TEACHERS USEFUL

TEACHERS USEFUL

31.1.18

ಮಡಿವಾಳ ಮಾಚಿದೇವ

ಮಡಿವಾಳ ಮಾಚಿದೇವ

೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರ ಗಣ್ಯ ಬಳಗದಲ್ಲಿ ' ಮಡಿವಾಳ ಮಾಚಿದೇವ' ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು...

ಅವತಾರಿ ಪುರುಷ

ದಕ್ಷನನ್ನು ಸಂಹಾರ ಮಾಡಿ ಅತಿ ಉತ್ಸಾಹದಿಂದ ಶಿವನನ್ನು ಕಾಣಲು ವೀರಭದ್ರ ಶಿವನ ಸಭೆಯೊಳಗೆ ನಡೆದು ಬರುತ್ತಾನೆ. ಸಭೆಯಲ್ಲಿರುವ ಶಿವ ಭಕ್ತನಿಗೆ ಈತನ ಉತ್ತರೀಯ ಸೆರಗು ತಾಕುತ್ತದೆ. ವಿಜಯದ ಉದ್ವೇಗದಲ್ಲಿ ಆದ ಆ ತಪ್ಪಿಗೆ, ಭೂಲೋಕದಲ್ಲಿ ಮಡಿವಾಳನಾಗಿ ಜನಿಸಿ ಶರಣರ ವಸ್ತ್ರಗಳನ್ನು ಮಡಿ ಮಾಡುವ ಕಾಯಕ ಪೂರೈಸಿ ದೋಷ ಮುಕ್ತನಾಗಿ ಬರುವಂತೆ ಶಿವನ ಆದೇಶವಾಗುತ್ತದೆ. ಮಾಚಿದೇವರನ್ನು ವೀರ ಭದ್ರನ 'ದೇವಾಂಶ ಸಂಭೂತ ಅವತಾರ ಪುರುಷನೆಂದು' ನಿರೂಪಿಸುವುದು ಸಾಮಾನ್ಯ ರೂಢಿಯಾಗಿದೆ..

ಉದಯಿಸಿದ ಶರಣ ಕಿರಣ

ಬಿಜಾಪುರ ಜಿಲೆಯ ಸಿಂಧಗಿ ತಾಲೂಕಿನ 'ದೇವರ ಹಿಪ್ಪರಗಿಯಲ್ಲಿ' ಪರುವತಯ್ಯ -ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೆವರು ಜನಿಸಿದ್ದು ಕ್ರಿ .ಶ ೧೧೨೦-೧೧೩೦ ರ ನಡುವೆ.

ಕ್ರಾಂತಿಕಾರಿ ಗುರುವಿನ ಬೋಧನೆ

ಮಾಚಿದೇವರ ವ್ಯಾಸಂಗ- ಅಪಾರ ಜ್ಞಾನವನ್ನು ಅವಲೋಕಿಸಿದಾಗ ಉತ್ತಮ ಗುರುಗಳ ಬೋಧನೆ ಸಿಕ್ಕಿದ್ದು ಮನವರಿಕೆಯಾಗುತ್ತದೆ. ಶೂದ್ರರಿಗೆ ಶಿಕ್ಷಣ ನಿಷೇಧಿಸಲ್ಪಟ್ಟ ಕಾಲದಲ್ಲಿ ಅಕ್ಷರ ಜ್ಞಾನ -ಸಕಲ ಶಾಸ್ತ್ರಗಳನ್ನು ಹೇಳಿಕೊಟ್ಟ ಗುರು ' ಮಲ್ಲಿಕಾರ್ಜುನಯ್ಯ ಸ್ವಾಮಿಗಳು' ನಿಜಕ್ಕೂ ಒಬ್ಬ ಕ್ರಾಂತಿಕಾರಿ ಗುರುಗಳೆಂಬುದು ಸ್ಪುಷ್ಟವಾಗುತ್ತದೆ..

ಕಾಯಕ ಹಿಮಾಚಲ -ಮಾಚಯ್ಯ

ಮಾಚಯ್ಯ ಹುಟ್ಟಿನಿಂದಲೂ ಮಡಿವಾಳನಾಗಿದ್ದು, ಅಚಲ ಕಾಯಕ ನಿಷ್ಟನಾಗಿದ್ದ , ಹಿಮಾಲಯದಷ್ಟು ಧೃಢನಾಗಿದ್ದ , ತನ್ ಕಾಯಕವೇ ಭಕ್ತಿ, ಜೀವನದುಸಿರು ಎಂದು ನಂಬಿದ್ದ. ಜಂಗಮ ವೇಷದಲ್ಲಿ ಬಂದ ಶಿವನ ಬಟ್ಟೆಗಳನ್ನು ಆತನ ಷರತ್ತಿನ ಮೇರೆಗೆ ತನ್ನ ಹೆಂಡತಿ 'ಮಲ್ಲಿಗೆಮ್ಮಳ' ಎದೆ ಬಗೆದ ರಕ್ತದಲ್ಲಿ ಒಗೆದು ಒಣಗಿಸಿಕೊಂಡು ಬಂದ ಸಂದರ್ಭದ ದಂತ ಕಥೆ ಹಿಮಾಚಲಕ್ಕಿಂತಲೂ ಗಟ್ಟಿ ಕಾಯಕದ ಹಿರಿಯಾಳು ಮಾಚಿದೇವನಾಗಿದ್ದ ಎಂಬುದನ್ನು ತಿಳಿಸುತ್ತದೆ.

ಶಿವಶರಣರ ಹಾಗೂ ಕಾಯಕದಲ್ಲಿ ನಿಷ್ಠೆಯುಳ್ಳ ಮೈಲಿಗೆಯ ಬಟ್ಟೆಗಳನ್ನು 'ಮಡಿ' ಮಾಡಿ ಮುಟ್ಟಿಸುವ ಕಾಯಕ ಇವರಾದಗಿತ್ತು . ಮಡಿ ಬಟ್ಟೆ ಹೊತ್ತುಕೊಂಡು 'ವೀರ ಘಂಟೆ' ಬಾರಿಸುತ್ತ , ಭಕ್ತರಲ್ಲದವರು ತಮ್ಮನ್ನು ಮುಟ್ಟಬಾರದೆಂದು ನಿಯಮವನ್ನು ವಿಧಿಸಿಕೊಂಡಿದ್ದರು .

ಕುಚೇದ್ಯಕ್ಕೆ ಬಂದು ಮುಟ್ಟುವ ಭವಿಗಳನ್ನು ತುಂಡರಿಸಿ ಚೆಲ್ಲುತ್ತ ಮುನ್ನಡೆಯುವುದು ಮಾಚಿದೇವರ ನಡತೆಯಾಗಿತ್ತು. ಭವಿಯೋರ್ವ ಮಡಿ ಗಂಟು ಮುಟ್ಟಿ ಮೈಲಿಗೆಗೊಳಿಸಿದ್ದಕ್ಕೆ ಆತನ ಶಿರವನ್ನು ಆಕಾಶಕ್ಕೆ ತೂರಿದ ಘಟನೆಯಿಂದಾಗಿ, ಭಕ್ತಿ ಭಾವದಿಂದ ಮಡಿವಾಳಯ್ಯನನ್ನು ಜನರು ಗೌರವಿಸುತ್ತಿದ್ದರು. ಕಾಯಕ ಮಾಡದ -ಸೋಮಾರಿಗಳ-ಬಡವರನ್ನು ಶೋಷಿಸುವ -ಸೋಮಾರಿಗಳ- ದುರ್ಗುಣವುಳ್ಳವರ ಬಟ್ಟೆಗಳನ್ನೆಂದು ಆತ ಮುಟ್ಟುತ್ತಿರಲಿಲ್ಲ. 'ಅರಸುತನ ಮೇಲಲ್ಲ-ಅಗಸತನ ಕೀಳಲ್ಲ ' ಎಂಬುದನ್ನು ಜನಕ್ಕೆ ಸಾರಿದರು.

ಉನ್ನತ ವ್ಯಕ್ತಿತ್ವ

ಮಡಿವಾಳ ಮಾಚಿದೇವರ ಬಗ್ಗೆ ಹಲವು ಐತಿಹ್ಯಗಳು ಪ್ರಚಾರದಲಿ ಇವೆ. ಅವುಗಳಲ್ಲಿ ಕೆಲವು-

ಮೊದಲನೆಯ ಪ್ರಸಂಗ

ನುಲಿಯ ಚಂದಯ್ಯ ತನ್ನ ಕಾಯಕಕ್ಕೆ ಬೇಕಾದ ಹುಲ್ಲನ್ನು ಕೆರೆಯಲ್ಲಿ ಕುಯ್ಯುತ್ತಿದ್ದಾಗ ಧರಿಸಿದ 'ಇಷ್ಟ ಲಿಂಗ ' ಜಾರಿ ಕೆರೆಯೊಳಗೆ ಬೀಳುತ್ತದೆ. ಜಾರಿ ಬಿದ್ದ ಲಿಂಗ ಮತ್ತೇಕೆ? ಭಾವ ಲಿಂಗವೊಂದನ್ನೇ ಪೂಜಿಸಿದರೆ ಸಾಕೆಂದು ಹುಲ್ಲಿನ ಹೊರೆ ಹೊತ್ತು ಮನೆಗೆ ಮರಳುವನು. ಆಗ ಲಿಂಗದೇವ, ಮಾಚಿದೇವರ ಮೊರೆ ಹೋಗುತ್ತಾನೆ. ಮಾಚಿ ತಂದೆಗಳು 'ಸವಿ ಬೇಕು- ಹಣ್ಣು ಬೇಡವೆಂದರೆ' ಹೇಗೆ? ಗುರು ಪೂಜೆ ಅರಿದೊಡೆ ಲಿಂಗ ಪೂಜೆ ಬಿಡಲಾಗದೆಂದು ಚಂದ್ರಯ್ಯನವರ ತಪ್ಪನ್ನು ಅರಿವನ್ನುಂಟುಮಾಡುವರು - ಅದೊಂದು ದಿವ್ಯ ಪ್ರಸಂಗ.

ಎರಡನೆಯ ಪ್ರಸಂಗ

'ಬೇಡುವ ಭಕ್ತರಿಲ್ಲದೆ ಬಡವನಾದೆನೆಂಬ' ಬಸವಣ್ಣನವರು 'ಅಹಂ' ಭಾವನೆಯಿಂದ ಮಾತನಾಡಿರುತ್ತಾರೆ, ಆಗ ಮಾಚಿದೆವರು ಬಸವಣ್ಣನವರಿಗೆ ' ನೀವೊಬ್ಬರೇ ದಾನ ಮಾಡಲು ಹುಟ್ಟಿದ ದಾನಿಗಳು , ಉಳಿದೆಲ್ಲ ಭಕ್ತರು ಭಿಕಾರಿಗಳು, ದರಿದ್ರರೆ' ? ಎಂದು ಪ್ರಶ್ನಿಸುತ್ತಾರೆ. ಮುಂದೆ ಎನ್ನ ಮಹಾನುಭಾವರ ಬಡತನದಿರವ ನಿನಗೆ ತೋರುವೆನೆಂದು ಪಾದದಿಂದ ನೀರನ್ನು ಚಿಮ್ಮಲು ಆ ನೀರು ಹನಿಗಳೆಲ್ಲ ಮುತ್ತು ರತ್ನಗಳಾದವು. ಹೀಗೆ ವಿನಯ, ಇಂದ್ರಿಯ ನಿಗ್ರಹ, ನಿರಹಂಕಾರಗಳು ಭಕ್ತಿಯ ಕುರುಹು ಎಂದು ತಿಳಿಸುತ್ತ ಅಹಂಕಾರ ನಿರ್ಮೂಲನೆಗೊಳಿಸಿದ.

ಮೂರನೆಯ ಪ್ರಸಂಗ

ಮತ್ತೊಂದು ಸಂದರ್ಭದಲ್ಲಿ ಮೇದರ ಕೇತಯ್ಯ ಬಿದಿರು ಕಡಿಯುವಾಗ ಕೆಳಗೆ ಬೀಳುತ್ತಾನೆ. ಎದೆಗೆ ಬಿದಿರು ಮೊಳೆ ಚುಚ್ಚಿ ಕೇತಯ್ಯ ಶಿವ ಸನ್ನಿಧಿ ಸೇರುತ್ತಾನೆ. ಆಗ ಬಸವಣ್ಣ ಮಾಚಯ್ಯನನ್ನು ಕರೆಸುವನು, ಮಾಚಯ್ಯ ಬಂದು ಶಿವಶರಣರ ಪ್ರಾಣವೇ ತನ್ನ ಪ್ರಾಣವೆಂದು ನಂಬಿದ ಬಸವಣ್ಣ ಇನ್ನೂ ಜೀವಂತವಾಗಿದ್ದು ತನ್ನ ವಚನ ಪಾಲಿಸಿಲ್ಲವೆಂದ. ಇದನ್ನರಿತ ಬಸವಣ್ಣ ಪ್ರಾಣ ಬಿಡುವನು. ಆ ಪ್ರಾಣ ಕೇತಯ್ಯನನ್ನು ಹಿಂಬಾಲಿಸುತ್ತದೆ. ಬಸವಣ್ಣನ ನಿಷ್ಠೆ ಮೆಚ್ಚಿದ ಮಾಚಯ್ಯ, ಶಿವನನ್ನು ಕುರಿತು ಕೆರಳಿ ನುಡಿದು 'ಇಬ್ಬರ ' ಪ್ರಾಣಗಳನ್ನು ಶಿವನನ್ನು ಮರಳಿ ಪಡೆದನೆಂದು ತಿಳಿದು ಬರುತ್ತದೆ.

ನಡೆ-ನುಡಿಯಲ್ಲಿ ತಪ್ಪಿದ ವ್ಯಕ್ತಿ ಇಂಥವರೇ ಆಗಿರಲಿ ಆಚರಣೆ ಪ್ರಸಂಗ ಬಂದಾಗ 'ದೇವರನ್ನೂ' ಕೂಡಾ ಪ್ರಶ್ನಿಸುವ ಪ್ರವೃತ್ತಿ ಮಾಚಯ್ಯನದಾಗಿತ್ತು.

ಕಲ್ಯಾಣದ ಅನುಭವ ಮಂಟಪಿ

ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ , 'ಮಡಿ' ಹಾಸಿ ಸ್ವಾಗತಿಸುವ ಕೆಲಸ ಅವರದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲವೆಂಬುದು ಮಾಚಯ್ಯನ ಮಹಾ ಘನತೆಗೆ ಸಾಕ್ಷಿಯಾಗಿದೆ...

ಗಣಾಚಾರ ಸಂಪನ್ನ ವೀರ ಶರಣ - ಮಡಿವಾಳ ಮಾಚಿದೇವ

ಹಿಪ್ಪರಿಗೆಯಿಂದ ಕಲ್ಯಾಣಕ್ಕೆ ನಡೆದು ಬರುವಾಗ ಭೀಮರತಿ ಹೊಳೆ ಪ್ರವಾಹದಿಂದ ಕಟ್ಟಿರಲು, ಹರಿಗೋಲ ಹಂಗಿಲ್ಲದೆ ಶಿವನನ್ನು ನೆನೆಯಲು ನದಿ ಇಬ್ಬಾಗವಾಯ್ತು. ಆ ಮಾರ್ಗ ಮಧ್ಯದಿಂದ ಮಾಚಿ ತಂದೆ ನಡ ೆದು ಬರುತ್ತಾನೆ...

ಬಿಜ್ಜಳ ತನ್ನ ಬಟ್ಟೆಯನ್ನು ಮಡಿ ಮಾಡಿಸಿಕೊಡಲು ಬಸವಣ್ಣನಿಗೆ ದುಂಬಾಲು ಬಿದ್ದ. ಮಡಿವಾಳಯ್ಯ ಪರಮ ಭಕ್ತ , ಅವನನ್ನು ಅಗಸನೆಂದು ಭಾವಿಸದಿರಲು ಬಸವಣ್ಣ ತಿಳಿ ಹೇಳಿದ , ಅದನ್ನು ಲೆಕ್ಕಿಸದೆ ಮಾಸಿದ ಬಟ್ಟೆಗಳ ಗಂಟನ್ನು ಮಡಿ ಮಾಡಲು ಕಳಿಸಿದ. ಭವಿ ಬಿಜ್ಜಳನ ಮೈಲಿಗೆ ಬಟ್ಟೆಯ ಗಂಟನ್ನು ಕಂಡ ಮಡಿವಾಳಯ್ಯ ಕೋಪಗೊಂಡು ಸಿಟ್ಟಿನಿಂದ ನೋಡಲು ಆ ಕ್ಷಣದಲ್ಲಿ ಗಂಟು ಉರಿದು ಹೋಯ್ತು.

ಇದು ಮಡಿವಾಳಯ್ಯನ 'ಅಹಂಕಾರವೆಂದು' ಭಾವಿಸಿದ ಬಿಜ್ಜಳ ಅವರನ್ನು ಸೆರೆ ಹಿಡಿದು ತರಲು ಕುಂಟ -ಕುರುಡರ ಪಡೆಯೊಂದನ್ನು ಕಳುಹಿಸಿದ. ಮಡಿವಾಳಯ್ಯ ತನ್ನ ಶಕ್ತಿಯಿಂದ ಕುರುಡರಿಗೆ ಕಣ್ಣು ಕಾಣುವಂತೆ ಮತ್ತು ಕುಂಟರಿಗೆ ಕಾಲು ಬರುವಂತೆ ಮಾಡಿ ಅಂಗ ಸೌಷ್ಟ ವರನ್ನಾಗಿ ಮಾಡಿ ಕಳುಹಿಸಿದ. ಇದರಿಂದ ಉರಿದೆದ್ದು ಬಿಜ್ಜಳ 'ಮದೋನ್ಮತ್ತ' ಆನೆಯನ್ನ ಮಾಚಯ್ಯನ ಮೇಲೆ ಹರಿ ಹಾಯಲು ಬಿಟ್ಟ. ಸೈನಿಕರ ತುಕಡಿಯೊಂದನ್ನೂ ಕಳುಹಿಸಿದ. ಆನೆ ಹಾಗೂ ಅವರನ್ನೆಲ್ಲ ಸದೆ ಬಡಿದು ಜಯ ಶಾಲಿಯಾದ. (ಬಹುತೇಕ ಮಡಿವಾಳ ಬಂಧುಗಳ ಮನೆಯಲ್ಲಿ ಈ ಸನ್ನಿವೇಶದ ಫೋಟೋ ಇರುವುದು - ಆದ್ರೆ ಬಹು ಜನರಿಗೆ ಅದರ ಹಿನ್ನೆಲೆ ಗೊತ್ತಿಲ್ಲ..)ಕಾಲಾಂತರದಲ್ಲಿ ಬಿಜ್ಜಳನಿಗೆ ಮಾಚಿದೇವರ ಉನ್ನತ ಮಹಿಮೆ ತಿಳಿದು ತನ್ನ ತಪ್ಪಿನ ಅರಿವಾಗಿ ಬಿಜ್ಜಳ ಶರಣಾಗತನಾಗುವನು...

ಮುಂದೆ 'ಕಲ್ಯಾಣ ಕ್ರಾಂತಿ'ಯ ಸಂದರ್ಭದಲ್ಲಿ ಮಾಚಿದೆವರು ಹೊತ್ತ 'ಜವಾಬ್ಧಾರಿ' ಗುರುತರವಾದುದು. ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ದಂಡ ನಾಯಕತ್ವ ಜವಾಬ್ಧಾರಿ ಹೊತ್ತು , ಚನ್ನ ಬಸವಣ್ಣ , ಅಕ್ಕ ನಾಗಮ್ಮ, ಕಿನ್ನರಿ ಬೊಮ್ಮಣ್ಣ ಮೊದಲಾದವರೊಂದಿಗೆ ಮಾಚಿದೇವ ಶರಣ ಸಮೂಹದ 'ಭೀಮ ರಕ್ಷೆಯಾಗಿ' ನಿಂತರು. ಕಲಚೂರ್ಯ ರಾಯ ಮುರಾರಿಯನ್ನು ಎದುರಿಸಿ ಭೀಮ ನದಿಯನ್ನು ದಾಟಿ ತಲ್ಲೂರು, ಮುರಗೋಡ, ಕಡಕೋಳ,ತಡ ಕೋಡ, ಮೂಗ ಬಸವ, ಕಾದರವಳ್ಳಿಯಲ್ಲಿ ಅಲ್ಲಲ್ಲಿ ಕಾಳಗ ನಡೆಸಿದರು. ತಮ್ಮ ಧೈರ್ಯ, ಅನುಪಮ ಬಲದಿಂದ ಶರಣರನ್ನು, ವಚನ ಸಾಹಿತ್ಯವನ್ನು ರಕ್ಷಿಸಿ ಉಳಿವಿಗೆ ತಲುಪಿಸಿದ ಸಾಹಸಿ ಮಾಚಯ್ಯ.

ಸಮಸ್ತ ಶರಣರು ಉಳಿವೆಯಲ್ಲಿ ಲಿಂಗೈಕ್ಯರಾಗಲು ತಮ್ಮ ಮಹಾನ್ ಕರ್ತವ್ಯ ಪೂರೈಸಿ ಸಿಂದಗಿ ತಾಲೂಕಿನ ಕಲಿಪುರ (ಇಗಿನ ಕಲಕೇರಿ)ತನ್ನ ಗುರುವಾದ ವೀರಘಂಟೈರ ಜೊತೆಗೆ ಜೀವಂತ ಸಮಾದಿಯಾಗಿ ಗುರು ಶಿಷ್ಯರು ಐಕ್ಯರಾದರು....ಇಂದಿಗೂ ಪ್ರತಿ ವರ್ಷ ಹೊಸ್ತಿಲ ಹುಣ್ಣಿಮೆಯ ದಿನ ಮೂಲಾ ನಕ್ಷತ್ರದ ಸಮಯದಲ್ಲಿ ರಥೋತ್ಸವ ನಡೆಯುತ್ತದೆ. ಸುಮಾರು ಒಂದು ತಿಂಗಳ ಕಾಲ ಜಾತ್ರೆ ನಡೆಯುತ್ತದೆ. ವರ್ಷದಲ್ಲಿ ಎರಡು ಸಲ ಅಗ್ನಿ ಉತ್ಸವ ನಡೆಯತ್ತದೆ.ಕಲಕೇರಿಯಲ್ಲಿ ಮಡಿವಾಳ ಮಾಚಿ ದೇವರ ಕೊಂಡಾಡಲು ಅಕ್ಷರಗಳೇ ಸಾಲದು....

ಆಧಾರ

ಚಿತ್ರದುರ್ಗದ ಶ್ರೀ ಮಾಚಿದೇವ ಮಹಾ ಸಂಸ್ಥಾನ ಮಠದ ವತಿಯಿಂದ ಪ್ರಕಟಣೆಗೊಂಡ (ವರ್ಷ :೨೦೦೯)ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳು ಮತ್ತು ಡಾ: ಸಂಗಮೇಶ ಮ. ಕಲಹಾಳ ಅವರ ಸಂಪಾದನೆಯ "ಶ್ರೀ ಮಾಚಿದೇವ ಪ್ರಕಾಶ" (ಮಾಚಿದೇವರ ಜೀವನ ಸಂಕ್ಚಿಪ್ತ ಚರಿತ್ರೆ-ಚಿತ್ರ ಸಹಿತ ಹಾಗೂ ವಚನಗಳು ) ಎಂಬ ಪುಟ್ಟ ಪುಸ್ತಕದಲ್ಲಿನ ಪೂರ್ಣ ಅಂಶಗಳನ್ನು ನಮ್ಮ ಸರ್ವ ಸಹ ಮಡಿವಾಳ ಬಂಧುಗಳ ಜ್ಞಾನಾರ್ಜನೆಗಾಗಿ ಇಲ್ಲಿ ನೀಡಲಾಗಿದೆ..

ದ.ರಾ.ಬೇಂದ್ರೆ

ಧಾರವಾಡದ ರತ್ನ ದ.ರಾ.ಬೇಂದ್ರೆ

(ಕೃಪೆ: ಅಂತರ್ಜಾಲ)

 ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು [೧] ಸಾಕ್ಷ್ಯಚಿತ್ರ ತಯಾರಾಗಿತ್ತು.

ಜನನ ೧೮೯೬ ಜನವರಿ ೩೧
ಧಾರವಾಡ
ಮರಣ ೧೯೮೧ ಅಕ್ಟೋಬರ ೨೬
ಮುಂಬಯಿ
ಕಾವ್ಯನಾಮ ಅಂಬಿಕಾತನಯದತ್ತ
ವೃತ್ತಿ ವರಕವಿ, ಶಿಕ್ಷಕರು
ರಾಷ್ಟ್ರೀಯತೆ ಭಾರತೀಯ
ಕಾಲ (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ)
ಪ್ರಕಾರ/ಶೈಲಿ ಕಥೆ, ಕವನ, ವಿಮರ್ಷೆ, ಅನುವಾದ
ವಿಷಯ ಕರ್ನಾಟಕ, ಜನಪದ, ಶ್ರಾವಣ, ಜೀವನ, ಧಾರವಾಡ
ಸಾಹಿತ್ಯ ಚಳುವಳಿ ನವೋದಯ
ಪ್ರಭಾವಗಳು
ಖಲೀಲ್ ಗಿಬ್ರಾನ್, ಶ್ರೀ ಅರವಿಂದರು, ರವಿಂದ್ರನಾಥ ಟಾಗೂರ್
ಜೀವನ

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.[೨]

ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ರ ಅಕ್ಟೋಬರ್‌ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.
ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಇಡೀ ಜೀವನದ ತುಂಬಾ ನಿಸ್ವಾರ್ಥ ಸೇವೆಯನ್ನು ಗೈದ "ಧಾರವಾಡ ದ ಅಜ್ಜ" ಅವರ ಕೆಲವೊಂದು ಮಕ್ಕಳ ಕವಿತೆ, ಕತೆಗಳು ಮಕ್ಕಳ ಮನಸ್ಸನ್ನು ಪರಿವರ್ತಿಸುತ್ತವೆ.

ಸಾಹಿತ್ಯ


ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. "ಗರಿ", "ಕಾಮಕಸ್ತೂರಿ ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.

ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಏರಿದ್ದ ಸಮಯ. ಬೇಂದ್ರೆ ಯವರ “ಗರಿ” ಕವನ ಸಂಕಲನದಲ್ಲಿನ “ನರಬಲಿ” ಎಂಬ ಕವನವು ಆಗಿನ ಬ್ರಿಟಿಷ್ ಸರ್ಕಾರದ ಕೋಪಕ್ಕೆ ಕಾರಣವಾಯಿತು. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು. ಅವರು 1954ನೇ ಇಸವಿಯಲ್ಲಿ ತಯಾರಾದ ವಿಚಿತ್ರ ಪ್ರಪಂಚ ಎಂಬ ಚಿತ್ರಕ್ಕೆ ಸಾಹಿತ್ಯ ಹಾಗೂ ಗೀತೆಗಳನ್ನು ರಚಿಸಿದ್ದರೆಂದು ಆ ವರ್ಷದ ನವೆಂಬರ್ ತಿಂಗಳ ಚಂದಮಾಮ ಪತ್ರಿಕೆಯ ಜಾಹೀರಾತೊಂದು ತಿಳಿಸುತ್ತದೆ.
ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.
ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ.
ಗಣಿತದ ಲೆಕ್ಕಾಚಾರ ಮಾಡುತ್ತ ಬಾಳೆಹಣ್ಣಿನ ಗೊನೆಯಲ್ಲಿ, ಹಲಸಿನ ಹಣ್ಣಿನ ಮುಳ್ಳುಗಳಲ್ಲಿ, ಜೇನುಗೂಡಿನಲ್ಲಿ, ನಿಮ್ಮ ಕಿರುಬೆರಳಿನ ಅಂಚಿಗಿಂತ ಚಿಕ್ಕದಾಗಿರುವ ಹೂವುಗಳಲ್ಲಿ, ಎಲ್ಲೆಲ್ಲೂ ಲೆಕ್ಕಾಚಾರವಿದೆ ಅನ್ನುತ್ತಾ ಕೊನೆ ಕೊನೆಗೆ ದ.ರಾ.ಬೇಂದ್ರೆಯವರು ಗಣಿತದ ಲೆಕ್ಕಾಚಾರದಲ್ಲೇ ಮುಳುಗಿದ್ದರು. ಇವರನ್ನು ಕನ್ನಡದ "ಕನ್ನಡದ ಠಾಗೋರ್" ಎಂದು ಕರೆಯಲಾಗುತ್ತದೆ. "ನಮನ" ಬೇಂದ್ರೆಯವರಿಗೆ ಸಂಖ್ಯೆಗಳು ಹೊಸ ಲೋಕವೊಂದನ್ನು ತೆರೆದಿದದ್ವವು. ಬೇಂದ್ರೆ ಮನಸಿಗೆ 441 ಹಾಗೂ ಹೃದಯಕ್ಕೆ 881 ಎಂದು ಸಂಖ್ಯೆ ನೀಡಿದ್ದರು.
ಬೇಂದ್ರೆಯವರ ಸಾಹಿತ್ಯ

ಕವನ ಸಂಕಲನ

(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು

೧೯೨೨: ಕೃಷ್ಣಾಕುಮಾರಿ;
೧೯೩೨: ಗರಿ;
೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
೧೯೩೭: ಸಖೀಗೀತ;
೧೯೩೮: ಉಯ್ಯಾಲೆ;
೧೯೩೮: ನಾದಲೀಲೆ;
೧೯೪೩: ಮೇಘದೂತ (ಕಾಳಿದಾಸನ ಸಂಸ್ಕೃತ ಮೇಘದೂತದ ಕನ್ನಡ ಅವತರಣಿಕೆ)
೧೯೪೬: ಹಾಡುಪಾಡು;
೧೯೫೧: ಗಂಗಾವತರಣ;
೧೯೫೬: ಸೂರ್ಯಪಾನ;
೧೯೫೬: ಹೃದಯಸಮುದ್ರ;
೧೯೫೬: ಮುಕ್ತಕಂಠ;
೧೯೫೭: ಚೈತ್ಯಾಲಯ;
೧೯೫೭: ಜೀವಲಹರಿ;
೧೯೫೭: ಅರಳು ಮರಳು;
೧೯೫೮: ನಮನ;
೧೯೫೯: ಸಂಚಯ;
೧೯೬೦: ಉತ್ತರಾಯಣ;
೧೯೬೧: ಮುಗಿಲಮಲ್ಲಿಗೆ;
೧೯೬೨: ಯಕ್ಷ ಯಕ್ಷಿ;
೧೯೬೪: ನಾಕುತಂತಿ;
೧೯೬೬: ಮರ್ಯಾದೆ;
೧೯೬೮: ಶ್ರೀಮಾತಾ;
೧೯೬೯: ಬಾ ಹತ್ತರ;
೧೯೭೦: ಇದು ನಭೋವಾಣಿ;
೧೯೭೨: ವಿನಯ;
೧೯೭೩: ಮತ್ತೆ ಶ್ರಾವಣಾ ಬಂತು;
೧೯೭೭: ಒಲವೇ ನಮ್ಮ ಬದುಕು;
೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
೧೯೮೨: ಪರಾಕಿ;
೧೯೮೨: ಕಾವ್ಯವೈಖರಿ;
೧೯೮೩: ತಾ ಲೆಕ್ಕಣಕಿ ತಾ ದೌತಿ;
೧೯೮೩: ಬಾಲಬೋಧೆ;
೧೯೮೬: ಚೈತನ್ಯದ ಪೂಜೆ;
೧೯೮೭: ಪ್ರತಿಬಿಂಬಗಳು;
ವಿಮರ್ಶೆ
೧೯೪೦: ಸಾಹಿತ್ಯಸಂಶೋಧನೆ;
೧೯೪೫: ವಿಚಾರ ಮಂಜರಿ;
೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;
೧೯೫೯: ಮಹಾರಾಷ್ಟ್ರ ಸಾಹಿತ್ಯ;
ಸಾಯೋ ಆಟ (ನಾಟಕ)
೧೯೬೨: ಕಾವ್ಯೋದ್ಯೋಗ;
೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;
೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;
೧೯೭೬: ಕುಮಾರವ್ಯಾಸ ಪುಸ್ತಿಕೆ;
ಪ್ರಶಸ್ತಿ, ಪುರಸ್ಕಾರ, ಬಿರುದು

೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ.[೩]
೧೯೫೮ರಲ್ಲಿ ‘ಅರಳು ಮರಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
೧೯೬೪ರ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರಿಗೆ ಸನ್ಮಾನ
೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ “ಸಂವಾದ” ಎಂಬ ಕೃತಿಗೆ ಕೇಳ್ಕರ್ ಬಹುಮಾನ
೧೯೬೮ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಲಭಿಸಿತು
೧೯೭೩ರಲ್ಲಿ ‘ನಾಕುತಂತಿ’ ಕೃತಿಗೆ ಜ್ಞಾನಪೀಠಪ್ರಶಸ್ತಿ
ಕಾಶಿ ವಿದ್ಯಾಪೀಠ, ವಾರಣಾಸಿ, ಮೈಸೂರು ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯಗಳ ಗೌರವ ಡಾಕ್ಟರೇಟ್
ಕೇಂದ್ರ ಸಾಹಿತ್ಯ ಅಕಾಡೆಮಿಯ ಫೆಲೋಷಿಪ್ ಪಡೆದರು.