24.2.18

ದಿನಕ್ಕೊಂದು ಮಾತು

🌻🌻ದಿನಕ್ಕೊಂದು ಮಾತು🌻🌻
                                                                                                💐ದೃಢತೆ ಮತ್ತು ವಿಶಿಷ್ಟತೆ ನಮ್ಮದಾಗಿರಲಿ💐

ಒಂದು ಉತ್ತಮ ರಸ್ತೆ ಒಬ್ಬ ಉತ್ತಮ ಚಾಲಕನನ್ನು ಸೃಷ್ಟಿಸಲು ಸಾಧ್ಯವಿಲ್ಲವೋ, ಒಂದು ತಿಳಿ ಆಕಾಶ ಹೇಗೆ ಉತ್ತಮ ಪೈಲಟ್‌ನನ್ನು ನಿರೂಪಿಸಲು ಸಾಧ್ಯವಿಲ್ಲವೋ ಹಾಗೆಯೇ ಜೀವನ ದಲ್ಲಿ ಕಷ್ಟ, ಸೋಲು,ಅವಮಾನ ಇಲ್ಲದಿದ್ದರೆ ನಾವು ಅತ್ಯುತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವೇ ಇಲ್ಲ. ಬದುಕು ಅನುಭವಿಸಲೆಂದೇ ಇರುವಂಥದ್ದು. ಆದರೆ ಅರಿವು ಮತ್ತು ಇತರರ ಅನುಭವದ ಸಾರವನ್ನು ಜೊತೆಗಿಟ್ಟುಕೊಂಡಾಗಲೇ ಜೀವನದಲ್ಲಿಸಂತೃಪ್ತಿಯೆಡೆಗೆ ಸಾಗಬಹುದು.

ಜೀವನದಲ್ಲಿ ಯಾವುದೂ ಶಾಶ್ವತವಲ್ಲ ಯಾವುದೂ ಶಾಶ್ವತವಲ್ಲ ಎನ್ನುವ ನಿತ್ಯಸತ್ಯ ವಿರಕ್ತಿಗೆ ಪೂರಕವಾಗಬಾರದು. ಬದಲಿಗೆ ಅದು ಇರುವಾಗ ಅದನ್ನು ಒಳ್ಳೆಯ ರೀತಿಯಿಂದ ಬಳಸಿ ಕೊಳ್ಳುವುದು ನಮ್ಮ ಗುರಿಯಾಗಬೇಕು. ನಮ್ಮ ಮಧ್ಯೆ ಸಾವಿರ ಜನ ತಮ್ಮ ಬದುಕಿಗಾಗಿ ಹೋರಾಟ ನಡೆಸುತ್ತಲೇ ಇರುತ್ತಾರೆ. ಆದರೆ ನಮ್ಮ ಜೀವನವನ್ನು ನಾವು ಹೇಗೆ ರೂಪಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ. ಆತ್ಮವಿಶ್ವಾಸ ಇದ್ದಲ್ಲಿ ಎಲ್ಲವನ್ನೂ ಮೆಟ್ಟಿ ನಿಲ್ಲಬಹುದು. ಕೆಲವರು ಪ್ರಶ್ನೆ ಹಾಕಬಹುದು ಬರಿಯ ಆತ್ಮವಿಶ್ವಾಸ ಇದ್ರೆ ಸಾಕಾ? ಎಂದು. ನಿಜ ಆತ್ಮವಿಶ್ವಾಸದಿಂದ ಎಲ್ಲವೂ ಆಗುವುದಿಲ್ಲ. ಆದರೆ ಮಳೆ ಬಂದಾಗ ಕೊಡೆ ಯಿಂದ ಮಳೆಯನ್ನು ನಿಲ್ಲಿಸಲು ಆಗದೇ ಇರಬಹುದು ಆದರೆ ಕೊಡೆಯಿಂದ ನಮ್ಮನ್ನ ರಕ್ಷಿಸಿಕೊಳ್ಳಬಹುದು ಅಲ್ವ.

ಬಹಳ ಸಲ ನಾವು ನಮ್ಮ ಬಗ್ಗೆ ಯೋಚಿಸುವ ಬದಲು ಬೇರೆಯವರು ನಮ್ಮ ಬಗ್ಗೆ ಏನು ಅಭಿಪ್ರಾಯ ಹೊಂದಿದ್ದಾರೆ ಅವರು ನನ್ನ ಬಗ್ಗೆ ಏನು ಅಂದುಕೊಂಡು ಬಿಟ್ಟರೋ ಎನ್ನುವ ಗೊಂದಲದಲ್ಲೇ ಸಾಕಷ್ಟು ಬದುಕನ್ನು ಕಳೆದುಬಿಡುತ್ತೇವೆ. ಆದರೆ ನಮ್ಮ ಬಗ್ಗೆ ನಾವೆಷ್ಟು ತಿಳಿದುಕೊಂಡಿದ್ದೇವೆ ಎನ್ನುವುದರ ಅರಿವು ನಮಗೇ ಇರುವುದಿಲ್ಲ.! ನಮ್ಮನ್ನು ಪ್ರೀತಿಸುವವರು ದ್ವೇಷಿಸುವವರು ಸಾವಿರ ಮಂದಿ ಇರಬಹುದು. ಆದರೆ ನಮಗೆ ನಾವು ಅರ್ಥವಾದಷ್ಟು ಬೇರೆಯವರಿಗೆ ಅರ್ಥ ಆಗಿರುವುದಿಲ್ಲ. ಹಾಗಾಗಿ ನಮಗೆ ನಾವೇ ನಮ್ಮ ಬೆಸ್ಟ್ ಫ್ರೆಂಡ್! ಹುಡುಕಿ ಪಡೆಯುವ ಖುಷಿ ದೇವರು ನನಗೆ ಏನನ್ನೂ ಕೊಟ್ಟಿಲ್ಲ ಎಂದುಕೊಳ್ಳುವುದಕ್ಕಿಂತ ಮೂರ್ಖತನ ಮತ್ತೊಂದಿಲ್ಲ.

ದೇವರು ಕೊಟ್ಟಿರುವುದನ್ನು ನಾನು ಎಷ್ಟರ ಮಟ್ಟಿಗೆ ಉಪಯೋಗಿಸಿಕೊಂಡಿದ್ದೇನೆ ಎಂದು ಅರಿತಿದ್ದೇವಾ? ಇಲ್ಲ. ನನ್ನ ಜೊತೆ ಇದ್ದವರಲ್ಲ ಏನೆಲ್ಲಾ ಸಾಧನೆ ಮಾಡಿಬಿಟ್ರು, ನಾನು ಮಾತ್ರ ಮೂಲೆ ಗುಂಪಾಗಿಬಿಟ್ಟೆ ಅನ್ನೋದಕ್ಕಿಂತ ಐ ಆ್ಯಮ್ ದಿ ಬೆಸ್ಟ್; ಐ ಕ್ಯಾನ್ ಡೂ ಇಟ್ ಅಂತ ಯಾಕೆ ಅಂದುಕೊಳ್ಳಲ್ಲ..? ಒಬ್ಬ ಹುಡುಗ ತನ್ನ ಶಾಲಾ ಜೀವನದಲ್ಲಿ ಓದುತ್ತಿರುವಾಗ ಶಿಕ್ಷಕರು ಹೀ ಹಿಸ್ ನಾಟ್ ವರ್ತಿ ಇವನಿಂದ ಏನೂ ಸಾಧ್ಯವಿಲ್ಲ ಅಂದಾಗ ಆತ ಸುಮ್ಮನಾಗಲಿಲ್ಲ. ಸೋಲು ತಾನೇ? ಅದೇನ್ ಮಹಾ ಎಂದುಕೊಂಡಾತನೇ ಇವತ್ತು ಎಲ್ಲರಿಗೂ ಬೆಳಕನ್ನ ನೀಡಿರುವ ಒಬ್ಬ ಪ್ರಸಿದ್ಧ ವಿಜ್ಞಾನಿ! ಸಾಧ್ಯವಾದ್ರೆ ಅವರು ಯಾರು ಎಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಹಾಗಂತ ನಾನು ಅಹಂಕಾರದಿಂದ ಹೇಳುತ್ತಿರುವುದಲ್ಲ.

ಹಾಗೆ ಹುಡುಕಿ ತಿಳಿಯುವುದರಲ್ಲಿಯೂ ಇರುವ ಖುಷಿ ಸಿಗಲಿ ಎನ್ನುವುದೇ ಕಾರಣ. ಕೊನೆಯದಾಗಿ ಒಂದು ಸಲ ಇವತ್ತಿನ ದಿನ ಸಾಧನೆಯ ಶಿಖರದಲ್ಲಿರುವವರನ್ನು ನೆನಪಿಸಿಕೊಳ್ಳಿ. ಅವರಿಗೇನು ಆ ಸ್ಥಾನ ಸುಲಭವಾಗಿ ಸಿಕ್ಕಿ ಬಿಟ್ಟಿದೆ ಎಂದರೆ ಸುಳ್ಳಾದೀತು. ಅವರು ನಿಮಗೆ ಇಷ್ಟವೋ ಇಲ್ಲವೋ ಎರಡನೆಯ ಮಾತು. ಇತರರ ಮಾತಿನಲ್ಲಿ ಅವರ ಬಗ್ಗೆ ತಿಳಿದಿರುವುದಕ್ಕಿಂತ ಹೆಚ್ಚಾಗಿ ಅವರ ಕುರಿತು ಅಧಿಕೃತ ಮಾಹಿತಿಗಳನ್ನು ಕಲೆಹಾಕಿ ಓದಿ. ಅವರು ಬದುಕಲ್ಲಿ ಪಟ್ಟ ಪಾಡು ಅಥವಾ ಅವರ ಜೀವನದ ಯಶೋಗಾಥೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಅರ್ಥವಾದಾಗ ನಮ್ಮ ದಾರಿ ಸುಗಮವೆನಿಸುತ್ತದೆ.

ಕೃಪೆ:ಪಲ್ಲವಿಗೌಡ, ಟಿವಿ ನಿರೂಪಕಿ
************************                                                                              
  💐ನಾಲಗೆ ನಮ್ಮ ವಾಚ್‌ಮನ್, ಯಜಮಾನನಲ್ಲ💐

ಇತ್ತೀಚೆಗೆ ಓಶೋ ಬರೆದ From Medication to Meditation ಎಂಬ ಕೃತಿಯನ್ನು ಓದುತ್ತಿದ್ದೆ. ನಮ್ಮ ಶರೀರ, ರೋಗ, ಔಷಧ, ಆಹಾರ ಮುಂತಾದ ಸಂಗತಿಗಳ ಬಗ್ಗೆ ಓಶೋ ಬಹಳ ಮನೋಜ್ಞವಾಗಿ ಬರೆದಿದ್ದಾರೆ. ಈ ಕೃತಿಯನ್ನು ಓದಿದ್ದೇ ಆದರೆ ನೀವು ನಿಮ್ಮ ದೇಹವನ್ನು ಮತ್ತಷ್ಟು ಪ್ರೀತಿಸುತ್ತೀರಿ. ಪ್ರತಿ ತುತ್ತು ತಿನ್ನುವಾಗಲೂ ಯೋಚಿಸುತ್ತೀರಿ. ಓಶೋ ಒಂದೆಡೆ ಹೀಗೆ ಬರೆಯುತ್ತಾರೆ- ಯಾವಾಗಲೂ ನಾಲಗೆ ನಿಮ್ಮನ್ನು ನಿಯಂತ್ರಿಸಬಾರದು. ಅದಕ್ಕೆ ಹೊಟ್ಟೆಯ ಪರಿಸ್ಥಿತಿ, ದೇಹದ ಸ್ಥಿತಿಯ ಬಗ್ಗೆ ಏನೂ ಗೊತ್ತಿಲ್ಲ. ನಾಲಗೆಗೆ ಒಂದು ನಿರ್ದಿಷ್ಟ ಉದ್ದೇಶವಿದೆ. ಸಹಜವಾಗಿ ಅದು ಆಹಾರದ ರುಚಿಯನ್ನು ತೀರ್ಮಾನಿಸಬೇಕು. ರುಚಿಯನ್ನು ಆಧರಿಸಿ ಇದು ಈ ದೇಹಕ್ಕೆ ಬೇಕೇ ಬೇಡವೇ ಎಂದು ನಿರ್ಧರಿಸಲು ಸಹಕರಿಸಬೇಕು. ಅದು ಬಾಗಿಲಲ್ಲಿ ಕುಳಿತ ಕಾವಲು ಕಾಯುವವನಿದ್ದಂತೆ. ಆದರೆ ಅದೇ ಮನೆಯ ಯಜಮಾನನಾಗಬಾರದು. ಮನೆ ಬಾಗಿಲು ಕಾಯುವ ವಾಚ್‌ಮನ್ ತಾನೇ ಮನೆಯ ಒಡೆಯನೆಂಬಂತೆ ವರ್ತಿಸಿದರೆ ಎಲ್ಲವೂ ಗೊಂದಲದ ಗೂಡಾಗುತ್ತದೆ.

ನಮ್ಮ ಜಾಹೀರಾತುದಾರರಿಗೆ, ಈ ನಾಲಗೆಯನ್ನು ಹೇಗೆ ಮೋಸ ಮಾಡಬೇಕೆಂಬುದು ಚೆನ್ನಾಗಿ ಗೊತ್ತು. ಮೂಗನ್ನೂ ಮೋಸಗೊಳಿಸಬಹುದು. ಅವೆರಡೂ ಈ ದೇಹದ ಯಜಮಾನರಲ್ಲ. ನಿಮಗೆ ತಿಳಿಯದಿರಬಹುದು. ಪ್ರಪಂಚದಲ್ಲಿ ಈ ಕುರಿತು ಸಾಕಷ್ಟು ಸಂಶೋಧನೆಗಳಾಗಿವೆ. ನಿಮ್ಮ ಕಣ್ಣು, ಮೂಗು ಎರಡನ್ನೂ ಮುಚ್ಚಿ ನಿಮಗೆ ಈರುಳ್ಳಿಯ ತುಂಡನ್ನು ತಿನ್ನಿಸಿದರೆ, ನೀವು ತಿನ್ನುತ್ತಿರುವುದು ಈರುಳ್ಳಿಯೋ, ಆಪಲ್ಲೋ ಎಂದು ಗುರುತಿಸಲಾರಿರಿ. ಏಕೆಂದರೆ ರುಚಿಯ ಅರ್ಧ ಭಾಗ ಅರಿವಾಗುವುದು ಮೂಗಿನಿಂದ, ಇನ್ನರ್ಧ ಭಾಗ ಬರುವುದು ನಾಲಗೆಯಿಂದ. ಆದ್ದರಿಂದಲೇ ಇವೆರಡೂ ನಮ್ಮ ಆಹಾರ ಸೇವನೆಯನ್ನು ನಿಯಂತ್ರಿಸಲಾರಂಭಿಸಿವೆ. ಈಗ ಅದು ಅವರಿಗೆ ತಿಳಿದಿದೆ. ಈ ಕಾರಣದಿಂದಲೇ ಆಹಾರದಲ್ಲಿ ಒಂದು ವಿಶಿಷ್ಟ ಬಗೆಯ ರಾಸಾಯನ ಬಳಸಿ ನಾಲಗೆಗೆ ರುಚಿ ಹತ್ತಿಸಬೇಕು. ಹೀಗೆ ನಾಲಗೆ ಮತ್ತು ಮೂಗನ್ನು ಬಲೆಗೆ ಬೀಳಿಸಿಕೊಂಡು ದೇಹಕ್ಕೆ ಏನನ್ನು ಬೇಕಾದರೂ ತುರುಕಬಹುದು.    
  ಕೃಪೆ: ಅಂತರ್ಜಾಲ.  
                                            

22.2.18

Kannada - ಕನ್ನಡ - ಸಮಾಸಗಳು

*✏✏ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?✏✏*
===============
*ಸಮಾಸಗಳು :
 ಸಮಾಸ ಎಂದರೇನು ? 

ಸಮಾಸವೆಂದರೆ ಸಮಸ್ತ ಪದವೆಂದರ್ಥ. 
ಅರ್ಥವನ್ನು ಅನುಸರಿಸಿ, ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪದಗಳನ್ನು ಸಂಕ್ಷೇಪದಿಂದ ಹೇಳುವುದನ್ನು ಸಮಾಸ ಎನ್ನಲಾಗುತ್ತದೆ. 
ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ಸಂಧಿ ಎನ್ನಲಾಗುತ್ತದೆ. ಅದೇ ರೀತಿ ಅರ್ಥಾನುಸಾರವಾಗಿ, ಪದಗಳು ಸೇರಿ, ಮಧ್ಯದಲ್ಲಿರುವ ವಿಭಕ್ತಿ ಪ್ರತ್ಯಯವನ್ನು ಲೋಪ ಮಾಡಿಕೊಂಡು, ಸಂಯುಕ್ತ ಪದಗಳಾಗುವದನ್ನು ‘ಸಮಾಸ’ ವೆನ್ನಲಾಗುತ್ತದೆ.

 ಉದಾ: ‘ಕೆಂಪಾದ ತಾವರೆ’ ಎಂಬಲ್ಲಿ, ಕೆಂಪು – ತಾವರೆ ಪದಗಳು ಕೂಡಿ, ‘ಕೆಂದಾವರೆ’ ಎಂಬ ಸಮಸ್ತ ಪದವಾಗುತ್ತದೆ.*


==============
*ಸಮ್ + ಆಸ= ಸಮಾಸ. ಸಮಾಸವೆಂದರೆ ಕೂಡುನುಡಿ. ಅಥವಾ ಪದವಿಧಿ. ಎರಡು ವರ್ಣಗಳು ಪರಸ್ಪರ ಕೂಡಿದರೆ ಸಂಧಿಯಾಗುವಂತೆ, ಎರಡು ಪದಗಳು ಪರಸ್ಪರ ಕೂಡಿದರೆ ಸಮಾಸವಾಗುತ್ತದೆ. 

ನಾಗವರ್ಮನ ಪ್ರಕಾರ, ‘ನಾಮವಾಚಿನಾಂ ಶಬ್ದನಾಂ ಪರಸ್ಪರಮನ್ವಯ ಸಿದ್ಧೋರ್ಥಸ್ಸಮಾಸ ಸಂಜ್ಞಸ್ಸ್ಯಾತ್’ (ಸೂತ್ರ : 131). ಎಂದರೆ ನಾಮವಾಚಿಯಾದ ಶಬ್ದಗಳೆರಡರ ಅನ್ವಯ ಸಿದ್ಧವಾದ ಅರ್ಥ. ನಾಮಪದಗಳು ಕೂಡಿ ನುಡಿಯುವ ಸರ್ಥವೇ ಸಮಾಸ. ಈ ಕೂಡು ನುಡಿಯನ್ನವನು ಪದವಿಧಿ ಯೆಂದೂ ಕರೆದಿದ್ದಾನೆ. ಕೇಶಿರಾಜನ ಸೂತ್ರದ ಪ್ರಕಾರ, “ಕರು ತಾಯ ಬಳಿಯನುಳಿಯದ ತೆರದಿಂದಂ ನಾಮಪದ ಮದರ್ಥಾನುಗಮಾ ಗೆರಿಗೆ ಸಮಾಸಂ ನೆಗಳ್ಗುಂ”. ಅಂದರೆ, ನಾಮಪದವು ಅರ್ಥಾನುಗತವಾಗುವುದೇ ಸಮಾಸ. ಹೀಗೆ ಅರ್ಥವನ್ನುಂಟು ಮಾಡುವ ಪರಸ್ಪರ ನಾಮಪದಗಳು ಅನ್ಯೋನ್ಯವಾಗಿ ಕೂಡಿರಬೇಕು. ಈ ಅನ್ಯೋನ್ಯವನ್ನು ಅವನು ‘ತಾಯ ಬಳಿಯ ಕರುವಿನಂತೆ’ಯೆಂದು ವರ್ಣಿಸುವನು. ಕೈಪಿಡಿಕಾರರ ಪ್ರಕಾರ, “ಎರಡು ಅಥವಾ ಹೆಚ್ಚು ಪ್ರಕೃತಿಗಳು ಕೂಡಿ ಒಂದು ಶಬ್ದವಾದಾಗ ಸಮಾಸವಾಗುತ್ತದೆ”.*


================
*ಸೂತ್ರ : “ಎರಡು ಅಥವಾ ಹಲವು ಪದಗಳು ಒಂದು ಗೂಡಿ ಒಂದು ಶಬ್ದವಾಗುವುದಕ್ಕೆ ಸಮಾಸ ಎಂದು ಹೆಸರು”*
*ಉದಾ: 1. ತಲೆಯಲ್ಲಿ (ಅಲ್ಲಿ) + (ನೋವು) ನೋವು = ತಲೆನೋವು 2. ಕಣ್ಣಿನಿಂದು (ಇಂದ) +(ಕುರುಡ) ಕುರುಡ = ಕಣ್ಣುಕುರುಡ*
================


*ವಿಗ್ರಹ ವಾಕ್ಯ : “ಸಮಾಸದ ಅರ್ಥವನ್ನು ಬಿಡಿಸಿ ಹೇಳುವ ಮಾತುಗಳ ಗುಂಪಿಗೆ ವಿಗ್ರಹವಾಕ್ಯವೆಂದು ಹೆಸರು”.*
*ಉದಾ: ಸಮಸ್ತಪದ = ಪೂರ್ವಪದ + ಉತ್ತರ ಪದ*
*1. ದೇವಮಂದಿರ= ದೇವರ + ಮಂದಿರ 2. ಹೆಜ್ಜೇನು=ಹಿರಿದು + ಜೇನು 3. ಮುಂಗಾಲು= ಕಾಲಿನ + ಮುಂದು*
*(ಸಮಾಸದಲ್ಲಿ ಬರುವ ಮೊದಲನೆಯ ಪದವು ಪೂರ್ವ ಪದವೆಂದು, ಎರಡನೆಯ ಪದವನ್ನು ಉತ್ತರ ಪದವೆಂದು ಕರೆಯಲಾಗುತ್ತದೆ)*
===============
*ಸಮಾಸ ಪದಗಳಾಗುವ ಸನ್ನಿವೇಶಗಳು :*
*1. ಸಂಸ್ಕೃತ – ಸಂಸ್ಕೃತ ಶಬ್ದಗಳು ಸೇರಿ 
2. ಕನ್ನಡ – ಕನ್ನಡ ಶಬ್ದಗಳು ಸೇರಿ ತದ್ಭವ-ತದ್ಭವ ಶಬ್ದಗಳು ಸೇರಿ 
3. ಅಚ್ಚಗನ್ನಡ ಶಬ್ದ– ತದ್ಭವ ಶಬ್ದಗಳು ಸೇರಿ ಸಮಾಸಪದಗಳಾಗುತ್ತವೆ. ಆದರೆ ಕನ್ನಡಕ್ಕೆ – ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಲಾರದು.*


================
*ಸಮಾಸದ ವಿಧಗಳು : ಸಮಾಸದಲ್ಲಿಯ ಎರಡೂ ಪದಗಳು ಸಂಸ್ಕೃತ +ಸಂಸ್ಕೃತ ಶಬ್ದಗಳಿದ್ದರೆ, ಅಥವಾ ಎರಡೂ ಪದಗಳು ಕನ್ನಡ+ಕನ್ನಡ ಶಬ್ದಗಳಿದ್ದರೆ ಸಮಾಸ ಮಾಡಲು ಬರುತ್ತದೆ. ಒಂದು ಪದ ಸಂಸ್ಕೃತ ಇನ್ನೊಂದು ಪದ ಕನ್ನಡ (ಸಂಸ್ಕೃತ +ಕನ್ನಡ) ಶಬ್ದಗಳನ್ನು ಕೂಡಿಸಿ ಸಮಾಸ ಮಾಡಲು ಬರುವುದಿಲ್ಲ. ಹಾಗೆ ಮಾಡಿದರೆ ಅದನ್ನು ‘ಅರಿಸಮಾಸ’ ಎನ್ನವರು. ಮತ್ತು ಅದು ದೋಷಯುಕ್ತ ಸಮಾಸ ವೆನ್ನಿಸುವುದು. ಕೇಶಿರಾಜನು ಸಮಾಸಗಳಲ್ಲಿ ‘ಸಂಸ್ಕೃತ ಸಮಾಸ’ ಮತ್ತು ‘ಕನ್ನಡ ಸಮಾಸ’ವೆಂದು ಒಂಭತ್ತು ವಿಧಗಳನ್ನು ಮಾಡಿದ್ದಾನೆ.*


===============
*ಕೇಶಿರಾಜ ಸಮಾಸಗಳನ್ನು ಐದು ರೀತಿಯಲ್ಲಿ ವರ್ಗೀಕರಿಸಿದ್ದಾನೆ.(ಒಟ್ಟು 9 ವಿಧದ ಸಮಾಸಗಳು)*
==================

*ಉತ್ತರಪದ ಮುಖ್ಯ ಸಮಾಸ :*
          *1. ತತ್ಪುರುಷ ಸಮಾಸ*
          *2. ಕರ್ಮಧಾರೆಯ ಸಮಾಸ*
          *3. ದ್ವಿಗು ಸಮಾಸ*
           *4. ಕ್ರಿಯಾ ಸಮಾಸ*
            *5. ಗಮಕ ಸಮಾಸ*

*ಪೂರ್ವಪದ ಮುಖ್ಯ ಸಮಾಸ : 

            6. ಅವ್ಯಯೀಭಾವ ಸಮಾಸ (ಅಂಶೀ ಸಮಾಸ).*

*ಎರಡೂ ಪದ ಮುಖ್ಯ ಸಮಾಸ :*

                *7. ದ್ವಂದ್ವ ಸಮಾಸ*

*ಎರಡೂ ಪದ ಅಮುಖ್ಯ ಸಮಾಸ :
                 8) ಬಹುವ್ರೀಹಿ ಸಮಾಸ.*
*ವಿರುದ್ಧ ಪದ ಸಮಾಸ : 
                9) ಅರಿಸಮಾಸ.*
===============

*1. ತತ್ಪುರುಷ ಸಮಾಸ : “ಎರಡು ನಾಮಪದಗಳು ಸೇರಿ ಸಮಾಸವಾದಾಗ ಉತ್ತರ ಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ತತ್ಪುರುಷ ಸಮಾಸ ಎಂದು ಹೆಸರು”. 
ಉದಾ:*
*1. ಮರದ + ಕಾಲ = ಮರಗಾಲ 

2. ಬೆಟ್ಟದ + ತಾವರೆ = ಬೆಟ್ಟದಾವರೆ 

3. ಕೈ + ತಪ್ಪು = ಕೈತಪ್ಪು 

4. ಹಗಲಿನಲ್ಲಿ + ಕನಸು = ಹಗಲುಗನಸು* 

*Etc..ಅರಮನೆ, ಎದೆಗುಹೆ, ಜಲರಾಶಿ, ತಲೆನೋವು*


===============
*2. ಕರ್ಮಧಾರೆಯ ಸಮಾಸ : “ಪೂರ್ವೋತ್ತರ ಪದಗಳು ಲಿಂಗ, ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ”. 
ಉದಾ:*
*1. ಹೊಸದು + ಕನ್ನಡ = ಹೊಸಗನ್ನಡ 
2. ಹಿರಿದು + ಜೇನು = ಹೆಜ್ಜೇನು 
3. ಕಿರಿಯ + ಗೆಜ್ಜೆ = ಕಿರುಗೆಜ್ಜೆ 
Etc. 
ಕೆಂದುಟಿ, ಚಿಕ್ಕಮಗು, ಸಿಡಿಮದ್ದು, ಪಂದತಿ*

===============
*3. ದ್ವಿಗು ಸಮಾಸ : “ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ” 

ಉದಾ: 
1. ಒಂದು + ಕಣ್ಣು = ಒಕ್ಕಣ್ಣು 
2. ಎರಡು + ಬಗೆ = ಇಬ್ಬಗೆ 
3. ಸಪ್ತ + ಸ್ವರ = ಸಪ್ತಸ್ವರ 

Etc. ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು*

==============
*4. ಅಂಶಿ ಸಮಾಸ : 

“ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು”

 ಅಂಶವೆಂದರೆ ‘ಭಾಗ’ ಅಥವಾ ‘ಅವಯವ’.

 ಉದಾ: 
1. ತಲೆಯ + ಮುಂದು = ಮುಂದಲೆ 
2. ಬೆರಳಿನ + ತುದಿ = ತುದಿಬೆರಳು 
3. ಕರೆಯ + ಒಳಗು = ಒಳಗೆರೆ Etc. ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ*
=============

*5. ದ್ವಂದ್ವ ಸಮಾಸ : 

“ಎರಡು ಅಥವಾ ಹೆಚ್ಚು ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲಾ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು” 

ಉದಾ:*
*1. ಕೆರೆಯೂ + ಕಟ್ಟಿಯೂ + ಬಾವಿಯೂ = ಕೆರೆ ಕಟ್ಟೆ ಬಾವಿಗಳು*
*2. ಕಾಫಿಯೂ + ತಿಂಡಿಯೂ = ಕಾಫಿ-ತಿಂಡಿ*
*3. ಬೆಟ್ಟವೂ + ಗುಡ್ಡವೂ = ಬೆಟ್ಟಗುಡ್ಡಗಳು*
*4. ಅಣ್ಣನು + ತಮ್ಮನು= ಅಣ್ಣತಮ್ಮಂದಿರು*

*ತನುಮನಗಳು, ಕೈಕಾಲು, ಮಳೆಬೆಳೆ, ನಡೆನುಡಿ*
==============

*6. ಬಹುವ್ರೀಹಿ ಸಮಾಸ : 

“ಎರಡು ಅಥವಾ ಅನೇಕ ನಾಮಪದಗಳು ಸೇರಿ* *ಸಮಾಸವಾದಾಗ ಬೇರೊಂದು ಪದದ/ ಅನ್ಯಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಸಮಾಸ ಎಂದು ಹೆಸರು”. 

ಉದಾ:*
*ಮೂರು + ಕಣ್ಣು +ಉಳ್ಳವ* *=ಮುಕ್ಕಣ್ಣ

*ಶಾಂತಿಯ +* *ಖನಿಯಾಗಿರುವನು +* *ಯಾವನೋ=ಶಾಂತಿಖನಿ*

*ಸಹಸ್ರ +ಅಕ್ಷಿಗಳು +* *ಯಾರಿಗೋ =ಸಹಸ್ರಾಕ್ಷ*
*ಪಂಕದಲ್ಲಿ + ಜನಿಸಿದ್ದು**+ *ಯಾವುದೊ=ಪಂಕಜ*

*ಚಂದ್ರನಖಿ, ಕುರುಕುಲಾರ್ಕ, ಚಕ್ರಪಾಣಿ, ನಿಶಾಚಾರಿ*
===============

*7. ಕ್ರಿಯಾ ಸಮಾಸ : 

“ಪೂರ್ವ ಪದವು ದ್ವಿತೀಯ ವಿಭಕ್ತಿಯಿಂದ ಕೂಡಿದ ಪದವಾಗಿದ್ದು, ಉತ್ತರಪದವು ಕ್ರಿಯೆಯೊಡನೆ ಕೂಡಿ ಆಗುವ ಸಮಾಸಕ್ಕೆ ಕ್ರಿಯಾ ಸಮಾಸ ಎನ್ನಲಾಗಿದೆ”. 

ಉದಾ: 

ಸುಳ್ಳನ್ನು +ಆಡು=ಸುಳ್ಳಾಡು 
ಕಣ್ಣನ್ನು +ತೆರೆ=ಕಣ್ದೆರೆ 
ವಿಷವನ್ನು +ಕಾರು =ವಿಷಕಾರು 
 ಕೈಯನ್ನು +ಮುಗಿ=ಕೈಮುಗಿ 

Etc. ಆಸೆಹೊತ್ತು, ಹಣ್ಣುತಿನ್ನು , ಕಂಗೆಡು , ಜೀವಬಿಡು

*8. ಗಮಕ ಸಮಾಸ : 

“ಪೂರ್ವ ಪದವು ಸರ್ವನಾಮ, ಕೃದಂತ ಗುಣವಾಚಕ ಸಂಖ್ಯೆಗಳಲ್ಲಿ ಒಂದಾಗಿದ್ದು, ಉತ್ತರದಲ್ಲಿರುವ ನಾಮಪದದೊಡನೆ ಕೂಡಿ ಆಗುವ ಸಮಾಸಕ್ಕೆ ಗಮಕ ಸಮಾಸ ಎಂದು ಹೆಸರು”.* 

*ಉದಾ:*

* *ಸರ್ವನಾಮಕ್ಕೆ:*

*ಅವನು +ಹುಡುಗ=ಆ ಹುಡುಗ*
*ಇವಳು + ಹುಡುಗಿ = ಈ ಹುಡುಗಿ*
*ಯಾವುದು+ ಮರ=ಯಾವಮರ*

* *ಕೃಂದತಕ್ಕೆ:*

*ಮಾಡಿದುದು+ಅಡುಗೆ =ಮಾಡಿದಡುಗೆ*
*ತೂಗುವುದು +ತೊಟ್ಟಿಲು =ತೂಗುವ ತೊಟ್ಟಿಲು*
*ಉಡುವುದು+ದಾರ=ಉಡುದಾರ*
*ಸುಡುಗಾಡು, ಬೆಂದಡಿಗೆ, ಕಡೆಗೋಲು*

* *ಗುಣವಾಚಕಕ್ಕೆ:*
*ಹಸಿಯದು* *+ಕಾಯಿ=ಹಸಿಯಕಾಯಿ*
*ಹಳೆಯದು +ಕನ್ನಡ=ಹಳೆಗನ್ನಡ
*ಕಿರಿಮಗಳು, ಬಿಳಿಯಬಟ್ಟೆ ,* *ಅರಳುಮೊಗ್ಗು*

* *ಸಂಖ್ಯೆಗೆ:*
*ನೂರು +ಹತ್ತು =ನೂರಹತ್ತು
ಮೂವತ್ತು+ಆರು=ಮೂವತ್ತಾರು*
ಮೂವತ್ತು, ಹೆಪ್ಪತ್ತು, ಇಪ್ಪತೈದು.*

21.2.18

ಹೀಗೊಂದು ಮಾದರಿ ಶಾಲೆ-೨

-:ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಕೋಟೆಹಾಳು ಶಾಲೆ :-

ಕೋಟೆಹಾಳು ಶಾಲೆ ಪರಿಸರ ಮಿತ್ರ ಪ್ರಶಸ್ತಿ ಪಡೆದ ಶಾಲೆ. ಇದು ಏಕೊಪಾಧ್ಯಯ ಶಾಲೆಯಾದರೂ ಶಿಕ್ಷಕ ಚೌಡ್ಲಾಪೂರ ಸೂರಿಯವರ ಆಸಕ್ತಿ ಹಾಗೂ ಪರಿಶ್ರಮದಿಂದ ಇಂದು ಹೆಸರುವಾಸಿಯಾಗಿದೆ.
ಬಿಸಿಲ ನಾಡಿನಲ್ಲೂ ಹಸಿರನ್ನು ಹಸಿರಾಗಿಸಿ , ಶಿಕ್ಷಣ ಕ್ಕೆ ಮಾದರಿಯಾದ ಶಾಲೆಗೆ ಅಭಿನಂದನೆಗಳು





20.2.18

ಸರ್ವಜ್ಞ ಜಯಂತಿ

*ಸರ್ವರಿಗೂ ಸರ್ವಜ್ಞ ಜಯಂತಿಯ ಶುಭಾಶಯಗಳು*


ಸರ್ವಜ್ಞ (ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ ಎನ್ನಲಾಗಿದೆ). ಈತ ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ. ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲ ಮತ್ತು ಜೀವನಗಳ ಬಗ್ಗೆ ನಿಖರವಾಗಿ ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ ೧೭ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ. ಪ್ರಾಯಶಃ ಪುಷ್ಪದತ್ತ ಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ.[೧]

ಸರ್ವಜ್ಞ

ಕೂಡಲಸಂಗಮದಲ್ಲಿ ಸರ್ವಜ್ಞನ ಪ್ರತಿಮೆ
ಜನನ
ಹದಿನಾರನೇ ಸಹತಮಾನದ ಆರಂಭ
ಮಾಸೂರು, ಹಿರೇಕೆರೂರ್ ತಾಲ್ಲೊಕು, ಹಾವೇರಿ ಜಿಲ್ಲೆ
ವೃತ್ತಿ
ಕವಿ, ವಾಸ್ತವವಾದಿ, ತತ್ವ್ತಜ್ಞಾನಿ, ವಿರಾಗಿ

ಸರ್ವಜ್ಞ
ಜನನ ಮತ್ತು ಬಾಲ್ಯ

ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಷ್ಪದತ್ತ. ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸನು, ಎಷ್ಟು ದಿನಗಳಾದರೂ ಮಕ್ಕಳಾಗ ದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ.
ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು' ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು.
ಹಗಲಿರುಳು ಪ್ರಯಾಣ ಮಾಡಿ ಅನೇಕ ಗ್ರಾಮಗಳಲ್ಲಿ ವಿಶ್ರಮಿಸಿ, ದಾರಿಯಲ್ಲಿ ಸಿಕ್ಕ 'ಅಂಬಲೂರ'[ಮಾಸೂರು] ಎಂಬ ಗ್ರಾಮಕ್ಕೆ ಬರುವಾಗ ಭಯಂಕರ ಗುಡುಗು, ಸಿಡಿಲುಗಳಿಂದ ಮಳೆ ಸುರಿಯುತ್ತಿತ್ತು. ಸಮೀಪದಲ್ಲಿದ್ದ ಕುಂಬಾರಸಾಲೆಯಲ್ಲಿ ಕುಂಬಾರ ಮಾಳಿ ಎಂಬುವಳ ಮನೆಯಲ್ಲಿ ವಸತಿ ಮಾಡಿದನು. ಕಾಲಧರ್ಮ ಸಂಯೋಗದಿಂದ ಮಾಳಿಯಲ್ಲಿ ವ್ಯಾಮೋಹಗೊಂಡ ಬಸವರಸನಿಗೆ ಕಾಮ ವಿಕಾರವಾಯಿತು.
ಕಾಶಿಯಿಂದ ತಂದ ತೀರ್ಥ ಪ್ರಸಾದಗಳನ್ನು ಕೊಟ್ಟು ಅವಳ ಸಂಗ ಮಾಡಿದನು. ೯ ತಿಂಗಳ ನಂತರ ಮಾಳಿ ದಿವ್ಯ ತೇಜಸ್ಸಿನ ಗಂಡು ಕೂಸಿಗೆ ಜನ್ಮವಿತ್ತಳು. 'ಪುಷ್ಪದತ್ತ'ನೆಂದು ನಾಮಕರಣವೂ ಆಯಿತು. ಮುಂದೆ ಈ ಮಗುವೇ ಜಗತ್ತಿಗೆ ಸರ್ವಜ್ಞನೆಂದು ಪ್ರಸಿದ್ಧಿಯಾದನು. ಬಾಲ್ಯದಲ್ಲಿಯೆ ಅಗಾಧವಾದ ಪಾಂಡಿತ್ಯವನ್ನು ಶಿವನ ವರಪ್ರಸಾದದಿಂದ ಪಡೆದಿದ್ದನು.
ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ತ್ರಿಪದಿಗಳಿಗೆ ಲೆಕ್ಕವಿಲ್ಲ. ಅವನು ಆಶುಕವಿಯಾದ್ದರಿಂದ, ಎಷ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು ೭,೦೭೦ ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ.

ಸರ್ವಜ್ಞ - ತನ್ನ ಬಗೆಗೆ

೧. ಮುನ್ನ ಪೂರ್ವದಲಾನು | ಪನ್ನಗಧರನಾಳು ಎನ್ನಯ ಪೆಸರು ಪುಷ್ಪದತ್ತನು-ಎಂದು ಮನ್ನಿಪರು ನೋಡ ಸರ್ವಜ್ಞ
೨. ಅಂದಿನಾ | ಪುಷ್ಪದತ್ತ || ಬಂದ ವರರುಚಿಯಾಗಿ ಮುಂ ದೇವಸಾಲೆ ಸರ್ವಜ್ಞ - ನೆಂದೆನಿಸಿ ನಿಂದವನು ತಾನೇ ಸರ್ವಜ್ಞ
೩. ಮಕ್ಕಳಿಲ್ಲವು ಎಂದು | ಅಕ್ಕಮಲ್ಲಮ್ಮನು ದುಕ್ಕದಿ ಬಸವ | ಗರಿಪಲ್ಲವ | - ಕಾಶಿಯ ಮುಕ್ಕಣ್ಣಗೆ ಹೋದ ಸರ್ವಜ್ಞ
೪. ಮಾಸನೂರ ಬಸವರಸ | ಕೊಸನಿಶನ ಕೇಳಲು ಕಾಶಿಯೀಶನೊಳು ಪಡೆದ ವರ - ವಧು ನಡುವೆ ಸೂಸಿತೆಂತಲು ಸರ್ವಜ್ಞ
೫. ಗಂಡಾಗಬೇಕೆಂದು | ಪಿ0ಡವ ನುಂಗಲು ಲಂಡೆ ಮಾಳ್ವೆಯೊಳು ಜನಿಸಿ - ಲೋಕದೊಳು ಕಂಡುದನೆ ಪೇಳ್ವೆ ಸರ್ವಜ್ಞ
೬. ಗಡಿಗೆ-ಮಡಕೆಯ ಕೊಂಡು | ಅಡುವಡಾವಿಗೆಯೊಳಗೆ ಬಿಡದೆ ಮಳೆಮೋಡ ಹಿಡಿಯಲವ - ರಿಬ್ಬರಿಗು ತಡೆ ಬಿಡಲಾಯ್ತು ಸರ್ವಜ್ಞ
೭. ಅಂಬಲೂರೊಳಗೆಸೆವ | ಕುಂಬಾರಸಾಲೆಯಲಿ ಇಂದಿನ | ಕಳೆಯ | ಮಾಳಿಯೊಳು - ಬಸವರಸ ನಿಂಬಿಟ್ಟನೆನ್ನ ಸರ್ವಜ್ಞ
೮. ಬಿಂದುವ ಬಿಟ್ಟು ಹೋ | ದಂದು ಬಸುರಾದಳವ ಳಂದದಿಯಷ್ಟಾದಶ ಮಾಸ - ಉದರದಲಿ ನಿಂದು ನಾ ಬೆಳೆದೆ ಸರ್ವಜ್ಞ
೯. ಹೆತ್ತವಳು ಮಾಳಿ ಎನ್ನ | ನೊತ್ತಿ ತೆಗೆದವಳು ಕೇಶಿ ಕತ್ತು ಬೆನ್ನ ಹಿಡಿದವಳು ಕಾಳಿ - ಮೊರಿದೊಳೆನ್ನ ಬತ್ತಲಿರಿಸಿದಳು ಸರ್ವಜ್ಞ
೧೦. ಬೆಳೆದೆನವರಿಂದೆನ್ನ | ಕಳೆಯ ಕಂಡವರೆಲ್ಲ ಮೊಳೆಯಲ್ಲಿ ಸಸಿಯನರಿವಂತೆ - ಮಾಳಿಯ ತಿಳಿದವರರೆಗು ಸರ್ವಜ್ಞ
೧೧. ಗಂಡ ತನ್ನಯದೆಂಬ | ಲಂಡೆ ತನ್ನಯದೆಂಬ ಖಂಡಪರಶುವಿನ ವರಪುತ್ರ - ನಾನು ನೆರೆ ಕಂಡುದನೆ ಪೇಳ್ವೆ ಸರ್ವಜ್ಞ
೧೨. ಮಾಳನು ಮಾಳಿಯು | ಕೊಳ್ ತಿಂದ ಹೆಮ್ಮೆಯಲಿ ಕೇಳೆ ನೀನಾರ ಮಗನೆಂದು - ನಾ ಶಿವನ ಮೇಳದಣುಗೆಂಬೆ ಸರ್ವಜ್ಞ
(ವಿಕಿಸೋರ್ಸ್)
ತ್ರಿಪದಿಗಳು ಸಂಪಾದಿಸಿ

ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಚರಿತ್ರಜ್ಞರ ಪ್ರಕಾರ ಇವುಗಳಲ್ಲಿ ಕೆಲವು ತ್ರಿಪದಿಗಳು ನಂತರದ ಕಾಲದಲ್ಲಿ ಬೇರೆ ಬೇರೆ ಲೇಖಕರಿಂದ ಬರೆಯಲ್ಪಟ್ಟಿರಬಹುದು. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವು. ಹಲವು ಒಗಟುಗಳು ಸಹ ಸರ್ವಜ್ಞನ ತ್ರಿಪದಿಗಳಲ್ಲಿ ಸೇರಿವೆ.

ಸರ್ವಜ್ಞನ ತ್ರಿಪದಿಗಳ ಕೆಲವು ಉದಾಹರಣೆಗಳು:

ಮಾಸೂರ ಬಸವರಸ । ಕೂಸನೀಶನ ಕೇಳೆ।
ಕಾಶಿಯ ಅಭವನೊಳು । ಪಡೆದ ವರವದುವೇ ।
ಸೂಸಿತೆಂತೆನಲು ಸರ್ವಜ್ಞ ॥
ಸರ್ವಜ್ಞನೆಂಬುವನು ಗರ್ವದಿಂದಾದವನೇ?
ಸರ್ವರೊಳು ಒಂದೊಂದು ನುಡಿಗಲಿತು
ವಿದ್ಯೆಯ ಪರ್ವತವೆ ಆದ ಸರ್ವಜ್ಞ.
ಮೂರ್ಖಂಗೆ ಬುದ್ಧಿಯನು ನೂರ್ಕಾಲ ಹೇಳಿದರು
ಗೋರ್ಕಲ್ಲಮೇಲೆ ಮಳೆಗರೆದರೆ
ಆಕಲ್ಲು ನೀರುಕುಡಿವುದೆ ಸರ್ವಜ್ಞ?
ಸಾಲವನು ಕೊಂಬಾಗ ಹಾಲೋಗರುಂಡಂತೆ
ಸಾಲಿಗರು ಕೊಂಡು ಎಳೆವಾಗ
ಕಿಬ್ಬಡಿಯ ಕೀಲು ಮುರಿದಂತೆ ಸರ್ವಜ್ಞ.
ಏಳು ಕೋಟಿಯೆ ಕೋಟಿ, ಏಳು ಲಕ್ಷವೇ ಲಕ್ಷ
ಏಳು ಸಾವಿರದ ಎಪ್ಪತ್ತು ವಚನಗಳ
ಹೇಳಿದನು ಕೇಳ ಸರ್ವಜ್ಞ."
ಬೆಚ್ಚನೆಯ ಮನೆಯಾಗೆ ವೆಚ್ಚಕ್ಕೆ ಹೊನ್ನಾಗೆ
ಇಚ್ಛೆಯನರಿವ ಸತಿಯಾಗೆ ಸ್ವರ್ಗಕ್ಕೆ
ಕಿಚ್ಚು ಹಚ್ಚೆಂದ ಸರ್ವಜ್ಞ

15.2.18

ಲಂಬಾಣಿ ಜನಾಂಗದ ದಾರ್ಶನಿಕ, ಸಾಧುಪುರುಷ ಸೇವಾಲಾಲ*

🙏✍🏿 *ಲಂಬಾಣಿ ಜನಾಂಗದ ದಾರ್ಶನಿಕ, ಸಾಧುಪುರುಷ ಸೇವಾಲಾಲ*


(ಆರಾಧನೆ: ಪ್ರೋ.ಕೆ. ಖಂಡೋಬ)

*ಫೆಬ್ರವರಿ 15, 2018 ಮಹಾ ಸಂತ ಶ್ರೀ ಸೇವಾಲಾಲರ 279ನೇ ಜಯಂತಿ. ಕರ್ನಾಟಕ ಸರಕಾರ ಈ ಮಹಾಸಂತನ ಜಯಂತಿಯನ್ನು ಕರ್ನಾಟಕದಾದ್ಯಂತ ಮೊಟ್ಟಮೊದಲ ಬಾರಿಗೆ ಸರಕಾರದ ವತಿಯಿಂದ ಆಚರಿಸುತ್ತಿದ್ದು, ತನ್ನಿಮಿತ್ತ ಈ ಲೇಖನ, ಲೋಕಕಲ್ಯಾಣಕ್ಕಾಗಿ ಈ ಭರತ ಭೂಮಿಯಲ್ಲಿ ಹಲವು ಜನ ಸಾಧು-ಸಂತರು, ಸತ್ಪುರುಷರು, ಮೇಧಾವಿಗಳು, ದಾರ್ಶನಿಕರು, ಬುದ್ಧಿಜೀವಿಗಳು ಮತ್ತು ತ್ಯಾಗಿಗಳು ಅವತರಿಸಿದ್ದಾರೆ. ಜನತೆಯಲ್ಲಿನ ಜಾತಿಪದ್ಧತಿ ಮತ್ತು ಧರ್ಮಾಂಧತೆಗಳನ್ನು ತೊಡೆದುಹಾಕಲು ಆಯಾ ಕಾಲಘಟ್ಟದಲ್ಲಿ ಹಲವು ಜನ ಸಾಂಸ್ಕೃತಿಕ ನಾಯಕರು, ಮೇಧಾವಿಗಳು ಹೋರಾಟ ಮಾಡಿದ್ದಾರೆ.*

*ಸೇವಾಲಾಲನ ಜನನ, ಮರಣ, ಜೀವನ, ಸಾಧನೆ, ಹೋರಾಟಗಳ ಹಿನ್ನೆಲೆಯಲ್ಲಿ ಲಂಬಾಣಿ ಮೌಖಿಕ ಪರಂಪರೆಯಲ್ಲಿ ಹಲವು ಐತಿಹ್ಯ ಕಥೆ ಪುರಾಣಗಳು ಹುಟ್ಟಿಕೊಂಡಿವೆ. ಇವುಗಳು ಸೇವಾಲಾಲನ ವಾಸ್ತವ ಸಂಗತಿಗಳಿಗಿಂತ ಹೆಚ್ಚಾಗಿ ಅವನನ್ನು ಒಬ್ಬ ಪೌರಾಣಿಕ ವ್ಯಕ್ತಿಯನ್ನಾಗಿ ಚಿತ್ರಿಸಿ ದೈವತ್ವಕ್ಕೆ ಏರಿಸಿವೆ. ವಾಸ್ತವವಾಗಿ ಸೇವಾಲಾಲ ತಮ್ಮ ಜೀವಿತ ಕಾಲಾವಧಿಯಲ್ಲಿ ತನ್ನನ್ನು ನಂಬಿದ ಒಂದು ಜನಾಂಗದ ತನ್ನದೆಲ್ಲವನ್ನೂ ಧಾರೆ ಎರೆದ ಒಬ್ಬ ಮಹಾಸಂತನೆಂಬುದು ಸತ್ಯ. ಲಂಬಾಣಿಗರಲ್ಲಿ ಸೇವಾಲಾಲ್ ಬಹುದೊಡ್ಡ ಸಾಧುಪುರುಷ. ಬಾಲಬ್ರಹ್ಮಚಾರಿಯಾಗಿ ತಪಸ್ಸು, ಧ್ಯಾನ ಮತ್ತು ಭಕ್ತಿ ಮೂಲಕ ಅಧ್ಯಾತ್ಮವನ್ನು ಅಪ್ಪಿಕೊಂಡು, ತನ್ನ ಜನಾಂಗದ ಸೇವೆಯನ್ನು ಮಾಡಿದ ಮಹಾನ್ ಹಿತಚಿಂತಕ. ಅಧ್ಯಾತ್ಮದ ಮೂಲಕವಾಗಿ ಜನಾಂಗಕ್ಕೆ ಉಪದೇಶಗಳನ್ನು ನೀಡಿ, ಸನ್ಮಾರ್ಗದತ್ತ ಕೊಂಡೊಯ್ದ ಮಾರ್ಗದರ್ಶಕ. ಸೇವಾಲಾಲರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಇಂದು ಐಕ್ಯತೆ ಯನ್ನುಂಟುಮಾಡಿರುವುದು ಸ್ಪಷ್ಟ.*

*ಇಂದು ಬಂಜಾರರು ಸಾಂಸ್ಕೃತಿಕ ನೆಲೆಯಲ್ಲಿ ತನ್ನ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ಮಹಾನುಭಾವರ ಸತ್ಕಾರ್ಯಗಳೇ ಕಾರಣವಾಗಿವೆ. ಹೀಗಾಗಿ ಬಂಜಾರ ಸಮುದಾಯದಲ್ಲಿ ಸೇವಾಲಾಲರು ವೀರನಾಗಿ, ವಿರಾಗಿಯಾಗಿ, ಒಬ್ಬ ಶ್ರೇಷ್ಠ ದಾರ್ಶನಿಕನಾಗಿ ಮತ್ತು ಸಾಂಸ್ಕೃತಿಕ ನಾಯಕನಾಗಿ ಚಿರಸ್ಥಾಯಿಯಾಗಿದ್ದಾರೆ. ಸೇವಾಲಾಲರು ಹುಟ್ಟಿನಿಂದಲೇ ದೈವಾಂಶ ಸಂಭೂತ. ಆತನ ಚರಿತ್ರೆ, ಪವಾಡ, ಅವತಾರ, ಮೊದಲಾದವುಗಳನ್ನು ಲಂಬಾಣಿಗಳು ತಮ್ಮ ಭಜನೆಗಳಲ್ಲಿ ದಿನಗಟ್ಟಲೆ, ವಾರಗಟ್ಟಲೇ ಹಾಡುತ್ತಾರೆ. ಸೇವಾಲಾಲರ ಕಾಲ, ಜನನ, ವೃತ್ತಾಂತ, ಮರಣ ಮತ್ತು ಬದುಕಿನ ಬಗೆಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆದಿದೆ. ಚಾರಿತ್ರಿಕ ಆಧಾರಗಳು ಇಲ್ಲದ್ದರಿಂದ ಯಾವುದೇ ಖಚಿತವಾದ ಮಾಹಿತಿಗಳು ದೊರೆಯುವುದಿಲ್ಲ. ಅವರ ಕಥನ ಗೀತೆಗಳು, ಲಾವಣಿಗಳು, ಭಜನೆ-ಗೀತೆ ಹಾಗೂ ಕೆಲವು ಭೌಗೋಳಿಕ ಆಧಾರಗಳನ್ನು ಆಧರಿಸಿ ಇದೀಗ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪವೇ ಸೇವಾಲಾಲರ ಜನ್ಮಸ್ಥಳವೆಂದು ನಿರ್ಧರಿಸಲಾಗಿದೆ. ಈ ಪ್ರದೇಶದಲ್ಲಿ ಇಂದಿಗೂ ಕಂಡುಬರುವ ಝುಮ್ರಿ ಝೋಲ್, ಭೂರಿಪಟಾರ್, ಚಂದನಖೋಳಿ, ಕಾಳೋಕೂಂಡೋ, ಕಿಂಚೇರ್ ಗುಂಡಿ, ಬನದವ್ವನ ಗುಡಿ ಮತ್ತು ಗೊಲ್ಲನಮಟ್ಟಿ ಮೊದಲಾದ ಸ್ಥಳಗಳು ಅವರ ಲಾವಣಿಗಳಲ್ಲಿ ಸ್ಪಷ್ಟವಾಗಿ ದಾಖಲಾಗಿರುವುದರಿಂದ ಸೂರಗೊಂಡನಕೊಪ್ಪ ಪ್ರದೇಶವೇ ಸೇವಾಲಾಲರ ಜನ್ಮಸ್ಥಳ ಆಗಿರುವುದರಲ್ಲಿ ಯಾವ ಸಂದೇಹಗಳು ಇರಲಾರವು.*

*ಭೀಮಾ ನಾಯಕ ಹಾಗೂ ಧರ್ಮಿಣಿ ಬಾಯಿಗೆ ಮದುವೆ ಮಾಡುತ್ತಾರೆ. ಮದುವೆಯಾಗಿ 12 ವರ್ಷ ಕಳೆದರೂ ಸಂತಾನ ಪ್ರಾಪ್ತಿಯಾಗುವುದಿಲ್ಲ. ಈ ದಂಪತಿಗಳಿಬ್ಬರೂ ಜಗನ್ಮಾತೆಯ ಭಕ್ತಿಸೇವೆಯಲ್ಲಿ ಸುಖ-ಸಂತೋಷದಿಂದ ಬದುಕು ಸಾಗಿಸುತ್ತಿದ್ದರು. ಸಂತಾನ ಪ್ರಾಪ್ತಿಗಾಗಿ ಕಂಡ ಕಂಡ ದೇವರು-ದೇವತೆಗಳಿಗೆ ಮೊರೆ ಹೋದರೂ ಪ್ರಯೋಜನವಾಗಲಿಲ್ಲ. ಕೊನೆಗೆ, ಜಗದಂಬೆಯನ್ನೇ ನಂಬಿಕೊಂಡು ಅವಳ ಭಕ್ತಿಯಲ್ಲಿ ಕಾಲ ಕಳೆಯುತ್ತಾ, ಸಂತಾನ ಪ್ರಾಪ್ತಿಗಾಗಿ ಸಂಕಲ್ಪವನ್ನು ಮಾಡಿ ಭೀಮಾ ನಾಯಕರು ಘೋರವಾದ ತಪಸ್ಸನ್ನು ಕೈಗೊಳ್ಳುತ್ತಾನೆ. ಕೊನೆಗೆ ಶಿವ-ಪಾರ್ವತಿಯ ಕರುಣೆಯಿಂದ ಸಂತಾನ ಭಾಗ್ಯವನ್ನು ಈ ನಡುವೆ ತಮಗೆ ಮಗುವಾದರೆ ಭಕ್ತಿಯ ಹೆಸರಲ್ಲಿ ನಿನಗೆ ಒಪ್ಪಿಸುತ್ತೇವೆ ಎಂದು ಮರಿಯಮ್ಮನಲ್ಲಿ ಹರಕೆ ಹೊತ್ತಿರುತ್ತಾರೆ. ಹೀಗೆ ಹುಟ್ಟಿದ ಮಗು ಸಾಮಾನ್ಯ ಮಗುವಾಗಿರಲಿಲ್ಲ. ಅವನೊಬ್ಬ ಸತ್ಪುರುಷನಾಗಿದ್ದ. ಮಾಣಿಕ್ಯದಂತಹ ಮಗುವಿಗೆ ಸಾಕ್ಷಾತ್ ಮಾತೆ ಜಗದಂಬೆಯೇ ಮಾರುವೇಷದಲ್ಲಿ ಬಂದು, ಸೇವಾಭಾಯಾ, ಸೇವಾಲಾಲ ಎಂದು ನಾಮಕರಣ ಮಾಡುತ್ತಾಳೆ.*

*ಆ ಮಗು ಶಿವನ ಅವತಾರಿಯಾಗಿದ್ದು, ದೇವಿಯ ಭಕ್ತನಾಗಿದ್ದಾನೆ. ಆತನು ಬಂಜಾರ ಕುಲದ ವಂಶೋದ್ಧಾರಕನಾಗಿದ್ದು, ದುಷ್ಟರನ್ನು ಸಂಹರಿಸಿ, ಶಿಷ್ಟರ ರಕ್ಷಣೆ ಮಾಡುವನೆಂದು ಜಗದಂಬೆ ಹೇಳಿ, ಅಲ್ಲಿಂದ ಕಾಲಚಕ್ರ ಗತಿಸಿ ಸೇವಾಲಾಲನಿಗೆ 12 ವರ್ಷ ತುಂಬಿದಾಗ ಮರಿಯಮ್ಮ ತನ್ನ ಷರತ್ತನ್ನು ಈಡೇರಿಸಬೇಕೆಂದು ಧರ್ಮಿಣಿ ಬಾಯಿಯ ಕನಸಿನಲ್ಲಿ ಬಂದು ಸೇವಾಲಾಲನನ್ನು ತನ್ನ ಸೇವೆಗೆ ಬಿಡಬೇಕೆಂದು ಒತ್ತಾಯಿಸುತ್ತಾಳೆ. ಅದಕ್ಕೆ ಧರ್ಮಿಣಿಯು ಒಪ್ಪದೇ ಹೋದಾಗ ನೇರವಾಗಿ ಸೇವಾಲಾಲನನ್ನು ತನ್ನ ಭಕ್ತನಾಗಬೇಕೆಂದು, ತನ್ನ ಜತೆಗೆ ಬರಬೇಕೆಂದು ಕೇಳಿದಾಗ ಅವನೂ ಭಕ್ತನಾಗಲು ತಿರಸ್ಕರಿಸುತ್ತಾನೆ. ತಾನು ಪರಮಾತ್ಮನ ಸೇವಕನೆಂದು, ಮರಿಯಮ್ಮಳ ಸೇವೆ ಮಾಡಲಾರನೆಂದು ಹಠ ಹಿಡಿಯುತ್ತಾನೆ. ಇದರಿಂದ ಅವಮಾನಿತಳಾದ ಮರಿಯಮ್ಮ ಸೇವಾಲಾಲನ ಕುಟುಂಬದ ಸರ್ವಸ್ವವನ್ನು ನಾಶ ಮೂಲಕ ಪರಿಪರಿಯಾಗಿ ಕಾಡಿಸುತ್ತಾಳೆ. ಇದರಿಂದ ಹತಾಶನಾದ ಸೇವಾಭಾಯಾ ಅನಿವಾರ್ಯವಾಗಿ ಜಗನ್ಮಾತೆಯ ಭಕ್ತನಾಗಲು ಒಪ್ಪಿಕೊಳ್ಳುತ್ತಾನೆ.*

*ಕಾಲಗತಿಯಲ್ಲಿ ಹತ್ತಾರು ವರ್ಷಗಳವರೆಗೆ ಮರಿಯಮ್ಮನ ಸೇವೆಗೆ ತೊಡಗಿಸಿಕೊಂಡ ಸೇವಾಲಾಲರು ಮುಂದೆ ಸಮುದಾಯದಲ್ಲಿ ಜಗನ್ಮಾತೆಗಿಂತ ಹೆಚ್ಚಿನ ಜನಪ್ರಿಯತೆಯನ್ನು ಪಡೆಯುತ್ತಾನೆ. ಜನರು ಮರಿಯಮ್ಮನನ್ನು ಮರೆತು ಸೇವಾಲಾಲನನ್ನೇ ಪೂಜಿಸುವಂತೆ ಮಹಾನ್ ಸಾಧಕನಾಗಿ ಮೆರೆಯುತ್ತಾನೆ. ತನ್ನ ಜನಸಮುದಾಯದ ಏಳಿಗೆಗಾಗಿ ಶ್ರಮಿಸಿ, ಅವರ ಬದುಕನ್ನು ಹಸನುಗೊಳಿಸಲು ನಿರಂತರವಾಗಿ ಹೋರಾಡುತ್ತಾನೆ. ಮರಿಯಮ್ಮಳಿಂದ ಮೊದಲೇ ವರವನ್ನು ಪಡೆದುಕೊಂಡಿದ್ದ ಸೇವಾಲಾಲ ತನ್ನ ಭಕ್ತರು ಕೇಳಿದ ವರಗಳ ತಕ್ಷಣವೇ ಈಡೇರಿಸಿ ಪ್ರಖ್ಯಾತಿಯನ್ನು ಪಡೆದುಕೊಂಡನು. ಈತನ ಜನಪ್ರಿಯತೆಯನ್ನು ಕಂಡು ಮರಿಯಮ್ಮ ಸಹಿಸಲಾರದೇ ಅವನು ಬ್ರಹ್ಮಚಾರಿಯಾಗಿರುವುದರಿಂದಲೇ ಇಷ್ಟೊಂದು ಪ್ರಭಾವಶಾಲಿಯಾಗಿರವನೆಂದು ಬಗೆದು, ಅವನಿಗೆ ಮದುವೆ ಮಾಡಿಸುವ ಮೂಲಕ ಆತನ ಜನಪ್ರಿಯತೆಯನ್ನು ಕುಗ್ಗಿಸಬೇಕೆಂದು ನಿರ್ಧರಿಸುತ್ತಾಳೆ. ಅಂತೆಯೇ, ಸೇವಾನ ಬಳಿಗೆ ಬಂದು ಮದುವೆಯಾಗುವಂತೆ ಅವನನ್ನು ಒತ್ತಾಯಿಸುತ್ತಾಳೆ. ಅದಕ್ಕೆ ಒಪ್ಪಿಕೊಳ್ಳದ ಸೇವಾಲಾಲ ತಾನು ಸಮಸ್ತ ಸಮುದಾಯದವರಿಗೆ ‘‘ಭಾಯಾ’’ (ಸಹೋದರ) ಆಗಿರುವುದರಿಂದ ನಾನು ಯಾರೊಂದಿಗೆ ಮದುವೆಯಾಗಲೆಂದು ವಾದಿಸುತ್ತಾನೆ.*

*ಎಲ್ಲಾ ನಾರಿಯರು ನನಗೆ ಸಹೋದರಿಯರು ಆಗಿರುವುದರಿಂದ ಈ ಮದುವೆ ಅಲ್ಲಗಳೆಯುತ್ತಾನೆ. ಆಧ್ಯಾತ್ಮ ಜೀವಿಯಾಗಿ ಸಾಧಕನಾಗಿದ್ದ ಸೇವಾಭಾಯಾ ಮರಿಯಮ್ಮನ ಮಾತನ್ನು ತಿರಸ್ಕರಿಸುತ್ತಾನೆ. ಮರಿಯಮ್ಮ ಅವಮಾನಿತಳಾಗಿ ಮತ್ತೆ ಮತ್ತೆ ಒತ್ತಾಯಿಸಿದಾಗ, ಬ್ರಹ್ಮನು ತನ್ನ ಹಣೆಬರಹದಲ್ಲಿ ಮದುವೆಯಾಗುವುದನ್ನು ಬರೆದಿಲ್ಲವಾದ್ದರಿಂದ ಮದುವೆಯಾಗುವುದಾದರೂ ಹೇಗೆ ? ಎಂದು ಪ್ರಶ್ನಿಸುತ್ತಾನೆ. ಹಾಗಾದರೆ, ನಿನ್ನ ಹಣೆಯ ಬರಹವನ್ನು ಪರೀಕ್ಷಿಸಲು ದೇವಲೋಕಕ್ಕೆ ಹೋಗೋಣವೆಂದು ಅವನನ್ನು ಕರೆಯುತ್ತಾಳೆ. ಅದಕ್ಕೆ ಸಮ್ಮತಿಸಿದ ಸೇವಾಭಾಯಾ ಮರಿಯಮ್ಮನೊಂದಿಗೆ ದೇವಲೋಕಕ್ಕೆ ಹೋಗಲು ಅಣಿಯಾಗುತ್ತಾನೆ. ಸೇವಾ ಭಾಯಾ ತಾನು ಸ್ವರ್ಗಲೋಕಕ್ಕೆ ತನ್ನ ಹಣೆಯ ಬರಹವನ್ನು ಕೇಳಲು ಬ್ರಹ್ಮನಲ್ಲಿಗೆ ಹೋಗುವ ಪ್ರಸ್ತಾಪಿಸಿ, ತನ್ನ ಶರೀರವನ್ನು ದೇವಸ್ಥಾನದಲ್ಲಿಟ್ಟು, ಬೇವಿನ ಸೊಪ್ಪಿನಲ್ಲಿ ಮುಚ್ಚಿಡಬೇಕೆಂದು, ತಾನು ಹಿಂದಿರುಗಿ ಬರುವವರೆಗೆ ನಿರಂತರವಾಗಿ ಭಜನೆ ಮಾಡುತ್ತಿರಬೇಕೆಂದು, ಬೇವಿನ ಸೊಪ್ಪಿನಲ್ಲಿರುವ ನನ್ನ ಶರೀರವನ್ನು ಅಪ್ಪಿ-ತಪ್ಪಿಯೂ ಯಾರೂ ಮುಟ್ಟಬಾರದೆಂದು ತನ್ನ ಬಂಧು-ಬಾಂಧವರಿಗೆಲ್ಲಾ ತಿಳಿಸಿ, ಸ್ವರ್ಗಕ್ಕೆ ಹೊರಡುತ್ತಾನೆ.*

*ಅವನು ಹೇಳಿ ಹೋದಂತೆ ಸಮುದಾಯದವರೆಲ್ಲಾ ಕಟ್ಟುನಿಟ್ಟಾಗಿ ನಡೆದುಕೊಳ್ಳುತ್ತಾರೆ. ಸ್ವರ್ಗದಲ್ಲಿ ಪರಮಾತ್ಮನ ಸಮಕ್ಷಮದಲ್ಲಿ ಮರಿಯಮ್ಮ ಮತ್ತು ಸೇವಾಲಾಲ ತಮ್ಮ ವಾದಗಳನ್ನು ಮಂಡಿಸುತ್ತಾರೆ. ಕೊನೆಗೆ ಸೇವಾಲಾಲನ ಹಣೆಯ ಬರಹವನ್ನು ಪರೀಕ್ಷಿಸಿದ ಪರಮಾತ್ಮನು ಅವನಿಗೆ ಮದುವೆ ಎಂಬುದೇ ಸ್ಪಷ್ಟಪಡಿಸುತ್ತಾನೆ. ಇದರಿಂದ ಇನ್ನಷ್ಟು ಅವಮಾನಿತಳಾದ ಮರಿಯಮ್ಮ ಇನ್ನು ತನಗೆ ಉಳಿಗಾಲ ಇಲ್ಲವೆಂದು, ಲಂಬಾಣಿ ಸಮುದಾಯದಲ್ಲಿ ತನ್ನ ಅಸ್ತಿತ್ವವೇ ಇಲ್ಲದಂತಾಗುವುದೆಂದು ಯೋಚಿಸಿ ಸೇವಾನಿಗಿಂತ ಮೊದಲೇ ಭೂಲೋಕಕ್ಕೆ ಇಳಿದು ಬಂದು ಮಾರುವೇಷದಲ್ಲಿ ನೇರವಾಗಿ ತಾಯಿ ಧರ್ಮಿಣಿ ಬಾಯಿ ಬಳಿಗೆ ಹೋಗುತ್ತಾಳೆ. ‘‘ನಿನ್ನ ಮಗ ಸೇವಾಲಾಲ ದೇವಸ್ಥಾನದಲ್ಲಿ ಸತ್ತು ಬಿದ್ದಿದ್ದು, ನೀನು ಇಲ್ಲಿ ನಿಶ್ಚಿಂತವಾಗಿ ಕಸೂತಿ ಹಾಕುತ್ತಿದ್ದೀಯ ?’’ ಎಂದು ಅವಳಿಗೆ ಹೇಳುತ್ತಲೇ ದು:ಖಿತಳಾದ ಧರ್ಮಿಣಿ ಬಾಯಿ ಎದ್ದು-ಬಿದ್ದು ದೇವಸ್ಥಾನಕ್ಕೆ ಬಂದು ಯಾರು ತಡೆದರೂ ಕೇಳದೇ ಮಗನ ದೇಹದ ಮೇಲೆ ರಪ್ಪನೇ ಬಿದ್ದು ಗೋಳಿಡುತ್ತಾಳೆ.*

*ಸೇವಾ ಭಾಯಾ ಭೂಲೋಕಕ್ಕೆ ಕಾಲಿಡುವಷ್ಟರಲ್ಲಿ ಆತನ ದೇಹಕ್ಕೆ ಮನುಷ್ಯರ ಸ್ಪರ್ಶವಾಗುತ್ತಿದ್ದಂತೆಯೇ ಆತನ ಆತ್ಮವು ಮರಳಿ ದೇಹವನ್ನು ಸೇರದೇ ಹಿಂದಿರುಗಿ ಸ್ವರ್ಗಕ್ಕೆ ಹೋಗಿಬಿಡುತ್ತದೆ. ಹೀಗೆ ಅಮರನಾದ ಸೇವಾಲಾಲರ ದೇಹಾಂತ್ಯವಾದ ಮೇಲೆ ಮಹಾರಾಷ್ಟ್ರದ ವಾಸಿಮ್ ಜಿಲ್ಲೆಯ ಅಕ್ಕೋಲ ತಾಲ್ಲೂಕಿನ ಸಮೀಪದಲ್ಲಿರುವ ಪೊಹರಾಗಢ ಎಂಬಲ್ಲಿ ಅಂತ್ಯಸಂಸ್ಕಾರ ನಡೆಯಿತು. ಈಗ ಅಲ್ಲಿ ಸೇವಾಲಾಲ್ ಮತ್ತು ಜಗನ್ಮಾತೆ ಮರಿಯಮ್ಮಳ ಬೃಹತ್ ಮಂದಿರಗಳನ್ನು ಕಟ್ಟಿದ್ದು, ಅದು ಬಂಜಾರರ ಪುಣ್ಯಕ್ಷೇತ್ರವಾಗಿದೆ. ಭಾರತದಾದ್ಯಂತ ನೆಲೆಯಾಗಿರುವ ಅಸಂಖ್ಯಾತ ಬಂಜಾರರು ಈ ತೀರ್ಥಕ್ಷೇತ್ರಕ್ಕೆ ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆದು ಪಾವನರಾಗುತ್ತಾರೆ. ಸೇವಾಲಾಲರ ಜನ್ಮಭೂಮಿ ಕರ್ನಾಟಕದ ಸೂರಗೊಂಡ ನಕೊಪ್ಪದಲ್ಲಿ ಇಂದು ಕರ್ನಾಟಕ ಸರಕಾರದ ಸುಪರ್ದಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಜರುಗಿ, ವಿಸ್ತಾರವಾದ ತೀರ್ಥಕ್ಷೇತ್ರವಾಗಿ ಪರಿಣಮಿಸಿದೆ. ಸರಕಾರ ಈಚೆಗೆ ಮತ್ತೆ 13 ಎಕರೆ ಜಮೀನನ್ನು ನೀಡಿ, ಬೃಹತ್ ಪ್ರಮಾಣದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದೆ.*

*ಪ್ರತಿ ವರ್ಷ ನಡೆಯುವ ಸಂತ ಸೇವಾಲಾಲನ ಜಯಂತಿಗಾಗಿ ಕರ್ನಾಟಕದ ಭಕ್ತಾದಿಗಳು ಶಬರಿಮಲೆಯ ಸ್ವಾಮಿಗಳಂತೆ ವ್ರತಾಧಾರಿಗಳಾಗಿ ಶ್ವೇತವಸ್ತ್ರಗಳನ್ನುಟ್ಟು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಯಾತ್ರೆಯಲ್ಲಿ ಪಾಲ್ಗೊಂಡು ಪುನೀತರಾಗುತ್ತಿದ್ದಾರೆ. 2018ರ ಈ ಜಯಂತಿಯನ್ನು ಕರ್ನಾಟಕ ಸರಕಾರ ಅಧಿಕೃತವಾಗಿ ರಾಜ್ಯಾದ್ಯಂತ ಆಚರಿಸಲು ಮುಂದಾಗಿದ್ದು, ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸಾಗರೋಪಾದಿಯಲ್ಲಿ ಭಕ್ತರು ಸೇರುವ ನಿರೀಕ್ಷೆ ಇದೆ. ಸೇವಾಲಾಲರು ಯೋಗಿಯಾಗಿ, ಮಹಾಸಂತರಾಗಿ ಲೋಕಕಲ್ಯಾಣಕ್ಕಾಗಿ ದೇಶಾದ್ಯಂತ ಸಂಚರಿಸಿ, ಅವರ ಬದುಕನ್ನು ಪಾವನ ಮಾಡುತ್ತಾ, ಅವರ ಬಾಳಿಗೆ ಬೆಳಕನ್ನು ನೀಡುತ್ತಾ, ಬಡತನ, ಕಷ್ಟ-ಕಾರ್ಪಣ್ಯಗಳಿಂದ ಬಳಲುತ್ತಿದ್ದವರಿಗೆ ಸುಂದರವಾಗಿ, ಸುವಿಚಾರಗಳನ್ನು ಹೇಳುತ್ತಾ, ತಿದ್ದಿ-ತೀಡುತ್ತಾ ಕಲ್ಯಾಣ ಮಾಡಿದರು.

14.2.18

ಶ್ರೀ ಸೇವಾ ಲಾಲ್

🌸ಶ್ರೀ ಸೇವಾ  ಲಾಲ್🌸


👉 ಸೇವಾಭಾಯ,ಸೇವಲಾಲ್ ಎಂಬ ನಾಮಾದೊಂದಿಗೆ ಬಡ ಬಂಜಾರರ ಅಜ್ಞಾನ ದೂರ ಮಾಡಲು ಫೆಬ್ರವರಿ 15 .1739 ರಲ್ಲಿ ಶ್ರೀ ಭೀಮ ನಾಯ್ಕ ಶ್ರೀಮತಿ ಧರ್ಮಿಣಿ ಮಾತೆ ಎಂಬ ದಂಪತಿಯ ಉದರದಲ್ಲಿ ಕರ್ನಾಟಕದ ಈಗಿನ ದಾವಣಗೆರೆ ಜಿಲ್ಲೆಯ  ಹೊನ್ನಾಳಿ ತಾಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೋಪ್ಪ(ಭಾಯಗಡ್, ಸೂರ ಖಂಡ್) ಎಂಬಲ್ಲಿ ಈ ದೈವ ಪುರುಷನ ಜನನವಾಯಿತು.

👉 ಹರಪ್ಪ ನಾಗರಿಕತೆಯಿಂದ ಬೆಳೆದು ಬಂದ ಬಂಜಾರರು.ಸಾವಿರಾರು ವರ್ಷಗಳಿಂದ ಗ್ರಾಮ,ನಗರ ಜೀವನಗಳಿಂದ ದೂರವಿದ್ದು,ಅಜ್ಞಾನ,ಅಂಧಕಾರಗಳಿಂದ ಅರಣ್ಯವಾಸಿಗಳಾಗಿ ಜೀವನ ನಡೆಸುತ್ತಿದ್ದ ಇವರಿಗೆ ಶ್ರೀ ಸೇವಾ ಲಾಲ್ ಮಹಾರಾಜರ ಜನನದಿಂದ ಮುಕ್ತಿಯ ಮೇಟ್ಟಿಲಾಯಿತು.

👉 ಬಂಜಾರರು ಈ ದೈವ ಪುರುಷನನ್ನು "ಮೋತಿವಾಳೋ" "ಲಾಲ್ ಮೋತಿ" ಎಂದು ಕರೆಯುತ್ತರೆ.

👉 ಕಾರಣ ಮುಂಬಯಿಯ "ಸ್ಮಿತ್ ಭಾವುಚಾ" ಎಂಬ ಸ್ಥಳದಲ್ಲಿ ಹಿಂದೆ ಪೋರ್ಚುಗೀಸರ ಹಡಗು ಸಿಕ್ಕಿ ಹಾಕಿ ಕೊಂಡಿತ್ತು. ಇದನ್ನು ಸೇವಾಲಾಲ್ ತಮ್ಮ ಜಾಣತನದಿಂದ ದಡ ಸೇರಿಸಿದ ವೀರರಾಗಿದ್ದರು.ಅದರ ಪ್ರತಿಯಾಗಿ ಪೋರ್ಚುಗೀಸರು ಇವನಿಗೆ ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು.ಅದಕ್ಕಾಗಿ ಇತನನ್ನು ಮೋತಿವಾಳೋ ಎಂದು ಕರೆಯುತ್ತರೆ.

👉  ಬುದ್ಧ,ಬಸವ,ಕಬೀರ,ಗುರು ನಾನಕ್ ,ಮುಂತಾದ ಧಾರ್ಮಿಕ ಮಾನವತವಾದಿಗಳ ಮಧ್ಯೆ ಒಬ್ಬ ಸಾಮಾನ್ಯ ದನಗಳನ್ನು ಮೇಯಿಸುತ್ತ ದನಗಾಹಿ ಗೋಪಾಲನಾಗಿದ್ದ ಸೇವಾಲಾಲ್ ತಮ್ಮ ಜೀವನನುಭವದ ಮೂಲಕ ಗೌರಯುತ ಮಾತುಗಳಲ್ಲಿ ಸತ್ಯ,ಅಹಿಂಸಾ ಮಾರ್ಗಗಳನ್ನು ಪ್ರಕಾಶಗೋಳಿಸುವ ನಿಟ್ಟಿನಲ್ಲಿ ತಮ್ಮ ಬೋಧನೆಯನ್ನು ನಡೆಸಿದರು.ಒಂದು ಸಹೋದರತ್ವದ,ಭ್ರಾತೃತ್ವದ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು.

👉 ಇಂತ ಮಾನವತಾವಾದಿಯ ಜನನದ ಮತ್ತು ಜೀವನ ಮೌಲ್ಯಗಳು  ಇಂದು ತಾಂಡಗಳಲ್ಲಿ ಜನ ಜನಿತವಾಗಿವೆ.

👉 ಹಲವಾರು ಅಜ್ಞಾನಗಳು,ಮೌಢ್ಯತೆಯ ಪರಾಕಾಷ್ಟೆ ತಲುಪಿ ಅಂಧಕಾರಲ್ಲಿ ಮುಳಗಿರುವ ಸಂದರ್ಭದಲ್ಲಿ ಸಾಮಾನ್ಯ ಸರಳ ವ್ಯಕ್ತಿ ಸದ್ಗುರು ಸೇವಾಲಾಲ್ ರ ಅನುಭವದ ಜ್ಞಾನದ ನುಡಿಗಳು ಇಂದಿಗೂ ಮಾರ್ಗದರ್ಶನವಾಗಿವೆ.

🌺 ನುಡಿಗಳು,ತತ್ವಗಳು💐


*  ಸೇನ ಸಾಯಿ ವೇಸ್
   ಜೀವ ಜನಗಾನಿನ ಸಾಯಿವೇಸ್
ಖೂಂಟಾ ಮುಂಗ್ರಿನ್ ಸಾಯಿ ವೇಸ್
ಕೊರೆ - ಗೋರೂನ ಸಾಯಿವೇಸ್.
ಕೀಡಾ ಮಕೋಡಾನ ಸಾಯಿವೇಸ್.

ಅರ್ಥ : ಮನುಷ್ಯನಿಗೆ ಮಾತ್ರವಲ್ಲದೆ ಜೀವ
 ಜಂತುಗಳಿಗೆ ಕ್ರೀಮಿ ಕೀಟಗಳಿಗೆ ಒಳ್ಳೆದಾಗಲಿ.ಎಂದು( ಇಲ್ಲಿ ತನ್ನ ಸ್ವರ್ಥಕ್ಕಿಂತ ಇಡಿ ಭೂಮಿಗೆ ಒಳ್ಳೆಯದನ್ನು ಬಯಸುತ್ತರೆ)

* "ಧನ್ ಧಾನೇತಿ ಧಪಾಡೇಸ್"

ಅರ್ಥ : ಧರ್ಮದ ವ್ಯಾಖ್ಯಾನು ಮಾಡುತ್ತ ಸತ್ಯ, ಅಹಿಂಸೆ,ದಯೆ,ಕರುಣೆ,ಪ್ರಜ್ಞೆಗಳನ್ನು ಪವಿತ್ರವೆಂದು ಒಪ್ಪಿಕೊಂಡು ಯಾರು ಕರ್ತವ್ಯವನ್ನು ಮಾಡುತ್ತಾರೋ ಅವರೇ ಧರ್ಮಿಗಳು,ಆದ್ದರಿಂದ ' ಪ್ರಕೃತಿಯೆ ಧರ್ಮ' ಎಂದು ಸಾರಿದರೂ.

* " ಬೋಲಜೋ ಮತ್ತ್ ಲುಚಿ(ಲಾಟಿ) ಲಬಾಡಿ"

ಅರ್ಥ : ಸುಳ್ಳನ್ನು ಯಾರು ನುಡಿಯ ಬಾರದು. ಎಂದು ಹೇಳಿದರು.ಸತ್ಯ ನುಡಿಯಿರಿ ಎಂದು ಜಗತ್ತಿಗೆ ಸಾರಿದರೂ.

* "ಮತ ಲೋ ಜೀವ
    ಕಾಡೋ ಮತ್ ಕೋಯಿ ಲೋಯಿ"

ಅರ್ಥ : ಯಾವುದೇ ಜೀವಿಯನ್ನು ಕೋಲ್ಲಬೇಡ,ಅದರ ರಕ್ತವನ್ನು ತೆಗೆಯಬೇಡ. (ಅಹಿಂಸೆ ಯನ್ನು ಪ್ರತಿಪಾದಿಸಿದರೂ)

*  ಚೋರಿ ಮತ್ತ್ ಕರೋ
   ಕರಿಯೇ ಚೋರಿ ಖಾಂಯೆ ಕೋರಿ
    ಹಾತೆ ಮಾಯಿ ಹತಕಡಿ,ಪಗಮಾಯಿ ಬೇಡಿ
ಡೋರಿ ಡೋರಿ ಹಿಂಡಿಯೇ.....,

ಅರ್ಥ : ಕಳ್ಳತನ ಮಾಡಬೇಡಿ,ಕಳ್ಳತನ ಮಾಡುವವರನ್ನು ಬೇಡಿ ಹಾಕಿ ಓಡಾಡಿಸುತ್ತರೆ.

* " ದಾರೂ,ಗಾಂಜಾ ಮತ್ ಪೀವೋ"

ಅರ್ಥ : ವ್ಯಸನ ಮುಕ್ತರಾಗಿ.

* "ಜೋರ್ ಜುಲೂಮ್
ಗೋರ್ ಗರೀಬ ದಾಂಡನ್ ಖಾಯೇ
ವೋರಿ ಸಾತ್ ಪೀಡೀ ಪರ ದಾಗ್ ಲಗ ಜಾಯೆ
ವಂಶ ಪರ ದೀವೋ ಕೋನಿ ರೀಯೇ.

ಅರ್ಥ : ಬಡವರಿಗೆ ಎಂದು ದಂಡ ಹಾಕಬೇಡಿ .

* ಕಾಮಾ ಕ್ರೋಧೇರಿ ಧೂಣಿ ಬಾಳೋ,ಸತ್ಯ ಧರ್ಮೆನ ಆಂಗ ಚಲಾಯೋ
ಭೂಕ ಜೇನ ಅನ್ನ ಖರಾಯೋ,ತರಸ ಜೇನ ಪಾಣಿ ಪರಾಯೋ.

ಅರ್ಥ :  ತಮ್ಮ ಜೀವನದಲ್ಲಿ ಅರಿಷಡ್ ವರ್ಗಗಳನ್ನು ಸುಟ್ಟು  ಹಾಕಿ.ಸತ್ಯ ಧರ್ಮವನ್ನು ಮುನ್ನೆಡೆಸಿ.
ಹಸಿದವರಿಗೆ ಅನ್ನ ನೀಡಿ.ಬಾಯಾರಿದವರಿಗೆ ಜಲ ಪ್ರಾಪ್ತಿಮಾಡಿ.

* ದಕ್ಯಾರೋ ದಕ್ ಕಾಡ್,ಪಾಪೀರ ಛಾತ್ತೀಪರ ಲಾತ್ ಮಾರ್.
ಸೂತೇರ ಸಪನೇಮ,ಬೇಟೇರ ಹರದೇಮ.
ಸೋನಾವಳಿ ಛಾಂಯ್ ರಕಾಡ್
ಅರಕತೇಮ ಬರಕತ್ ಕರ್.

ಅರ್ಥ : ದುಃಖದಲ್ಲಿರುವವರನ್ನು ಕಾಪಾಡು,ಪಾಪಿಗಳನ್ನು ನಾಶಪಡಿಸು .

ಈ ಮೇಲಿನ ತತ್ವಗಳನ್ನು ಲೋಕಕ್ಕೆ ಸಾರಿದ ಮಹಾರಾಜರ    279 ನೇ( ಜಯಂತಿ) ಆಚರಣೆಯನ್ನು ಇಂದು ರಾಜ್ಯದಾದ್ಯಂತ ಆಚರಿಸುತ್ತಿದ್ದೆವೆ. ಆದರೆ ಎಲ್ಲಿಯವರೆಗೂ ನಾವು ಇವರ ತತ್ವಗಳನ್ನು ನಮ್ಮ ತನು ಮನದಲ್ಲಿ ಆಳವಡಿಕೊಳ್ಳುವುದಿಲ್ಲವೋ ಅಲ್ಲಿಯವರೆಗ ಇಂತಹ ದೈವಪುರುಷರ ಜಯಂತಿಗಳಿಗೆ ನಿಜವಾದ ಅರ್ಥ ಬರುವುದಿಲ್ಲ.

     *ಜೈ ಸೇವಾಲಾಲ್*

 ಕೃಪೆ : ಡಾ/ಇಂದ್ರಾ ನಾಯ್ಕ

13.2.18

ಹೀಗೊಂದು ಸರಕಾರಿ ಶಾಲೆಯ ಸಾಧನೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರಿನ ಸಾಧನೆ ಕುರಿತು :-




ಶಿವರಾತ್ರಿ

ಶಿವರಾತ್ರಿ ಮಹತ್ವ -



 ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ.

ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.

ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ.... ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ.

ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.

ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ.

ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.

ಎಲ್ಲ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ... ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂಬುದು ಎಲ್ಲರ ಕೋರಿಕೆ.. ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.

ಮಹಾ ಶಿವರಾತ್ರಿ, ರುದ್ರನ ಮಂಗಳಕರ ರಾತ್ರಿ ಸಂಪಾದಿಸಿ
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ. ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಭಕ್ತರ ಬಲವಾದ ನಂಬಿಕೆ. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.

ಶಿವರಾತ್ರಿಯ ಮಹಿಮೆ:

ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.

*ಬೇಡನ ಶಿವಭಕ್ತಿ*

ಶಿವರಾತ್ರಿ ಆಚರಣೆಯ ಕುರಿತಾಗಿ ಪ್ರಚಲಿತದಲ್ಲಿರುವ ಕಥೆಯಿದು. ಹಿಂದೆ ಬೇಡನೊಬ್ಬ ಕಾಡಿನಲ್ಲಿ ಬೇಟೆಗಾಗಿ ತೆರಳಿದ್ದ. ದಿನವಿಡಿ ಅಲೆದರೂ ಆತನಿಗೆ ಯಾವುದೇ ಬೇಟೆ ಸಿಗಲಿಲ್ಲ. ಬೇಟೆ ಅರಸಿ ಹೊರಟ ಬೇಡ ದಾರಿ ತಪ್ಪಿ ಅರಣ್ಯದಲ್ಲೇ ಅಲೆಯತೊಡಗಿದ. ಅದಾಗಲೇ ಸಂಜೆಯಾಗಿತ್ತು. ಕ್ರೂರ ಪ್ರಾಣಿಗಳು ಆತನನ್ನು ಸುತ್ತುವರಿಯತೊಡಗಿದವು. ಭಯಗ್ರಸ್ತನಾದ ಬೇಡ ಮರವೇರಿದ. ಮನದಲ್ಲೇ ಶಿವನನ್ನು ಧ್ಯಾನಿಸುತ್ತಾ ಮರದ ಎಲೆಗಳನ್ನು ಕಿತ್ತು ಕೆಳಗಡೆ ಹಾಕತೊಡಗಿದ. ಆ ಎಲೆಗಳು ಅವನಿಗರಿವಿಲ್ಲದಂತೆಯೇ ಕೆಳಗಡೆಯಿದ್ದ ಶಿವಲಿಂಗದ ಮೇಲೆ ಬೀಳತೊಡಗಿದವು. ಕಾಕತಾಳೀಯವೆಂದರೆ ಆತ ಏರಿದ್ದ ಮರ ಬಿಲ್ವಮರವಾಗಿತ್ತು. ಶಿವರಾತ್ರಿಯಂದು ಪೂರ್ತಿ ಜಾಗರಣೆಯಿದ್ದು, ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದ ಬೇಡನಿಗೆ ಶಿವ ಅಭಯ ನೀಡಿದ. ಶಿವನೇ ಆತನನ್ನು ರಕ್ಷಿಸಿದ ಎಂಬ ಸುದ್ದಿ ಹರಡಿ ಭಕ್ತರು ಶಿವರಾತ್ರಿಯಂದು ಶಿವನನ್ನು ಪೂಜಿಸಲು ಆರಂಭಿಸಿದರು. ಪುಣ್ಯದ ಲವಾಗಿ ಬೇಡ ಮುಂದಿನ ಜನ್ಮದಲ್ಲಿ ರಾಜಾ ಚಿತ್ರಭಾನುವಾಗಿ ಜನಿಸಿದ ಎಂಬುದು ಕಥೆ. ಮಹಾಭಾರತದಲ್ಲಿ ಬರುವ ಈ ಕಥೆಯನ್ನು ಮರಣಶಯ್ಯೆಯಲ್ಲಿ ಮಲಗಿದ್ದ ಭೀಷ್ಮ ಹೇಳಿದನೆಂಬುದು ಪ್ರತೀತಿ.

ಶಿವರಾತ್ರಿ ಆಚರಣೆ ಹಿನ್ನೆಲೆ:

೧. ಪ್ರತಿ ಸಂವತ್ಸರದಲ್ಲಿ.. ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು... ರಾತ್ರಿ ಸಮಯದಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಗೆ ಬರುತ್ತಾನೆ.. ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣ ಗೊಳ್ಳುತ್ತಾನೆ.. ಆ ಸಮಯದಲ್ಲಿ ಅಂದ್ರೆ ಶಿವರಾತ್ರಿ ರಾತ್ರಿ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಯೂ ಇದೆ.

೨. ಸ್ಕಂದ ಪುರಾಣ ದಲ್ಲಿ ಶಿವರಾತ್ರಿ ಹಬ್ಬದ ಬಗ್ಗೆ ಉಲ್ಲೇಖವಿದೆ.. ಶಿವರಾತ್ರಿಯು ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ... ಆ ದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ, ಮಂಗಳಕರ ನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು ಕಾಣಬಹುದು.. ಈ ಪರ್ವಕಾಲವು ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು ಶಿವನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆಯುತ್ತಾನೆ ಎಂಬ ಪ್ರತೀತಿ ಇದೆ.

೩. ತ್ರಯೋದಶಿಯು ಶಕ್ತಿರೂಪವಾದರೆ,, ಚತುರ್ದಶಿಯು ಶಿವರೂಪ. ತ್ರಯೋದಶಿಯು ಚತುರ್ದಶಿಯಲ್ಲಿ ಅಂತರ್ಗತ ವಾಗಿದ್ದರೆ ಅದು ಶಿವಶಕ್ತಿಯೋಗ ವಾಗುತ್ತದೆ. ಅದೆ ಶಿವರಾತ್ರಿಯ ಸಮಯವೆಂದು ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು ಪ್ರತೀತಿ ಇದೆ.

೪. 'ಶಿವ ಪುರಾಣ ' ದಲ್ಲಿ ಬರುವ ಬೇಡರ ಕಣ್ಣಪ್ಪನ ಕಥೆ....., ' ಸ್ಕಂದ ಪುರಾಣ 'ದ ಬೇಡ ಚಂದನನ ಕಥೆ..., ' ಗರುಡ ಮತ್ತು ಅಗ್ನಿ ಪುರಾಣ ' ಗಳ ಬೇಡ ಸುಂದರ ಸೇನನ ಕಥೆ... ಈ ಎಲ್ಲ ಕಥೆಗಳಲ್ಲೂ ಒಂದು ವಿಶೆಷವಾದ ಸಾಮ್ಯತೆಯನ್ನು ಕಾಣಬಹುದು.. ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ ಬಿಲ್ವ ಪತ್ರೆಗಳನ್ನು ಅರ್ಪಿಸಿದ್ದರಿಂದ ಅವರೆಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು. ಇದು ಶಿವರಾತ್ರಿ ಪೂಜೆಯ ಫಲದ ಮಹಿಮೆಯನ್ನು ಎತ್ತಿ ತೋರಿಸುತ್ತದೆ.

೫. ದೇವತೆಗಳು ಮತ್ತು ಅಸುರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡ್ತಿರಬೇಕಾದ್ರೆ ಮೊದ್ಲು ಮಡಿಕೆ ತುಂಬ ಹಾಲಾಹಲ ಉತ್ಪತ್ತಿಯಾಯಿತು.. ಆದ್ರೆ ದೇವತೆಗಳು... ಅಸುರರು ಯಾರೂ ಆ ಹಾಲಾಹಲವನ್ನು ಕುಡಿಯೋಕೆ ಮುಂದಗಲಿಲ್ಲ.. ಆ ಹಾಲಾಹಲ ಇಡೀ ನಭೋಮಂಡಲವನ್ನೇ ನಾಶಮಾಡಬಲ್ಲ ಸಾಮರ್ಥ್ಯವನ್ನು ಹೊಂದಿತ್ತು.. ಹೀಗಾಗಿ ಲೋಕ ಕಲ್ಯಾಣಕ್ಕಾಗಿ ಪರಶಿವನೇ ಆ ಹಾಲಾಹಲವನ್ನು ಕುಡಿದುಬಿಟ್ಟ.. ಅದೇ ಸಮಯಕ್ಕೆ ಪತ್ನಿ ಪಾರ್ವತಿ ದೇವಿ ಬಂದು ಆ ವಿಷ ಶಿವನ ಹೊಟ್ಟೆ ಸೇರದಂತೆ ಗಂಟಲಲ್ಲೇ ತಡೆ ಹಿಡಿದಳು... ವ್ಯಕ್ತಿಗಳು ನಿದ್ರಿಸುತ್ತಿದ್ದರೆ ವಿಷವು ಬೇಗನೆ ದೇಹದ ತುಂಬ ಹರಡುತ್ತದೆ.. ಹೀಗಾಗಿ ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಶಿವನನ್ನು ಎಚ್ಚರವಿರಿಸಿದರು.. ಹೀಗಾಗಿ ಈ ಪವಿತ್ರ ದಿನವನ್ನು ಶಿವರಾತ್ರಿ ಎಂದು ಆಚರಿಸಲಾಗುತ್ತದೆ.

ಮಹಾಶಿವರಾತ್ರಿಯ ಉಪವಾಸ ಮತ್ತು ಜಾಗರಣೆಯ ಮಹತ್ವ

೧. ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ.. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು.. ' ಸ್ಕಂದ ಪುರಾಣ 'ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ ನೀಡಿದ್ದಾನೆ... ' ಗರುಡ ಮತ್ತು ಅಗ್ನಿ ಪುರಾಣ ' ಗಳಲ್ಲಿ ಉಲ್ಲೇಖವಿರುವಂತೆ, ಬೇಡ ಸುಂದರ ಸೇನನಿಗೂ ಶಿವನು ಆಶೀರ್ವಾದಿಸಿದ್ದಾನೆ.. ಹೀಗಾಗಿ ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು.

೨. ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ.. ಭೂ-ಸಂಚಾರ ಮಾಡುತ್ತಾನೆ.. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ.. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.

೩. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.

೪. ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ.. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ.. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ.. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ.. ಅದಕ್ಕೆ “ಶಿವ ಭಕ್ತನಿಗೆ ನರಕಾ ಇಲ್ಲ” ಅನ್ನೋ ಮಾತಿದೆ.

೫. ಶಿವರಾತ್ರಿಯ ಮತ್ತೊಂದು ವಿಶೆಷವೆಂದರೆ, ಶಿವನು ಪಾರ್ವತಿ ಹಿಮವಂತನ ಮಗಳಾದ ಗಿರಿಜೆಯನ್ನು ಅಂದರೆ ಪಾರ್ವತಿ ದೇವಿಯನ್ನು ವಿವಹವಾಗಿದ್ದು ಶಿವರಾತ್ರಿಯ ದಿನವೇ.. ಪಾರ್ವತಿ ದೇವಿಯು ಶಿವರಾತ್ರಿಯ ಸಮಯದಲ್ಲಿ ಶಿವನನ್ನು ಪ್ರಾರ್ಥಿಸಿ..ಶಿವನ ಜಪ ಮಾಡಿ ಶಿವನನ್ನು ವಲಿಸಿಕೊಂಡು ವಿವಾಹಳಾದಳು... ಅಷ್ಟೇ ಅಲ್ಲ, ಶಿವನು ಸಮುದ್ರ ಮಂಥನದಿಂದ ಉದ್ಭವಿಸಿದ ವಿಷವನ್ನು ಸೇವಿಸಿ, ಜಗತ್ತನ್ನು ವಿನಾಶದಿಂದ ಪಾರು ಮಾಡಿದ್ದು ಕೂಡ ಇದೇ ಸಮಯದಲ್ಲಿ.. ಹೀಗೆ ಹಿಂದೂ ಪುರಾಣಗಳಲ್ಲಿ ಶಿವರಾತ್ರಿಗೆ ಮಹತ್ವದ ಹಿನ್ನೆಲೆ ಇದೆ..

ವೈಜ್ಞಾನಿಕವಾಗಿ ಶಿವರಾತ್ರಿಯ ಆಚರಣೆ

ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ಈ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಬಹು ಮುಖ್ಯ. ಈ ಸಮಯದಲ್ಲಿ ಛಳಿಗಾಲವು ಮುಗಿದು ಬೇಸಗೆಕಾಲವು ಪ್ರಾರಂಭಗೊಳ್ಳುವುದು. ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು. ಈ ವ್ಯತ್ಯಯದ ಸಮಯದಲ್ಲಿ ನಮ್ಮ ದೇಹದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ (ನೆಗಡಿ, ಕೆಮ್ಮು, ಶೀತ ಮತ್ತಿತರೆ) ಬರುವುದು. ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಬಿಲ್ವವನ್ನು ಮೂಸಿ ಎಸೆಯುವುದು ಸರಿಯಾದ ವಿಧಾನ. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.

ಪೂಜಿಸುವ ದೇಗುಲವನ್ನು ವಾಸ್ತುವಿನ ಪ್ರಕಾರ ಕಟ್ಟಿರುತ್ತಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆಯುವರು. ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತ ಮುತ್ತಲಿಗೆಲ್ಲಾ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ. ಈ ಹಿಂದೆ ನಾನು ಬರೆದ ಪೂಜಾವಿಧಾನದಂತೆ ಷೋಡಶಾಂಗ ಪೂಜೆ ಮಾಡುವುದು ವಾಡಿಕೆ.

ವೇದೋಕ್ತ ಪೂಜೆ ಮತ್ತು ಆಚರಣೆ

ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ. ಆದ್ದರಿಂದ ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ. ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ. ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು ತಿಳಿಸುತ್ತವೆ.

ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು/ದೇವರ ಬಗ್ಗೆ ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ/ತಿಂಡಿಯ ಕಡೆ ಗಮನ ಹೋಗುವುದಿಲ್ಲ.

ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು? ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.

ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ. ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು ವಾಡಿಕೆ. ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ ಶಕ್ತಿಯುತವಾಗುವುದು.

ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು. ಇದಕ್ಕೆಂದೇ ಮಹಾನ್ಯಾಸವೆಂಬ ಪ್ರಕಾರವಿದೆ. ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು. ಅಭಿಷೇಕ್ಕಾಗಿಯೇ ಪ್ರತ್ಯೇಕವಾದ ಪಾತ್ರೆ ಇರುವುದು. ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ ತೂಗು ಬಿಟ್ಟಿರುವರು. ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ ಬೀಳುವುದು. ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ ಪಠಿಸುತ್ತಾರೆ. ಹನ್ನೊಂದು ಬಾರಿ ನಮಕ ಚಮಕಗಳನ್ನು ಹನ್ನೊಂದು ಜನ ಋತ್ವಿಕರು ಪಠಣ ಮಾಡುವುದಕ್ಕೆ ಏಕಾದಶವಾರ ರುದ್ರಾಭಿಷೇಕ ಎಂದು ಕರೆಯುವರು. ಮೊದಲಿಗೆ ಚಮಕದ ಮೂರನೆಯ ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು. ಇದಕ್ಕೆ ಒಂದು ರುದ್ರವೆಂದು ಕರೆಯುವರು. ಬೆಳಗ್ಗೆ, ಸಂಜೆ ಮತ್ತು ರಾತ್ರೆ ಹೀಗೆ ೨೪ ಘಂಟೆಗಳು ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ. ಅಂದು ಊಟ ಮಾಡದೆ ಅಲ್ಪಾಹಾರ ಸೇವನೆ ಮಾಡುವರು.

ಜಾಗರಣೆ, ಹಬ್ಬದ ವಿಶೇಷ ಆಚರಣೆ:

ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.

ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ. ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ.

ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ "ಓಂ ನಮ: ಶಿವಾಯ", ಹರ ಹರ ಮಹಾದೇವ, ಶಂಭೋ ಶಂಕರ...ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ. ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.

ಮಾಹಿತಿ ಕೃಪೆ - ಅಂತರ್ಜಾಲ

11.2.18

*ಶಿಕ್ಷಕ ರೇವಣಸಿದ್ಧಪ್ಪ

*ಶಿಕ್ಷಕ ರೇವಣಸಿದ್ಧಪ್ಪ ‘ರೇವಣಸಿದ್ಧೇಶ್ವರ’ರಾದರು..!*

ಡಿ.ಬಿ.ನಾಗರಾಜ್

ವಿಜಯಪುರ: ಮಕ್ಕಳಿಗೆ ಅಕ್ಷರ ಹೇಳಿಕೊಟ್ಟ ಗುರುವಿಗೊಂದು ಗುಡಿಯ ಕಟ್ಟಿ, ತಮ್ಮೂರಿನ ಕಂದಮ್ಮಗಳಿಗೆಲ್ಲ ಅವರದೇ ಹೆಸರಿಟ್ಟು ಸಂಭ್ರಮಿಸಿದ ಊರು ಇಂಡಿ ತಾಲ್ಲೂಕಿನ ಅಥರ್ಗಾ.

ತಮ್ಮ ನಿಸ್ವಾರ್ಥ ಸೇವೆಯಿಂದ ಗ್ರಾಮದ ಆರಾಧ್ಯ ದೈವ ಎನಿಸಿದ ಆ ಶಿಕ್ಷಕರ ಹೆಸರು ರೇವಣಸಿದ್ಧಪ್ಪ. ಅವರು ನಿಧನರಾಗಿ 92 ವರ್ಷ ಗತಿಸಿದ್ದು, ಆಗಿನಿಂದ ‘ರೇವಣಸಿದ್ಧೇಶ್ವರ’ರಾಗಿ ನಿತ್ಯ ಎರಡು ಹೊತ್ತು ಪೂಜಿಸಿಕೊಳ್ಳುತ್ತಿದ್ದಾರೆ. ಬಹುತೇಕರ ಮನೆಯ ದೇವರ ಕೋಣೆಯಲ್ಲೂ ಸ್ಥಳ ಪಡೆದಿದ್ದಾರೆ. ಊರಿನಲ್ಲಿ ಮನೆಗೊಬ್ಬನಂತೆ ‘ರೇವಣಸಿದ್ಧಪ್ಪ’ ಹೆಸರಿನ ಮಗನಿದ್ದಾನೆ. ಕೆಲ ಮನೆಗಳಲ್ಲಿ ದೊಡ್ಡ ರೇವಣಸಿದ್ಧಪ್ಪ, ಸಣ್ಣ ರೇವಣಸಿದ್ಧಪ್ಪರೂ ಇದ್ದಾರೆ. ಅದಲ್ಲದೇ ಗುರುವಿನ ಹೆಸರಲ್ಲಿ ಜಾತ್ರೆಯೂ ನಡೆಯುವುದು ಇಲ್ಲಿನ ವಿಶೇಷ.PSGadyal teacher vijayapur

ಪರವೂರಿನಿಂದ ಬಂದು ತಮ್ಮೂರಿನ ಒಳಿತಿಗಾಗಿ ಹಗಲೂ ರಾತ್ರಿ ಶ್ರಮಿಸಿದ್ದ ಶಿಕ್ಷಕ ರೇವಣಸಿದ್ಧಪ್ಪ ಮೃತಪಟ್ಟಾಗ, ಅವರನ್ನು ತಮ್ಮೂರಲ್ಲೇ ಸಮಾಧಿ ಮಾಡಿ ದೇಗುಲ ಕಟ್ಟಿದವರು ಅಥರ್ಗಾ ಗ್ರಾಮಸ್ಥರು. ಅವರ ಪಂಚಲೋಹದ ವಿಗ್ರಹ ಪ್ರತಿಷ್ಠಾಪಿಸಿ ಪೂಜಿಸಿದರು. ಗ್ರಾಮದಲ್ಲಿ ‘ರೇವಣಸಿದ್ಧೇಶ್ವರ ವೃತ್ತ’ವನ್ನೂ ನಿರ್ಮಿಸಿ, ತಮ್ಮ ಅಭಿಮಾನ ಮೆರೆದಿದ್ದಾರೆ.

ಬಹುತೇಕರ ದಿನಚರಿ ಆರಂಭವಾಗುವುದು ಈ ದೇಗುಲಕ್ಕೆ ತೆರಳಿ ದರ್ಶನ ಪಡೆದ ಬಳಿಕವೇ. ಪ್ರತಿ ವರ್ಷ ಶಿಕ್ಷಕ ದಿನಾಚರಣೆಯಂದು ವಿವಿಧೆಡೆ ವಿಶೇಷ ಸಮಾರಂಭ ಆಯೋಜಿಸಿ, ರೇವಣಸಿದ್ಧಪ್ಪ ಅವರ ಸಾರ್ಥಕ ಬದುಕನ್ನು ಸ್ಮರಿಸುತ್ತಾರೆ.

ಯಾರಿವರು ರೇವಣಸಿದ್ಧಪ್ಪ ?
ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣದ ಲಕ್ಷ್ಮೀಬಾಯಿ– ಶಿವಪ್ಪ ಅವರಸಂಗ ದಂಪತಿಯ ಮೂರನೇ ಮಗನಾಗಿ 1889ರಲ್ಲಿ ರೇವಣಸಿದ್ಧಪ್ಪ ಜನಿಸಿದರು. ಮುಲ್ಕಿ ಶಿಕ್ಷಣ ಪಡೆದ ಬಳಿಕ ಉಕ್ಕಲಿಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದರು. ಒಂದೂವರೆ ವರ್ಷದ ಬಳಿಕ ಅಥರ್ಗಾಕ್ಕೆ ಬಂದು ಇಲ್ಲಿಯೇ ನೆಲೆ ನಿಂತವರು.

‘ಪರಿಸರ ಸಂರಕ್ಷಣೆ, ಸ್ವಚ್ಛತೆಯ ಪಾಠ ಹೇಳಿಕೊಟ್ಟವರು. ಸ್ವಾತಂತ್ರ್ಯ ಸಂಗ್ರಾಮದ ಕಿಡಿ ಹಚ್ಚಿದವರು. ಸಮಾಜದ ಎಲ್ಲ ಸ್ತರಗಳ ಜನರಿಗೂ ಅಕ್ಷರ ಕಲಿಸಿದವರು. ಮನೆ ಮನೆ ಬಾಗಿಲು ತಟ್ಟಿ ಮಕ್ಕಳನ್ನು ಶಾಲೆಗೆ ಕರೆ ತಂದವರು. ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡಿದವರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅಂದಿನ ಕಾಲದಲ್ಲೇ ಕಂದೀಲಿನ ಬೆಳಕಿನಲ್ಲಿ ಮನೆ ಪಾಠ ಹೇಳಿಕೊಟ್ಟ ಪುಣ್ಯಾತ್ಮ’ ಎಂದು ರೇವಣಸಿದ್ಧಪ್ಪ ಮಾಸ್ತರರ ಪರಿಚಯ ಮುಂದಿಡುತ್ತಾರೆ ಗ್ರಾಮದ ಶಿಕ್ಷಕ ಹನುಮಂತ ಬಂಟನೂರ.

ತಮ್ಮ ಸಂಬಳವನ್ನೂ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಭರಿಸುತ್ತಿದ್ದ, ಶರಣರ ತತ್ವ ಪಾಲಕರಾಗಿದ್ದ ಅವರು ಊರವರ ಮನದಲ್ಲಿ ಗುರುವಿನ ಸ್ಥಾನ ಪಡೆದಿದ್ದರು ಎಂದೂ ಅವರು ಸ್ಮರಿಸುತ್ತಾರೆ.

ಜಾತ್ರೆ: 1925ರ ಶಿವರಾತ್ರಿ ಹಬ್ಬದಂದು ರೇವಣಸಿದ್ಧಪ್ಪ ಮಾಸ್ತರ್‌ ತಮ್ಮ 36ರ ಹರೆಯದಲ್ಲೇ ನಿಧನರಾದರು. ಮರು ವರ್ಷದಿಂದ ಶಿವರಾತ್ರಿ ಸಂದರ್ಭದಲ್ಲಿ ಅವರ ಹೆಸರಿನಲ್ಲಿ ಐದು ದಿನದ ಬೃಹತ್ ಜಾತ್ರೆಯೂ ಇಲ್ಲಿ ನಡೆಯುತ್ತಿದೆ.

10.2.18

ಕನ್ನಡದ ಕಹಳೆ ಮೊಳಗಿಸಿದ ಶಿಕ್ಷಕ

 ಆಂಧ್ರದ ಗಡಿಭಾಗದಲ್ಲಿ ಆಳಿವಿನಂಚಿನಲ್ಲಿದ್ದ ಶಾಲೆಯಲ್ಲಿ ಕನ್ನಡದ ಕಹಳೆ ಮೊಳಗಿಸಿದ ಶಿಕ್ಷಕ: ನಾಗೇಶ್.ಟಿ.ಕೆ.*

ನಾನಾ ಕಾರಣಗಳನ್ನು ನೀಡಿ ಸ್ವತಃ ಸರ್ಕಾರವೇ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಾ ಸಾಗುತ್ತಿದೆ. ಆದರೆ ಆಂಧ್ರದ ಗಡಿಭಾಗದಲ್ಲಿ ತೆಲುಗು ಭಾಷೆಯ ಪ್ರಭಾವದಿಂದ ಮುಚ್ಚಿಹೋಗಬೇಕಿದ್ದ ಸರ್ಕಾರಿ ಶಾಲೆ ಮಾದರಿ ಶಾಲೆಯಾಗಿ ತಲೆ ಎತ್ತಿ ನಿಂತಿದೆ.

ಸಹೃದಯಿ ದಾನಿಗಳ ಸಹಕಾರ, ಸ್ನೇಹಿತರ ಸಾಥ್ ನಿಂದ ಸರ್ಕಾರಿ ಶಾಲೆಯನ್ನು ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯವಂತೆ ಮಾಡಿದ್ದಾರೆ ಈ ಶಾಲೆಯ ಶಿಕ್ಷಕ. ಇಡೀ ಗ್ರಾಮದಲ್ಲಿ ಕನ್ನಡದ ಕಂಪು ಸೂಸುವ ಮೂಲಕ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕಾಯಕ ಮಾಡಿದ ಅಪರೂಪದ ಶಿಕ್ಷಕ ಇವರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಂಜಯ್ಯಗಾರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಟಿಕೆ ನಾಗೇಶ್ ಅವರು ಈ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಹಾಸನದವರಾದ ನಾಗೇಶ್ ಕಳೆದ 11 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕದಲ್ಲೇ ಈ ಗ್ರಾಮವಿದ್ದರೂ ಇಲ್ಲಿನ ಜನರ ಆಡು ಭಾಷೆ ತೆಲುಗು. ಇಲ್ಲಿನ ಜನ ತಾವು ಆಂಧ್ರದವರೇ ಎನ್ನುವಷ್ಟು ಭಾವನೆಗಳಲ್ಲಿ ಬದುಕುತ್ತಿದ್ದರು. ಅಲ್ಲದೇ ಶಾಲೆಗೆ ಮೊದಲ ಬಾರಿ ಶಿಕ್ಷಕರಾಗಿ ನಾಗೇಶ್ ಬಂದಾಗ ಇಲ್ಲಿನ ಬಹುತೇಕ ಮಕ್ಕಳಿಗೆ ಕನ್ನಡ ಮಾತನಾಡಲು ಕೂಡ ಬರುತ್ತಿರಲಿಲ್ಲ. ಅಲ್ಲದೇ ಕನಿಷ್ಠ ಇಲ್ಲಿನ ಜನ ತಮ್ಮ ಮಕ್ಕಳನ್ನ ಶಾಲೆಗೆ ಕೂಡ ಕಳುಹಿಸುತ್ತಿರಲಿಲ್ಲ.

ಆದರೆ ಮನಸ್ಸಿದ್ದರೆ ಮಾರ್ಗ ಎಂಬಂತೆ ಶಿಕ್ಷಕ ನಾಗೇಶ್ ಗ್ರಾಮದಲ್ಲೇ ವಾಸ ಮಾಡುವ ಮೂಲಕ ಗ್ರಾಮದ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನ ತಿಳಿಸಿದ್ದಾರೆ. ಪೋಷಕರ ಮನವೊಲಿಸಿ ಎಲ್ಲಾ ಮಕ್ಕಳನ್ನು ಶಾಲೆಗೆ ಕರೆತಂದು ಉತ್ತಮ ಶಿಕ್ಷಣ ನೀಡುವ ಕಾಯಕಕ್ಕೆ ಮುಂದಾಗಿದ್ದಾರೆ. ಪ್ರತಿ ವರ್ಷ ಶಾಲೆಯಲ್ಲಿ ಕನ್ನಡದ ನುಡಿ ಹಬ್ಬ ಆಚರಿಸುವ ಮೂಲಕ ಗ್ರಾಮಸ್ಥರಲ್ಲಿ ಕನ್ನಡದ ಕಂಪು ಸೂಸುವ ಕೆಲಸ ಮಾಡಿದ್ದಾರೆ. ತೆಲುಗು ಭಾಷೆಯ ಪ್ರಭಾವದಿಂದ ಕನ್ನಡವೇ ಬಾರದ ಮಕ್ಕಳ ಬಾಯಲ್ಲಿ ಕನ್ನಡದ ಕಿಚ್ಚು ಹಚ್ಚಿದ್ದಾರೆ. ಹತ್ತು ವರ್ಷಗಳಿಂದ ಒಂದಲ್ಲ ಒಂದು ರೀತಿ ಭಿನ್ನ ವಿಭಿನ್ನ ಪ್ರಯತ್ನಗಳಿಂದ ಇಡೀ ಶಾಲೆಯನ್ನ ಮಾದರಿ ಶಾಲೆಯನ್ನಾಗಿ ಮಾಡಿದ್ದಾರೆ.

ಮೂಲಭೂತ ಸೌಲಭ್ಯಗಳಿಲ್ಲದೆ ಸೊರಗಿ ಹೋಗಿದ್ದ ಶಾಲೆಗೆ ಸಹೃದಯಿ ದಾನಿಗಳು ಹಾಗೂ ಸ್ನೇಹಿತರ ಬಳಗದಿಂದ ಸಕಲ ಸೌಲಭ್ಯಗಳನ್ನ ಪಡೆದುಕೊಳ್ಳುವಲ್ಲಿ ಶಿಕ್ಷಕ ನಾಗೇಶ್ ಯಶಸ್ವಿಯಾಗಿದ್ದಾರೆ. ದಾನಿಗಳ ನೆರವಿನಿಂದ ಪಡೆದ ಪ್ರೊಜೆಕ್ಟರ್ ಮೂಲಕ ಈ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕೂಡ ನಡೆಸುತ್ತಿದ್ದಾರೆ. ಕಂಪ್ಯೂಟರ್ ಕಾಣದ ಮಕ್ಕಳ ಕೈ ಹಿಡಿದು ಕಂಪ್ಯೂಟರ್ ಶಿಕ್ಷಣ ನೀಡುತ್ತಿದ್ದಾರೆ. ಕನಿಷ್ಠ ಕನ್ನಡವೂ ಬಾರದ ಮಕ್ಕಳ ಬಾಯಲ್ಲಿ ಇಂದು ಪಟಪಟನೆ ಇಂಗ್ಲಿಷ್ ಮಾತನಾಡುವಷ್ಟರ ಮಟ್ಟಿಗೆ ಬೆಳೆಸಿದ್ದಾರೆ.

ಈ ಹಿಂದೆ ವಿದ್ಯಾರ್ಥಿಗಳೇ ಇಲ್ಲದ ಈ ಶಾಲೆಯಲ್ಲಿ ಇಂದು 1 ರಿಂದ 7ನೇ ತರಗತಿಯವರೆಗೂ 114 ವಿದ್ಯಾರ್ಥಿಗಳು ವ್ಯಾಸಂಗ ಮಾಡುವಂತೆ ಮಾಡಿದ್ದಾರೆ. ಪ್ರತಿ ವರ್ಷ ತಮ್ಮ ಫೇಸ್‍ಬುಕ್ ಗೆಳೆಯರ ಬಳಗದಿಂದ ನೋಟ್ ಪುಸ್ತಕ, ಪೆನ್, ಪೆನ್ಸಿಲ್ ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ಸಹಾಯ ಪಡೆಯುವ ಮೂಲಕ ವರ್ಷ ಇಡೀ ಉಚಿತವಾಗಿ ನೀಡುತ್ತಾರೆ. ಬಿಸಿಯೂಟ ಆಡುಗೆಗೆ ಬೇಕಾದ ಗ್ರೈಂಡರ್, ತಟ್ಟೆ, ಲೋಟ, ವಾಟರ್ ಫಿಲ್ಟರ್ ಸೇರಿದಂತೆ ಶಾಲೆಗೆ ಬೇಕಾದ ಸಕಲ ಸೌಲಭ್ಯಗಳನ್ನ ದಾನ ಪಡೆದು ಶಾಲೆಯ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ.

ವಿಶೇಷವಾಗಿ ಶಿಕ್ಷಕರ ಕೊರತೆ ಕಾರಣ ಖಾಸಗಿ ಶಾಲೆಯ ಶಿಕ್ಷಕರಾಗಿದ್ದ ತಮ್ಮ ಪತ್ನಿಯನ್ನು ಖಾಸಗಿ ಶಾಲೆ ಬಿಡಿಸಿ, ತಮ್ಮ ಶಾಲೆಯಲ್ಲಿ ಉಚಿತವಾಗಿ ಪಾಠ ಮಾಡಿಸುತ್ತಿದ್ದಾರೆ. ಪತಿಯ ಸಮಾಜಮುಖಿ ಕಾರ್ಯಕ್ಕೆ ಪತ್ನಿ ಶೈಲಜಾ ಕೂಡ ಸಾಥ್ ಕೊಟ್ಟಿದ್ದಾರೆ.

ಆಂಧ್ರದ ಗಡಿಭಾಗ, ತೆಲುಗು ಭಾಷೆಯ ಪ್ರಭಾವ, ಪೋಷಕರ ಇಂಗ್ಲಿಷ್ ವ್ಯಾಮೋಹ ಸೇರಿದಂತೆ ಹಲವು ಕಾರಣಗಳಿಂದ ನಂಜಯ್ಯಗಾರಿಹಳ್ಳಿಯ ಸುತ್ತಮುತ್ತಲ ಐದು ಸರ್ಕಾರಿ ಶಾಲೆಗಳಿಗೆ ಸರ್ಕಾರ ಈಗಾಗಲೇ ಬೀಗ ಜಡಿದಿದೆ.

ಆದರೆ ಶಿಕ್ಷಕ ನಾಗೇಶ್ ಅವರ ಸ್ವಂತ ಪರಿಶ್ರಮದಿಂದ ನಂಜಯ್ಯಗಾರಹಳ್ಳಿಯ ಈಗ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ಇದಲ್ಲದೆ 4 ವರ್ಷದ ತಮ್ಮ ಮಗನನ್ನ ಕೂಡ ತಮ್ಮದೇ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಸಲು ಮುಂದಾಗಿದ್ದಾರೆ ಈ ದಂಪತಿ.ಈ ದಂಪತಿಗೆ ನಮ್ಮದೊಂದು ಸಲಾಂ.

ಕೃಪೆ: ಪಬ್ಲಿಕ್ ಟಿವಿ.                                                      

ಶಾಲಾ ಉಪಯುಕ್ತ

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

Gjhn



MDM - ಮದ್ಯಾಹ್ನ ಬಿಸಿಯೂಟ ಯೋಜನೆ