ಮಗ್ಗಿ

ಮತ್ತೊಮ್ಮೆ ಭೇಟಿ ನೀಡಲು vktworld ಎಂದು search ಮಾಡಿ ~~~ vktworld

22.3.18

04 ವಚನ ಬ್ರಹ್ಮ ದೇವರ ದಾಸಿಮಯ್ಯನವರು

✍🌹 *ವಚನ ಬ್ರಹ್ಮ ದೇವರ ದಾಸಿಮಯ್ಯನವರು*


🌹🌹 *ಇಂದು ದೇವರ ದಾಸಿಮಯ್ಯ ಜಯಂತಿ*

_ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ. ಸುಳಿದು ಬೀಸುವ ವಾಯು ನಿಮ್ಮ ದಾನ. ನಿಮ್ಮ ದಾನವನುಂಡು ಅನ್ಯರ ಹೊಗಳುವ ಕುನ್ನಿಗಳನೇನೆಂಬೆ, ​ರಾಮನಾಥ._

👉 *ದೇವಾಂಗ ಜನಾಂಗದಲ್ಲಿ ಮೊಟ್ಟ ಮೊದಲು ಪ್ರಸಿದ್ಧವಾದವರು ದೇವರ ದಾಸಿಮಯ್ಯ.*

*ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು ರಾಮನಾಥ ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ.*

*ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.*

*ಇವರು ದೇವಾಂಗ/ ದೇವ ಬ್ರಾಹ್ಮಣ ದವರಿಗೆ ಕುಲಗುರುವಾಗಿರುತ್ತಾರೆ, ಇದನ್ನು ಈಗಿನ ಎಲ್ಲಾ ದೇವಾಂಗ ಜನಾಂಗದವರು ತಮ್ಮ ಪೀಳಿಗೆಗಳಿಗೆ ತಿಳಿಸಿ ಹೇಳಬೇಕು. ಅವರ ಬಗ್ಗೆ ತಿಳಿಸಕೊಡಬೇಕು.*

*ಅನೇಕ ಪವಾಡಗಳನ್ನು ಮಾಡಿದ ಇವರು, ಪವಾಡವೊಂದೆ ಅಲ್ಲ, ಮನುಷ್ಯನ/ನಮ್ಮ ಜೀವನದಲ್ಲಿ ದೇವರ ಸ್ಮರಣೆಯೂ ಹಾಗೂ ಜೀವನದಲ್ಲಿ ಸಾಧನೆಯೂ ಅಷ್ಟೇ ಪ್ರಮುಖವೆಂದು ನಂಬಿ ಭಕ್ತಿ ಸಾಧನೆಯಲ್ಲಿಯೇ ಬಹಳ ಹೆಸರನ್ನು ಪಡೆದವರು, ಒಂದು ರೀತಿಯಲ್ಲಿ ಎಲ್ಲರಿಗೂ ಶಿಕ್ಷಕರಾಗಿದ್ದರು. ಅನೇಕ ಮಹಾನ್ ವ್ಯಕ್ತಿಗಳನ್ನು ತಮ್ಮ ಭಕ್ತಿಯ ವಾದದಿಂದ ಸೋಲಿಸಿ, ಆಗಿನ ಕಾಲದಲ್ಲಿಯೇ ಪ್ರಸಿದ್ಧಿ ಪಡೆದು ಹೆಸರಾದವರು. ಶಿವನ ದರ್ಶನದಿಂದ ವರವನ್ನು ಪಡೆದ ಇವರು ಸರಳ, ಸಜ್ಜನಿಕೆಯ ಸ್ವಭಾವದವರಾಗಿದ್ದು, ಎಲ್ಲರಲ್ಲಿಯೂ ಭಕ್ತಿಯ ಸಿಂಚನವನ್ನು ಸಿಂಪಡಿಸಿದರು. ಇವರ ಪತ್ನಿ ದುಗ್ಗಳೆಯೂ ಸಹ ಸತಿ ಶಿರೋಮಣಿಯಾಗಿ ಮಹಾ ಪ್ರತಿವ್ರತೆಯಾಗಿದ್ದು ತಮ್ಮ ಗಂಡನ ಜೊತೆಯಲ್ಲಿ ಆಕೆ ಕೂಡ ಭಕ್ತಿಯಲ್ಲಿ,ಸಂಸಾರದಲ್ಲಿ ಹೆಸರು ಮಾಡಿದವರು. ಇವರುಗಳ ಬಗ್ಗೆ ಹೆಚ್ಚಿಗೆ ಎಲ್ಲೂ ಪ್ರಚಾರಗಳಾಗಲಿ, ಪುಸ್ತಕಗಳಾಗಲಿ ಜಾಸ್ತಿ ಪ್ರಚಲಿತದಲ್ಲಿ ಇಲ್ಲದಿರುವುದೇ ನಮ್ಮ ದುರಾದೃಷ್ಠ. ಆಗಾಗಿ ಹೆಚ್ಚು ಬೆಳಕಿಗೆ ಬರಲಿಲ್ಲ, ಇವರ ಬಗ್ಗೆ ತಿಳಿದುಕೊಳ್ಳಲು. ಮುಂದಾದರು ಇಂತಹ ಮಹಾಸಾಧ್ವಿಗಳು ನಮ್ಮ ನಾಡಲ್ಲಿ ಇದ್ದರು ಎನ್ನುವುದಕ್ಕೆ ಕುರುಹುಗಳನ್ನು ಉಳಿಸುವುದು ನಮ್ಮ ಕರ್ತವ್ಯವಾಗಿದೆ. ಇತಿಹಾಸದಲ್ಲಿ,ಪುರಾಣದಲ್ಲಿ ಇವರ ಬಗ್ಗೆ ತಿಳಿಯಲು ಎಲ್ಲರು ಶ್ರಮಿಸಬೇಕು. ದೇವರ ದಾಸಿಮಯ್ಯನವರು ಶತ-ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಪ್ರಸಿದ್ಧ ಶರಣರಿಗಿಂತಲೂ, ಮೊದಲು ಬಂದಂತಹ ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರೇ ವಚನಗಳಿಗೆ ತಳಹದಿ ನೀಡಿದವರು. ವಚನಗಳನ್ನು ತಮ್ಮ ಸಾಮಾಜಿಕ ಜೀವನದಲ್ಲಿಯೇ ಕಂಡುಕೊಂಡು ರಚಿಸಿದರು. ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು.*

👉 *ದೇವರ ದಾಸಿಮಯ್ಯನವರು ಶತ-ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಪ್ರಸಿದ್ಧ ಶರಣರಿಗಿಂತಲೂ, ಅಂದರೆ 10ನೇ ಶತಮಾನದಲ್ಲಿ ಬರುವ ಇವರು ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರೇ ವಚನಗಳಿಗೆ ತಳಹದಿ ನೀಡಿದವರು. ಜೇಡರ/ದೇವರ ದಾಸಿಮಯ್ಯ ಓರ್ವ ಆದ್ಯ ವಚನಗಳನ್ನು ತಮ್ಮ ಸಾಮಾಜಿಕ ಜೀವನದಲ್ಲಿಯೇ ಕಂಡುಕೊಂಡು ರಚಿಸಿದರು. ದೇವರ ದಾಸಿಮಯ್ಯನವರ ವಚನಗಳನ್ನು ರಚಿಸಿರುವವರಲ್ಲಿ ಮೊದಲಿಗರಾದರೂ ಸಹ ಅವರ ವಚನಗಳು ಯಾರಿಗೂ ತಿಳಿದಿಲ್ಲ. ನಂತರ ಬಂದ ಎಲ್ಲಾ ಶರಣರೂ,ಸಾಧು ಸಂತರೂ ರಚಿಸಿದ ವಚನಗಳು ಬಳಕೆಗೆ ಮತ್ತು ಬೆಳಕಿಗೂ ಬ೦ದವು. ದಾಸಿಮಯ್ಯನವರನ್ನು  ದೇವರದಾಸಿಮಯ್ಯ, ದೇವಲ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಎಂಬ ಹೆಸರಿನಿಂದ ಕರೆಯಲ್ಪಡುತ್ತಾರೆ. ಅವರು ರಾಮನಾಥ ಎಂಬ ದೇವರಲ್ಲಿ ಅಪಾರವಾದ ಭಕ್ತಿಯನ್ನು ಇಟ್ಟು ಕೊಂಡಿದ್ದರು. "ರಾಮನಾಥ" ಎನ್ನುವ ಹೆಸರಲ್ಲಿಯೇ ವಚನಗಳನ್ನು ರಚಿಸಿದರು.*

*ಇವರ ಪತ್ನಿ ದುಗ್ಗಳೆ. ಇಬ್ಬರದೂ ಅನ್ಯೋನ್ಯವಾದ ದಾಂಪತ್ಯ ಜೀವನ. ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು. ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು "ರಾಮನಾಥ" ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ. ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.ಇನ್ನು ದೇವಾಂಗ ದಾಸಿಮಯ್ಯರ ಕೃತಿ ಪರಿಚಯಕ್ಕೆ ಬಂದರೆ, ರಾಮನಾಥ ಎಂಬ ನಾಮಾಂಕಿತದಿಂದ ಅನೇಕ ವಚನಗಳನ್ನು ರಚಿಸಿದ್ದಾರೆ. ದೇವಲರು, ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಶರಣರಿಗಿಂತಲೂ (ಬಸವಣ್ಣ ಮತ್ತು ಅಕ್ಕಮಹಾದೇವಿಯವರಿಗೂ) ಮುಂಚಿತವಾಗಿದ್ದಂತಹ ಮೊಟ್ಟ ಮೊದಲ ವಚನಕಾರರು.*

*ದಾಸಿಮಯ್ಯನವರ ವಚನಗಳು ಅರ್ಥೈಸಿಕೊಳ್ಳಲು ಬಹಳ ಸರಳವಾಗಿದ್ದು, ಸಮಾಜಕ್ಕೆ ವಿಶೇಷವಾದ ಧಾರ್ಮಿಕ ಪ್ರಜ್ಞೆಯ ಸ್ಪೂರ್ತಿಯ ಚಿಲುಮೆಯಾಗಿವೆ. ಆದರೆ ವಿಷಾದದ ಸಂಗತಿಯೆಂದರೆ ಇವರ ಬಗ್ಗೆ ಹೆಚ್ಚಿಗೆ ಪ್ರಚಾರಗಳಾಗಲಿಲ್ಲ. ತಡವಾಗಿಯಾದರೂ ಈಗೀಗ ಕೆಲವು ಬುದ್ಧಿಜೀವಿಗಳು ದೇವಲರ ವಚನಗಳನ್ನು ಹೊರತರುತ್ತಿದ್ದಾರೆ. ಅವರ ಉಪಲಬ್ಧ ವಚನಗಳಲ್ಲಿ ಉತ್ಕಟವಾದ ವೀರಶೈವ ನಿಷ್ಠೆ, ನಿಷ್ಠುರವಾದ ಸ್ಪಷ್ಟ ವಾಕ್ಯತೆ, ಮಾರ್ಮಿಕವಾದ ಸಂಕ್ಷಿಪ್ತ ಶೈಲಿ, ಔಚಿತ್ಯಪೂರ್ಣವಾದ ದೃಷ್ಟಾಂತಗಳ ಸಂಪತ್ತಿಯ ಗುಣಗಳು ಎದ್ದು ಕಾಣುತ್ತವೆ. ದೇವರ ದಾಸಿಮಯ್ಯನವರು ವಿಶ್ವದ ಪ್ರಥಮ ವಚನಕಾರ. ಅವರು ರಾಮನಾಥ ಎಂಬ ಹೆಸರಲ್ಲಿಯೇ 176 ವಚನಗಳನ್ನು ರಚಿಸಿದ್ದಾರೆ.*

✍ *ದೇವಾಂಗ ಕುಲಗುರು ಪ್ರಥಮ ವಚನಕಾರ ದೇವರ ದಾಸಿಮಯ್ಯನವರ ವಚನಗಳು​*


1 *ಮರನೊಳಗಣ ಮಂದಾಗ್ನಿಯ ಉರಿಯದಂತಿರಿಸಿದೆ ನೊರೆವಾಲೊಳಗೆ ತುಪ್ಪವ ಕಂಪಿಲ್ಲದಂತಿರಿಸಿದೆ ಶರೀರದೊಳಗಾತ್ಮನನಾರು ಕಾಣದಂತಿರಿಸಿದೆ ನೀ ಬೆರಸುವ ಭೇದಕ್ಕೆ ಬೆರಗಾದೆನಯ್ಯ!ರಾಮನಾಥ.​*

2​​ *ಎತ್ತು ನಿಮ್ಮ ದಾನ; ಬಿತ್ತು ನಿಮ್ಮ ದಾನ. ಸುತ್ತಿ ಹರಿವ ಸಾಗರವೆಲ್ಲ ನಿಮ್ಮ ದಾನ. ನಿಮ್ಮ ದಾನವನುಂಡು ಅನ್ಯರ ಹೊಗಳುವ ಕುನ್ನಿಗಳನೇನೆಂಬೆ ಹೇಳ? ರಾಮನಾಥ.​​*

ಕಾಮೆಂಟ್‌ಗಳಿಲ್ಲ:

ಪ್ರಚಲಿತ ಪೋಸ್ಟ್‌ಗಳು