶಿವನ ಚಿಂತೆಯಲಿದ್ದವರೊಬ್ಬರನು ಕಾಣೆನೆಂದಾತ
ನಮ್ಮ ಅಂಬಿಗರ ಚೌಡಯ್ಯ ನಿಜ ಶರಣರು

19.1.18

ಮಹಾಯೋಗಿ ವೇಮನ

🌹✍ *ಮಹಾಯೋಗಿ ವೇಮನ*



🙏 *ಸರ್ವರಿಗೂ ವೇಮನ ಜಯಂತಿಯ ಶುಭಾಶಯಗಳು*

🔜 *ವೇಮನ ೧೫ನೇ ಶತಮಾನದ ತೆಲಗು ಕವಿಗಳಲ್ಲಿ ಪ್ರಮುಖ ಹೆಸರು. ಕನ್ನಡದ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ಮಾಹಾಕವಿ, ಮಹಾಯೋಗಿಯಾಗಿದ್ದಾನೆ.*

🌹 *ಜನನ, ಜೀವನ*

*ವೇಮನ ಸಿದ್ಧಾಪುರ ಸಮೀಪದ ಕುಮಾರಗಿರಿಯ ವೇಮರೆಡ್ಡಿಯ ಮಗ. ವೇಮನ ಹೆತ್ತವರಿಂದ, ಒಡಹುಟ್ಟಿದವರಿಂದ, ಸಂಬಂಧಿಕರಿಂದ ಅನಾದಾರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗುತ್ತಾನೆ.*

🌹 *ಭೋಗಾಸಕ್ತನಾಗಿ*

*ಪರಸ್ತ್ರೀ ಸಂಗದಲ್ಲಿ ವಿಚಯಾಸಕ್ತನಾದ ವೇಮನ ಭೋಗಾಸಕ್ತನಾಗಹುತ್ತಾನೆ. ವೇಶ್ಯಾಸ್ತ್ರೀಯೊಬ್ಬಳ ಸಹವಾಸ ಮಾಡಿ, ಮನೆಯ ಸಂಪತ್ತನ್ನೇಲ್ಲಾ ಹಾಳುಗೆಡವುತ್ತಾನೆ. ವೇಮನನಿಗೆ ಅತ್ತಿಗೆಯಾಗಿ ಬಂದ ಹೇಮರೆಡ್ಡಿ ಮಲ್ಲಮ್ಮ ಮೈದುನನ ಮನ ತಿದ್ದುವಲ್ಲಿ ಪ್ರಯತ್ನಿಸಿ ಸಫಲಳಾಗುತ್ತಾಳೆ.*

🌹 *ಮೂಗುತಿಯಿಂದ ಮನಪರಿವರ್ತನೆ*

*ದುಶ್ಚಟಗಳ ದಾಸನಾದ ವೇಮನ ವೇಶ್ಯಾಸ್ತ್ರೀಯೊಬ್ಬಳ ಮನದಾಸೆ ಈಡೇರಿಸಲು, ಅತ್ತಿಗೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಬೇಕೆಂದು ಕೇಳುತ್ತಾನೆ. ಹೇಮರೆಡ್ಡಿ ಮಲ್ಲಮ್ಮ ಮೈದುನನಾದ ವೇಮನನಿಗೆ ಮೂಗುತಿ ಕೊಡಲು ಒಪ್ಪಿ ಕರಾರೊಂದನ್ನು ವಿಧಿಸುತ್ತಾಳೆ.*

🌹 *ಹೇಮರೆಡ್ಡಿ ಮಲ್ಲಮ್ಮನ ಕರಾರು*

*"ವೇಮನ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಆ ವೇಶ್ಯಾಸ್ತ್ರೀಗೆ ಕೊಡುವಾಗ, ಆಕೆ ನಗ್ನಳಾಗಿ ಬಂದು ವೇಮನ ಕುಳಿತದ್ದ ಮಂಚವನ್ನು ಮೂರು ಸುತ್ತು ಸುತ್ತಬೇಕು. ಮೂರು ಸುತ್ತು ಹಾಕಿದ ನಂತರ ಹಿಂಬದಿಗೆ ಬಾಗಿ, ಎರಡು ಕಾಲುಗಳ ನಡುವೆ ಬಗ್ಗಿ ಕೈ ಚಾಚಿ ವೇಮನನಿಂದ ಮೂಗುತಿಯನ್ನು ಪಡೆಯಬೇಕು. ಅವಳು ಆ ಮೂಗುತಿಯನ್ನು ಪಡೆಯುವವರೆಗೂ ವೆಮನ ಆಕೆಯ ನಗ್ನದೇಹವನ್ನು ತದೇಕ ಚಿತ್ತನಾಗಿ ನೋಡಬೇಕು". ವೇಮನ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ಮಾತನ್ನು ಚಾಚು ತಪ್ಪದೆ ಪಾಲಿಸುತ್ತಾನೆ.*

🌹 *ವಚನಕಾರನಾಗಿ*

*ವೇಮನ ತನ್ನ ಪ್ರೇಯಸಿಯ ನಗ್ನ ಶರೀರವನ್ನು ಕಂಡೊಡನೆ ಅವನೊಳಗೆ ಭಯಂಕರವಾದ ಜಿಗುಪ್ಸೆ, ಅಸಹ್ಯಭಾವನೆ ಆವರಿಸಿ ಒಡನೆಯೇ ಗಾಭರಿಗೊಂಡು ಕಣ್ಮುಚ್ಚಿ -*

ತಾಯಿಯ ಗರ್ಭದಿಂದ ತಾಂ ಬರುವ ಸಮಯದಿ
ಮೊದಲು ವಸ್ತ್ರಮಿಲ್ಲ, ತುದಿಗುಮಿಲ್ಲ
ನಡುವೆ ಬಟ್ಟೆಯುಡುವುದೇಕೆಂದು ತಿಳಿಯಿರಿ
ವಿಶ್ವತೋಭಿರಾಮ ಕೇಳುವೆ ಮಾ||

*ಎಂದು ತತ್ವ್ತಜ್ಞಾನ ಹೇಳುತ್ತಾ, ತಾನು ನಗ್ನನಾಗಿ ವೈರಾಗಿಯಂತೆ ಕಾಲ್ತೆಗೆದು ಹೊರ ಹೋರಟವನು, ಮುಂದೆ ತನ್ನ ಸಾಧನೆಯಿಂದ ಮಹಾಯೋಗಿಯಾದನು*

➖➖➖➖➖➖➖➖➖➖➖

✍🌹 *ಸ್ವಾನುಭವ ಸಾರ್ವಭೌಮ ಮಹಾಯೋಗಿ ವೇಮನ*

Friday, 19.01.2018,
(ಗೋವಿಂದಪ್ಪ ಬ. ಗೌಡಪ್ಪಗೋಳ)

👍 ಜೀವನ ಮೌಲ್ಯಗಳಲ್ಲಿ ಕುಸಿತ ಕಂಡಾಗಲೆಲ್ಲ ಸತ್ಪುರುಷರು, ಯೋಗಿಗಳು, ಸಂತರು ಜನಿಸಿ ಭಕ್ತಿ, ಜ್ಞಾನ, ಕರ್ಮ ಮಾರ್ಗಗಳ ಮೂಲಕ ಜೀವನ ಮೌಲ್ಯಗಳನ್ನು ಪ್ರತಿಪಾದಿಸಿದ್ದಾರೆ, ಪ್ರಚುರಪಡಿಸಿದ್ದಾರೆ ಹಾಗೇ ಪ್ರತಿಷ್ಠಾಪಿಸಿದ್ದಾರೆ.

ರಾಮ, ಕೃಷ್ಣ, ಬುದ್ಧ, ಬಸವ ಮುಂತಾದ ಲೋಕ ಪೂಜ್ಯನೀಯರಂತೆ ಮೇರುಪಂಕ್ತಿಯಲ್ಲಿ ನಿಲ್ಲುವ ಮತ್ತೋರ್ವ ದಿವ್ಯ ಚೇತನ, ದೈವೀಸಂಭೂತರೆಂದರೆ ಶ್ರೇಷ್ಠ ದಾರ್ಶನಿಕ, ತತ್ವದರ್ಶಕ, ಸಮಾಜ ಸುಧಾರಕ, ಮಹಾಯೋಗಿ ವೇಮನರು.

ವೇಮನರೇ ತಮ್ಮ ಒಂದು ಪದ್ಯದಲ್ಲಿ ‘ಉಂಟು ಉಂಟು ಜ್ಞಾನಿ ಯುಗ ಯುಗಾದಿ ಕಳೆಯೆ’ ಎಂದು ಹೇಳಿದಂತೆ ಯುಗವೆಂದರೆ ಆಧ್ಯಾತ್ಮಿಕ ಪ್ರಗತಿಯ ಹಂತ. ಪ್ರತಿ ಯುಗದಲ್ಲಿ ಜ್ಞಾನಿಗಳು ಇದ್ದೆ ಇರುತ್ತಾರೆ. ಅಧರ್ಮ ಹೆಚ್ಚಾದಾಗ ಜನರು ಮತ್ತೆ ಧರ್ಮದ ಮಾರ್ಗದಲ್ಲಿ ನಡೆಯುವಂತೆ ಮಾಡಲು, ಅವರಿಗೆ ಸೂಕ್ತ ಮಾರ್ಗದರ್ಶನ ಮಾಡುವುದೇ ಜ್ಞಾನಿಗಳ ಬರುವಿಕೆಯ ಉದ್ದೇಶ. ಹಾಗೆ ಬಂದವರು ದಿಗಂಬರ ವೇಮನರು.

🌹 *ಯಾರೀ ವೇಮನರು?:*

ಕರ್ನಾಟಕದ ಪೂವೋತ್ತರಕ್ಕೆ ಹಬ್ಬಿರುವ ಆಂಧ್ರಪ್ರದೇಶದ ಬಹು ಭಾಗವನ್ನು ಕ್ರಿ.ಶ. 1323ರಿಂದ ಕ್ರಿ.ಶ. 1424ರ ವರೆಗೆ ರಾಜ್ಯಭಾರ ಮಾಡಿದ ರಡ್ಡಿ ರಾಜವಂಶದ 5ನೇ ರಾಜನಾದ ಕುಮಾರಗಿರಿರಡ್ಡಿ (ಕ್ರಿ.ಶ.1386-1402) ಮತ್ತು ಮಲ್ಲಮಾಂಬೆಯ ಐವರು ಮಕ್ಕಳಲ್ಲಿ ನಾಲ್ಕನೆಯ ಮಗನಾಗಿ ಜನಿಸಿದವರೇ ವೇಮನರು.

ಆಂಧ್ರಪ್ರದೇಶದ ಕೊಂಡವೀಡು ಪಟ್ಟಣದ ಸಮೀಪದಲ್ಲಿರುವ ಮೂಗಚಿಂತಪಲ್ಲಿಯಲ್ಲಿ ಕ್ರಿ.ಶ. 1412 ರಲ್ಲಿ ವೇಮನರ ಜನನ. ಅವರ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅವರನ್ನು ಶ್ರೇಷ್ಠ ಸಂತನನ್ನಾಗಿಸಿವೆ, ಜ್ಞಾನಿಯನ್ನಾಗಿಸಿವೆ, ಯೋಗಿಯನ್ನಾಗಿಸಿವೆ. ಹಾಗೆಯೇ ವೇಮನರು ಮಹಾಯೋಗಿಯಾಗಲಿಕ್ಕೆ, ಶ್ರೇಷ್ಠ ಸಾಹಿತ್ಯ ರಚನೆಗೆ ಅವರ ಬದುಕಿನಲ್ಲಿ ನಡೆದ ಅವಾಂತರವೇ ಕಾರಣವಾಯಿತು.

ಭೋಗವಿಲಾಸದಲ್ಲಿ ಮುಳುಗಿದ, ವಿಷಯಾಸಕ್ತನಾದ ವೇಮನರನ್ನು ಮಹಾಸಾಧಿ್ವ ಹೇಮರಡ್ಡಿ ಮಲ್ಲಮ್ಮ ತನ್ನ ಮುತ್ತಿನ ಮೂಗುತಿಯ ಬಲದಿಂದ ಒಬ್ಬ ಯೋಗಸಾರ್ವಭೌಮನನ್ನಾಗಿ ಮಾಡಿದ ಕಥೆ ಜಗದ ಜನರಲ್ಲಿ ಯಾರಿಗೆ ಗೊತ್ತಿಲ್ಲ ಹೇಳಿ?

ಸರ್ವಜ್ಞ-ತಿರುವಳ್ಳುವರರಂತೆ: ವೇಮನರು, ಕನ್ನಡದ ಸರ್ವಜ್ಞನಂತೆ ಮತ್ತು ತಮಿಳಿನ ತಿರುವಳ್ಳುವರ್​ರಂತೆ ಸ್ವಾನುಭವ ಸಾರ್ವಭೌಮರು. ಇವರು ಆಟವೆಲದಿ ಛಂದಸ್ಸಿನಲ್ಲಿ ಇಹಲೌಕಿಕ ಮತ್ತು ಪಾರಲೌಕಿಕ ವಿಷಯಗಳೆಲ್ಲವುಗಳ ಮೇಲೆ ತ್ರಿಕಾಲಬಾಧಿತವಾದ ಸ್ವಾನುಭವ ಸಾಹಿತ್ಯ ರಚಿಸಿದ್ದಾರೆ. ಜನರ ಆಡು-ಭಾಷೆಯಲ್ಲಿ ರಚಿಸಿದ ಇವರ ಪದ್ಯಗಳು ಮಾನವನ ಜೀವಿತದಲ್ಲಿ ಮನನ ಮಾಡಿ ಅನುಷ್ಠಾನ ಮಾಡುವಂತಹ ಅಮೂಲ್ಯ ರತ್ನಗಳಾಗಿವೆ.

ವೇಮನರ ಮಾತುಗಳು ಬರಿಯ ಮಾತುಗಳಲ್ಲ. ಅವುಗಳು ವೇದವೇ ಆಗಿವೆ. ನಮ್ಮ ಜನ ವೇಮನರ ಕುರಿತು, ‘ವೇದಾತೀತನು ವೇಮನು ಕಾಣಾ, ವೇಮನ ಮಾತದು ವೇದವು ಕಾಣಾ’ ಎಂದು ಹಾಡಿದ್ದಾರೆ.

ಕೈವಾರ ನಾರೇಯಣ ಯತೀಂದ್ರರು ಕ್ರಿ. ಶ. 1800ರಷ್ಟು ಹಿಂದೆಯೇ ವೇಮನರ ಪದ್ಯಗಳನ್ನು ಪ್ರಥಮ ಬಾರಿಗೆ ಅಧ್ಯಯನ ಮಾಡಿ ಅವುಗಳ ಮಹತ್ವ ದೃಢಪಡಿಸಿ, ಯೋಗಿ ವೇಮನರನ್ನು ವಾಲ್ಮೀಕಿ, ವ್ಯಾಸರೊಂದಿಗೆ ಹೋಲಿಸಿದ್ದಾರೆ. ವ್ಯಾಸ, ವಾಲ್ಮೀಕಿಯರು ಪಂಡಿತ ಋಷಿಗಳಾದರೆ, ವೇಮನರು ಪಾಮರ ಋಷಿ. ಯಾಕೆಂದರೆ ಅವರು ತಮ್ಮ ಮಾತೃಭಾಷೆ ತೆಲುಗಿನಲ್ಲಿ ಬರೆದ ಶೈಲಿ ಸುಲಭವಾಗಿದೆ, ಬಳಸಿದ ಭಾಷೆ ಜನಸಾಮಾನ್ಯರ ಭಾಷೆಯಾಗಿದೆ.

ಉದಾತ್ತಯೋಗಿ ವೇಮನರನ್ನು ಕನ್ನಡಿಗರಿಗೆ ಹಾಗೂ ಅವರ ಶ್ರೇಷ್ಠ ಸಾಹಿತ್ಯವನ್ನು ಕನ್ನಡ ಸಾರಸ್ವತಲೋಕಕ್ಕೆ ಪರಿಚಯಿಸುವಂಥ ಕಾರ್ಯವನ್ನು ಬಹಳ ಉತ್ಕೃಷ್ಟವಾಗಿ ಮೊದಲು ಮಾಡಿದವರು ದಿ. ಎಸ್. ಆರ್. ಪಾಟೀಲರು. ಕರ್ನಾಟಕ ವಿಶ್ವವಿದ್ಯಾಲಯದ ವೇಮನ ಪೀಠಕ್ಕೆ ಅವರು ವೇಮನರ ಪದ್ಯಗಳನ್ನು ಕನ್ನಡದಲ್ಲಿ ಅನುವಾದ ಮಾಡಿರುವುದಲ್ಲದೆ, ಹತ್ತಾರು ಕೃತಿಗಳನ್ನು ವೇಮನ ಪೀಠಕ್ಕೆ ನೀಡಿದ್ದಾರೆ. ಈ ಕೃತಿಗಳಲ್ಲಿ ಎರಡು ಸಂಪುಟಗಳಲ್ಲಿ ಪ್ರಕಟವಾಗಿರುವ 1600 ಪುಟಗಳುಳ್ಳ ‘ವೇಮನರ ಯೋಗ ಮೀಮಾಂಸೆ’ ಶ್ರೇಷ್ಠ ಗ್ರಂಥವಾಗಿ ಹೊರಹೊಮ್ಮಿದೆ.

ವೇಮನರ ಪದ್ಯಗಳಲ್ಲಿರುವ ತಾತ್ವಿಕ ಚಿಂತನೆಗಳನ್ನು ಭಾರತದ ವಿಭಿನ್ನ ತತ್ತ್ವಗಳಿಗೆ ತುಲನೆ ಮಾಡಿ ವೇಮನರ ನಿಲುವು ಎತ್ತಿ ತೋರಿಸಿದ್ದಾರೆ. ರಾಮರೆಡ್ಡಿ, ಬಿ. ಭೀಮರಾಜು ಮತ್ತು ಎಂ. ದೇವರಕೊಂಡಪ್ಪ ಅವರೂ ವೇಮನರ ಪದ್ಯಗಳನ್ನು ಕನ್ನಡದಲ್ಲಿ ಅನುವಾದಿಸಿ, ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ್ದಾರೆ.

ವೇಮನರ ಪದ್ಯಗಳು ಕನ್ನಡ, ತಮಿಳು, ಮಲೆಯಾಳಿ, ಇಂಗ್ಲಿಷ್ ಮುಂತಾದ ಭಾಷೆಗಳಿಗೆ ಅನುವಾದಗೊಂಡಿವೆ. ಹೀಗಾಗಿ ವೇಮನರ ಸಾಹಿತ್ಯ ಈ ಎಲ್ಲ ಭಾಷಾ ಸಾಹಿತ್ಯಗಳನ್ನು ಶ್ರೀಮಂತಗೊಳಿಸಿರುವುದಲ್ಲದೆ, ವಿಶ್ವ- ಸಾಹಿತ್ಯಕ್ಕೂ ಭೂಷಣಪ್ರಾಯವಾಗಿದೆ.

🌹🌹 *ಮಾನವತಾ ಧರ್ಮ:*

ವೇಮನರ ಧರ್ಮ ಮಾನವತಾ ಧರ್ಮವಾಗಿದೆ. ಅತ್ಯಂತ ಉತ್ಕೃಷ್ಟ ನಿಲುವು ವೇಮನರದು. ಅವರ ನೋಟ ವಿಶಾಲವಾಗಿತ್ತು. ‘ಉದಾರ ಚರಿತಾನಾಂ ವಸುಧೈವ ಕುಟುಂಬಕಂ’ ಎಂಬಂತೆ ವೇಮನರು ವಿಶ್ವ ಮಾನವತೆ ಕುರಿತು ಚಿಂತಿಸಿದ್ದಾರೆ. ವಿಶ್ವ ಸೋದರ ಭಾವದ ಕನಸು ಕಂಡಿದ್ದಾರೆ. ಅವರು ವಿಶ್ವಕುಟುಂಬಿ ಮತ್ತು ವಿಶ್ವಪ್ರೇಮಿ. ದೇಶ, ಭಾಷೆ, ಮತ, ಭೇದಗಳ ಸಂಕುಚಿತ ಆವರಣ ತೊರೆದ ವ್ಯಕ್ತಿತ್ವ. ಈ ಪದ್ಯದಿಂದ ಅವರ ಸ್ಪಷ್ಟ ನಿಲುವು ನಮಗೆ ಗೊತ್ತಾಗುತ್ತದೆ.

‘ಊರ್ವ ವಾಸಿಗೆಲ್ಲ ಒಂದೇ ತಾಟವನಿಟ್ಟು

ಸ್ನೇಹವರಳಿಸಿ, ಕುಲಭಾವವಳಿಸಿ

ಶಿರದ ಮೇಲೆ ಕರವಿಟ್ಟು ಉಣಹೇಳಿರೋ

ವಿಶ್ವದಾಭಿರಾಮ ಕೇಳು ವೇಮ’

‘ಊರ್ವಿ ವಾಸಿಗಳೆಲ್ಲರಿಗೂ, ಯಾವುದೇ ಪಂಕ್ತಿ ಭೇದ ಮಾಡದೇ ಒಂದೇ ತಾಟವನಿಟ್ಟು, ಅವರ ಮಧ್ಯ ಇರುವ ಕುಲಭೇದದ ಭಾವವನ್ನು ಅಳಿಸಿ, ಸ್ನೇಹ ಭಾವವನ್ನು ತುಂಬಿ, ಎಲ್ಲರ ಮೇಲೂ ಸಮಾನ ಕರುಣೆ ಸುರಿದು, ಶಿರದ ಮೇಲೆ ಕೈಯನ್ನಿಟ್ಟು ಪ್ರೀತಿ ವಿಶ್ವಾಸದಿಂದ ಉಣಲು ಹೇಳಿರಿ’.

ಎಂಥ ಅದ್ಭುತ ಆಲೋಚನೆ, ಎಂಥ ಉನ್ನತವಾದ ಔದಾರ್ಯ. ವೇಮನರು ವಿಚಾರ ಮಾಡುವ ವಿಷಯಗಳ ವ್ಯಾಪ್ತಿ ಹಿರಿದಾದುದು. ಅವರದು ಸ್ವತಂತ್ರ ದೃಷ್ಟಿ, ಸ್ವತಂತ್ರ ಸೃಷ್ಟಿ. ಸ್ವಾನುಭವವೇ ವೇದವಾದ ಮಹಾನುಭಾವ ಅವರು.

ವೇಮನರು ಗುಣಕ್ಕೆ ಪ್ರಾಧಾನ್ಯತೆಯನ್ನಿತ್ತರು. ನೀತಿಗೆ ಪಟ್ಟ ಕಟ್ಟಿದರು. ಗೃಹಸಂಸಾರದಿಂದ ಹಿಡಿದು ವಿಶ್ವರಹಸ್ಯದವರೆಗೆ ಎಲ್ಲ ವಿಷಯಗಳ ಕುರಿತು ಎಂದೆಂದಿಗೂ ಮರೆಯಲಾಗದಂತಹ ಸುವರ್ಣ ಸೂತ್ರಗಳನ್ನು ಹೇಳಿದರು.

ಪಕ್ಷಿಗಳ ಬದುಕನ್ನು ನೋಡಿ ಜಗದ ಜನರು ಬದುಕುವುದನ್ನು ಕಲಿಯಬೇಕೆಂದು ವೇಮನರು ಪದ್ಯದ ಮೂಲಕ ಸಾರಿದ್ದಾರೆ. ‘ಧರ್ಮವೆಂದರೆ ಯಾವುದು?’ ಒಳ್ಳೆಯವನಾಗಿರುವುದು, ಒಳ್ಳೆಯದನ್ನು ಮಾಡುವುದೇ ನಿಜವಾದ ಧರ್ಮ. ‘ಧ್ವಜವನೆತ್ತಿ ಸಾರು ದೇವನೊಬ್ಬನೆಂದು’ ಎಂದು ಹೇಳಿದ್ದಾರೆ.

ಕೊಂಡವೀಡು ಪಟ್ಟಣದಲ್ಲಿ ಬೆಳೆದು, ರಾಯಲಸೀಮೆ ಪ್ರದೇಶದಲ್ಲಿ ಸುತ್ತಿ, ಪ್ರಚಾರ ಮಾಡಿ 1480ರಲ್ಲಿ ವೇಮನರು ಪರಮಾತ್ಮನಲ್ಲಿ ಲೀನವಾದರು. ಕಡಪಾ ಜಿಲ್ಲೆಯ, ಕದರಿ ತಾಲೂಕಿಗೆ ಸೇರಿದ ಕಟಾರುಪಲ್ಲಿಯ ಅವರ ಸಮಾಧಿ ಜ್ಞಾನೋಪಾಸಕರಿಗೆ, ಅತ್ಮದರ್ಶನಾಕಾಂಕ್ಷಿಗಳಿಗೆ ಪವಿತ್ರ ಯಾತ್ರಾ ಸ್ಥಾನವಾಗಿದೆ.

ವೇಮನರ ತತ್ತ್ವ ಸಂದೇಶಗಳ ಜ್ಞಾನ ಮತ್ತು ಜಾಗೃತಿ ಜನರಲ್ಲಿ ಮೂಡಬೇಕು, ಶಾಂತಿ, ಸಮತೆ, ಸೌಹಾರ್ದತೆಯ ಪರಿಮಳ ಜನಮನದಲ್ಲಿ ಪಸರಿಸುವಂತಾಗಬೇಕು ಎನ್ನುವ ಉದಾತ್ತ ಧ್ಯೇಯದೊಂದಿಗೆ ವೇಮನರ ಜಯಂತ್ಯುತ್ಸವವನ್ನು ಇಂದು (ಜ. 19) ನಾಡಿನಾದ್ಯಂತ ಆಚರಿಸಲಾಗುತ್ತಿದೆ.